ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ
ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ.
ಈ ಪ್ರಶಸ್ತಿಯನ್ನು ವಾರ್ಷಿಕ ಮಹಾರಥಯಾತ್ರಾ ಮಹೋತ್ಸವದ ಮುನ್ನಾ ದಿನವಾದ 21-03-2025ನೇ ಶುಕ್ರವಾರದಂದು ನಡೆಯುವ ಧಾರ್ಮಿಕ ಸಭೆಯಲ್ಲಿ ನೀಡಲಾಗುವುದು. ಇವರು ಕವಯತ್ರಿ, ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ, ದಕ್ಷ ಆಡಳಿತಗಾರ್ತಿ, ವಿಮರ್ಶಕಿ ಹಾಗೂ ಮಹಿಳಾಪರ ಹೋರಾಟಗಾರ್ತಿ ಆಗಿ ಬಹುಮುಖ ಸಾಧಕರಾಗಿದ್ದಾರೆ. ಗ್ರಂಥರಚನೆ, ಗ್ರಂಥ ಸಂಪಾದನೆ, ಉಪನ್ಯಾಸ, ಇನ್ನಿತರ ಕಾರ್ಯಗಳಲ್ಲಿ ವಿಶೇಷ ಅನುಭವ ಹೊಂದಿರುತ್ತಾರೆ.
ಎಂ.ಎ., ಪಿಎಚ್.ಡಿ. ಜೈನಾಲಜಿ ಸ್ನಾತಕೋತ್ತರ ಡಿಪ್ಲೋಮಾ ಶಾಸನಶಾಸ್ತç ಸ್ನಾತಕೋತ್ತರ ಡಿಪ್ಲೋಮಾದಲ್ಲಿ ಪ್ರಥಮ ರ‍್ಯಾಂಕ್ ಹಾಗೂ ಚಿನ್ನದ ಪದಕ ಪಡೆದ ಇವರು ಉನ್ನತ ಪದವೀದರರಾಗಿ ಮೈಸೂರು ಜೈನಶಾಸ್ತ ಮತ್ತು ಪ್ರಾಕೃತ ವಿಭಾಗ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಪ್ರಾಧ್ಯಾಪಕ ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಿವೃತ್ತಿಯ ನಂತರ ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಹಾಗೂ ಮೈಸೂರು ವಿ.ವಿ. ಪ್ರಾಕೃತ ಮತ್ತು ಜೈನ ಶಾಸ್ತç ಅಧ್ಯಯನ ವಿಭಾಗದ ವಿಭಾಗಾಧ್ಯಕ್ಷರಾಗಿ ನೇಮಕಗೊಂಡು ಸಮರ್ಥವಾಗಿ ಸೇವೆ ಸಲ್ಲಿಸಿರುತ್ತಾರೆ.
ಕನ್ನಡ, ಸಂಸ್ಕೃತ, ಇಂಗ್ಲೀಷ್, ಪ್ರಾಕೃತ ಭಾಷೆ ಮತ್ತು ಜೈನ ಸಾಹಿತ್ಯವನ್ನು ಕುರಿತಂತೆ ವಿಶೇಷವಾದ ಅಧ್ಯಯನ ಮತ್ತು ಅಧ್ಯಾಪನಾ ನಡೆಸಿ ಸಾಹಿತ್ಯ ಕೃಷಿ ವಿಮರ್ಶೆ, ಸಂಶೋಧನೆ, ಕಾವ್ಯ ಜೀವನ ಚರಿತ್ರೆ ಸೇರಿದಂತೆ ಬಹು ಸಾಹಿತ್ಯಿಕ ಪ್ರಕಾರಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಇವರ ಮುಂದಾಳತ್ವದಲ್ಲಿ ಸುಮಾರು 6000ಕ್ಕೂ ಹೆಚ್ಚು ಪ್ರಾಚೀನ ತಾಳಪತ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ.
ಪಿಎಚ್.ಡಿ ಸಂಶೋಧಕರಿಗೆ ಮಾರ್ಗದರ್ಶಕರಾಗಿ ಜೈನ ಸಾಹಿತ್ಯ, ಕನ್ನಡ ಸಾಹಿತ್ಯ, ಜಾನಪದ ಸಾಹಿತ್ಯಕ್ಕೆ ವಿಶೇಷ ಕೊಡುಗೆಯನ್ನು ನೀಡಿದ ಇವರು ಹಲವಾರು ಪ್ರಬಂಧಗಳನ್ನು ಮಂಡಿಸಿದ್ದಾರೆ.
ಇವರ ಸಾಹಿತ್ಯ ಸೇವೆಗೆ ಹಲವಾರು ಪ್ರಶಸ್ತಿ ಪುರಸ್ಕಾರ, ಗೌರವಗಳು ಸಂದಿವೆ. ಅವುಗಳಲ್ಲಿ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ವಿಠಲಾನುಗ್ರಹ ಪ್ರಶಸ್ತಿ, ಚಾವುಂಡರಾಯ ಪ್ರಶಸ್ತಿ, ಆದರ್ಶ ಮಹಿಳಾ ರಾಷ್ಟಿçÃಯ ಪುರಸ್ಕಾರಗಳು ಸಂದಿವೆ. ಇತ್ತೀಚೆಗೆ 2024ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ಸಹ ಇವರಿಗೆ ಲಭಿಸಿದೆ.
ಹೊಂಬುಜ ಜೈನ ಮಠದಿಂದ ನೀಡುವ ಸಿದ್ದಾಂತಕೀರ್ತಿ ಪ್ರಶಸ್ತಿಯು ರೂ. 51,000 ಗಳ ನಗದು ಮತ್ತು ಅಂಗವಸ್ತç ಸಹಿತ ನೀಡಿ ಗೌರವಿಸಲಾಗುವುದು. ಇದುವರೆಗೂ ಅನೇಕ ವಿದ್ವಾಂಸರಿಗೆ ಈ ಪ್ರಶಸ್ತಿಯನ್ನು ಸುಮಾರು 5 ದಶಕಗಳಿಂದ ಶ್ರೀಮಠದಿಂದ