POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

Screenshot 20250404 200921 Chrome.jpg

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ನಾಗೋಡಿ ಗ್ರಾಮದ ನಿವಾಸಿ ಅಜಿತ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ.

ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆಯ ಹಿನ್ನಲೆ :

ಗುರುವಾರ ಮಧ್ಯಾಹ್ನ ನಗರ ಪಿಎಸೈ ಶಿವಾನಂದ ಕೆ ಹಾಗೂ ಸಿಬ್ಬಂದಿಗಳು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವನನ್ನು ಕಂಡು ಆತನ ಬಳಿ ಹೋಗಿ ಆತನನ್ನು ವಿಚಾರಿಸಿದ್ದಾರೆ.

ಈ ಸಮಯದಲ್ಲಿ ಆರೋಪಿಯ ಮಾತು ತೊದಲುತ್ತಿದ್ದು, ಬಾಯಿಯಿಂದ ಅಮಲು ಪದಾರ್ಥ ಸೇದಿದ ವಾಸನೆ ಬರುತ್ತಿದ್ದರಿಂದ, ಆತನನ್ನು ಕೂಲಂಕುಷವಾಗಿ ವಿಚಾರಸಿದಾಗ ಆತನು ಬೀಡಿ ಜೊತೆ ಗಾಂಜಾ ಸೇರಿಸಿ ಸೇದಿದ ಬಗ್ಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. 

ಕೂಡಲೇ  ಆತನನ್ನು ವೈದ್ಯಕೀಯ ತಪಾಸಣೆ ನಡೆಸಿದಾಗ ಆತನು ಗಾಂಜಾ ಸೇವನೆ ಮಾಡಿರುವ ಬಗ್ಗೆ ವೈದಕೀಯ ಪರೀಕ್ಷೆಯಿಂದ ದೃಡಪಟ್ಟಿರುವುದರಿಂದ ಈತನ ವಿರುದ್ಧ ಮಾದಕ ದ್ರವ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.