Headlines

Shikaripura | ಹೋರಿ ಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

Shikaripura | ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. 

ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿದ ಪರಿಣಾಮ ತೀವ್ರ ಗಾಯಗೊಂಡಿದ್ದ.

ತೀವ್ರ ಗಾಯಗೊಂಡಿದ್ದ ಪುನೀತ್ ರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕೊಂಡೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *