ಇಲಿ ಪಾಶಾಣ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – ಸಾವಿಗೆ ಕಾರಣವಾಯ್ತಾ ಪ್ರೇಮ್ ಕಹಾನಿ
ಶಿವಮೊಗ್ಗ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕನ ಆತ್ಮಹತ್ಯೆಯ ಹಿಂದೆ ಪ್ರೇಮ್ ಕಹಾನಿ ಇದೆ ಎಂದು ಹೇಳಲಾಗುತ್ತಿದೆ.
ಕುಂಚೇನಹಳ್ಳಿಯ ಕಲ್ಲಾಪುರದ ನಿವಾಸಿ ಸಂಜು (9) ಇಲಿ ಪಾಷಣ ಸೇವಿಸಿ ಆತ್ಮಹತ್ಯೆಯಾಗಿದ್ದಾನೆ. ಇಲಿ ಪಾಶಾಣ ಸೇವಿಸಿ 10 ದಿನಗಳಾಗಿದ್ದು ನಿನ್ನೆ ಮೆಗ್ಗಾನ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾನೆ.
ಇಲಿ ಸೇವಿಸಿದ ಎರಡು ದಿನಗಳ ವರೆಗೆ ಸಂಜು ಆರಾಮಾಗಿದ್ದರು. ನಂತರ ಆರೋಗ್ಯ ಉಲ್ಬಣಗೊಂಡಿದೆ. ಉಲ್ಬಣಗೊಂಡ ನಂತರ ಯುವಕನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ಬೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾನೆ. ಆತನ ಆತ್ಮಹತ್ಯೆಗೆ ಪ್ರೀತಿ ಕಾರಣ ಎಂದು ಹೇಳಲಾಗುತ್ತಿದೆ.
ಪ್ರಕರಣ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆತನ ಇತ್ತೀಚಿನ ರೀಲ್ಸ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್