ಭೀಕರ ಅಪಘಾತ – ಲಾರಿ ಅಡಿಯಲ್ಲಿ ಸಿಲುಕಿದ ಬೈಕ್ ಸವಾರರು ,ಓರ್ವ ಸಾವು ಇನ್ನೊಬ್ಬನ ಸ್ಥಿತಿ ಗಂಭೀರ
ಲಾರಿ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ನಡೆದಿದೆ.
ಬಾಗಲಕೋಟೆಯಿಂದ ಇಬ್ಬರು ಯುವಕರು ತೀರ್ಥಹಳ್ಳಿ ಮಾರ್ಗದಲ್ಲಿ ಚಲಿಸುತ್ತಿದ್ದರು. ವೇಳೆ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಈ ಹಿನ್ನಲೆ ಬೈಕ್ ಲಾರಿಯ ಚಕ್ರಕ್ಕೆ ಸಿಲುಕಿದ್ದು ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರೀಶೀಲನೆ ನಡೆಸುತ್ತಿದ್ದಾರೆ.
ಯುವಕರ ಹಿನ್ನಲೆ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.