ಫೆ. 16 ರಂದು ಕವಲೇದುರ್ಗ ಮಠದಲ್ಲಿ ಶ್ರೀಮರುಳಸಿದ್ದೇಶ್ವರ ಶಿವಯೋಗ ಮಂದಿರ ಲೋಕಾರ್ಪಣೆ ಮತ್ತು ಧರ್ಮ ಸಮಾರಂಭ
ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭವನಗಿರಿ ಸಂಸ್ಥಾನ ಮಠದಲ್ಲಿ ನೂತನವಾಗಿ ಶ್ರೀವೀರಭದ್ರಸ್ವಾಮಿ ಮತ್ತು ದುರ್ಗಾಂಬಿಕಾ ಅಷ್ಟಬಂಧ ಪ್ರಾಣ ಪ್ರತಿಷ್ಟೆ ಹಾಗೂ ಶ್ರೀ ಮರುಳಸಿದ್ದೇಶ್ವರ ಶಿವಯೋಗ ಮಂದಿರದ ಲೋಕಾರ್ಪಣೆ ಮತ್ತು ಬ್ರಹ್ಮಕಲಶಾರೋಹಣ ಧರ್ಮ ಸಮಾರಂಭವು ಫೆಬ್ರವರಿ 16 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶ್ರೀಮದ್ ಉಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರವರ ದಿವ್ಯ ಸಾನಿಧ್ಯದಲ್ಲಿ ಏರ್ಪಡಿಸಲಾಗಿದೆ ಎಂದು ಕವಲೇದುರ್ಗ ಭುವನಗಿರಿ ಮಠದ ಮರುಳಸಿದ್ದ ಶಿವಾಚಾರ್ಯ ಸ್ವಾಮಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂತರ ಧರ್ಮಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀಮದ್ ಉಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರವರು ವಹಿಸಿ ಆಶೀರ್ವಚನ ನೀಡುವರು.
ಮಳಲಿಮಠದ ಗುರುನಾಗಭೂಷಣ ಶಿವಾಚಾರ್ಯರ ಸ್ವಾಮಿಜಿ ಮತ್ತು ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹಾಗೂ ಕವಲೇದುರ್ಗ ಮಹಾಮಹತ್ತಿನ ಸಂಸ್ಥಾನ ಮಠದ ಮರಳುಸಿದ್ದ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು.
ಧರ್ಮಸಮಾರಂಭ ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸುವರು.
ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಮಾರಂಭದ ಆಧ್ಯಕ್ಷತೆ ವಹಿಸುವರು.
ಪತ್ರಿಕಾ ವರದಿಗಾರ ಅಂಕಣಕಾರ ಆರ್.ಎಸ್.ಪ್ರಶಾಂತ ಪ್ರಾಸ್ತಾವಿಕವಾಗಿ ಮಾತನಾಡುವರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಆಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಕವಲೇದುರ್ಗ ಬಹು ಉದ್ದೇಶಿ ಸೌಹಾರ್ಧ ಪತ್ತಿನ ಸಹಕಾರ ಬ್ಯಾಂಕ್ ಆಧ್ಯಕ್ಷ ಕಟ್ಟೆಗದ್ದೆ ಹಾಲಪ್ಪಗೌಡರು, ಹೊಸಕೋಟೆ ಹಾಲಪ್ಪಗೌಡರು ಹರತಾಳು, ಕೋಣಂದೂರು ಲತಾ ಕೆ.ಆರ್.ಪ್ರಕಾಶ್ ಮುಖ್ಯ ಆತಿಥಿಗಳಾಗಿ ಭಾಗವಹಿಸುವರು ಎಂದು ಮಠದ ಪ್ರಕಟಣೆ ತಿಳಿಸಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್