w
Headlines
Home » ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು ತಿಳಿಸಲಾಗಿತ್ತು ಆದರೆ ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿಂದ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಹೊಸನಗರ ತಾಲೂಕಿನಲ್ಲಿಯೂ ಶನಿವಾರ ರಜೆ ಘೋಷಿಸಲಾಗಿದೆ.

ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸತತವಾಗಿ ರಜೆ ಘೋಷಿಸಲಾಗಿತ್ತು.

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ನಾಳೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.