ಮೈಸೂರು – ತಾಳಗುಪ್ಪ ರೈಲು ಅರಸಾಳು ಮತ್ತು ಕುಂಸಿಯಲ್ಲಿ ನಿಲುಗಡೆ ಮುಂದುವರಿಕೆ
ಶಿವಮೊಗ್ಗ ಜಿಲ್ಲೆಯ ಅರಸಾಳು ಮತ್ತು ಕುಂಸಿಯಲ್ಲಿ ಮೈಸೂರು-ತಾಳಗುಪ್ಪ ರೈಲಿಗೆ ತಾತ್ಕಾಲಿಕ ನಿಲುಗಡೆ ಮುಂದುವರೆಸಲಾಗಿದೆ.
ನೈಋತ್ಯ ರೈಲ್ವೆಯು ಮೈಸೂರು-ತಾಳಗುಪ್ಪ ಮಾರ್ಗದ ಪ್ರಯಾಣಿಕರ ಅನುಕೂಲಕ್ಕಾಗಿ, ಈ ಕೆಳಗಿನ ರೈಲುಗಳಿಗೆ ಅರಸಾಳು ಮತ್ತು ಕುಂಸಿ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯ ಅವಕಾಶವನ್ನು ಮುಂದುವರೆಸಲಾಗಿದೆ.
ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಫೆ. 24ರಿಂದ 23.08.2025 ರ ಆ. 23ವರೆಗೆ ಜಾರಿಯಾಗುವಂತೆ ಮುಂದುವರಿಸಲಾಗಿದೆ.
ಮೈಸೂರು-ತಾಳಗುಪ್ಪ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಈ ಹಿಂದೆ ಅರಸಾಳು ಮತ್ತು ಕುಂಸಿ ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿತ್ತು, ಈ ಸೌಲಭ್ಯವನ್ನು ಸಹ ಮೇಲಿನಂತೆಯೇ ಮುಂದುವರಿಸಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply