ಆಕಸ್ಮಿಕವಾಗಿ ವಿದ್ಯುತ್ ತಗುಲಿ ರಿಪ್ಪನ್‌ಪೇಟೆಯ ಯುವಕ ಸಾವು
ರಿಪ್ಪನ್‌ಪೇಟೆ : ಆಕಸ್ಮಿಕವಾಗಿ ವಿದ್ಯುತ್ ತಗುಲಿ ಲೈನ್ ದುರಸ್ತಿ ಮಾಡುತಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಮೀಪದ ಬಿಳಿಕಿ ಗ್ರಾಮದಲ್ಲಿ ನಡೆದಿದೆ.
ಗಾಜೀನಗೋಡು ಗ್ರಾಮದ ಕೇಶವ್(28) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ.
ಬಿಳಿಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ಥಿ ಮಾಡುತಿದ್ದ ಕಾರ್ಮಿಕ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಮೃತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.