Headlines

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ

ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.

ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ.

ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಗೆ ಆಯ್ಕೆ :

ತೀರ್ಥಹಳ್ಳಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗರ್ತಿಕೆರೆಯ ಮೊಹಮ್ಮದ್ ನಿಹಾಲ್ ಆಯ್ಕೆಯಾಗಿದ್ದಾರೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಡಿಪಿ ಸದಸ್ಯ ಪೂರ್ಣೇಶ್ ಕೆಳಕೆರೆ ಆಯ್ಕೆಯಾಗಿದ್ದಾರೆ. ಎದುರಾಳಿ ಸಂದೀಪ್ ಗೌಡ ವಿರುದ್ಧ 4637 ಮತ ಪಡೆದು ವಿಜಯಶಾಲಿಯಾಗಿದ್ದಾರೆ.

ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾದಿಗಲ್ಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ, ಗ್ರಾಮ ಪಂಚಾಯತಿ ಒಕ್ಕೂಟದ ಉಪಾಧ್ಯಕ್ಷ ರವಿಕುಮಾರ್ ಎಚ್.ಡಿ. ಆಯ್ಕೆಯಾಗಿದ್ದಾರೆ.ಎದುರಾಳಿ ಗಗನ್ ಕುಮಾರ್ ವಿರುದ್ಧ 2623 ಮತ ಪಡೆದು ವಿಜಯಶಾಲಿಯಾಗಿದ್ದಾರೆ.

ನಗರ ಬ್ಲಾಕ್ ಅಧ್ಯಕ್ಷರಾಗಿ ಯುವ ಮುಖಂಡ ಶ್ರೇಯಸ್ ಎಸ್. ರಾವ್ ಆಯ್ಕೆಯಾಗಿದ್ದಾರೆ. ಎದುರಾಳಿ ಪ್ರವೀಣ್ ಎ ವಿರುದ್ಧ 542 ಮತ ಪಡೆದು ವಿಜಯಶಾಲಿಯಾಗಿದ್ದಾರೆ.

Leave a Reply

Your email address will not be published. Required fields are marked *