ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟೆಷ್ಟು ಮಳೆ , ಇಲ್ಲಿದೆ ಮಾಹಿತಿ
ಶಿವಮೊಗ್ಗ(Shivamogga) ಜಿಲ್ಲಾದ್ಯಂತ ಕಳೆದ ಐದಾರು ದಿನಗಳಿಂದ ಧಾರಾಕಾರವಾಗಿ ವರುಣ ಅಬ್ಬರಿಸುತ್ತಿದ್ದು ಅದರಲ್ಲೂ ಹೊಸನಗರ, ತೀರ್ಥಹಳ್ಳಿ, ಸಾಗರ ತಾಲೂಕಿನಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಾಗಿದೆ.
ಇನ್ನೂ ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ಎಂದು ಇಲ್ಲಿ ಕೊಡಲಾಗಿದೆ.
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ? (M.M.)
ಬಿದನೂರುನಗರ (ಹೊಸನಗರ) : 250
ಚಕ್ರಾನಗರ (ಹೊಸನಗರ) : 210
ಸೊನಲೆ (ಹೊಸನಗರ) : 195
ನೊಣಬೂರು (ತೀರ್ಥಹಳ್ಳಿ) : 172
ಮಾಸ್ತಿಕಟ್ಟೆ (ಹೊಸನಗರ) : 165
ಹುಲಿಕಲ್ (ಹೊಸನಗರ) : 158
ಹುಂಚ (ಹೊಸನಗರ) : 156
ಮೇಲಿನಬೆಸಿಗೆ (ಹೊಸನಗರ) : 132
ಹೊಸೂರು-ಸಂಪೆಕಟ್ಟೆ (ಹೊಸನಗರ) : 130
ಸುಳಗೋಡು (ಹೊಸನಗರ) : 126.5
ಹಾದಿಗಲ್ಲು (ತೀರ್ಥಹಳ್ಳಿ) : 124.5
ಯಡೂರು (ಹೊಸನಗರ) : 124
ಮಾರುತಿಪುರ (ಹೊಸನಗರ) : 123
ಕಂಡಿಕಾ (ಸಾಗರ) : 118.5
ಕಲ್ಮನೆ (ಸಾಗರ) : 116
ಕಾರ್ಗಲ್ (ಸಾಗರ) : 116
ಬೆನ್ನೂರು (ಸೊರಬ) : 115.5
ಮಾಣಿ (ಹೊಸನಗರ) : 110
ಸಾವೇಹಕ್ಲು (ಹೊಸನಗರ) : 106
ಹೊಸನಗರ (ಹೊಸನಗರ) : 92.4
ಅರಸಾಳು (ಹೊಸನಗರ) : 75
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗುರುವಾರ ಬೆಳಿಗ್ಗೆ 8:00 ಗಂಟೆಗೆ 1787.80 ಅಡಿ ತಲುಪಿದ್ದು ಜಲಾಶಯಕ್ಕೆ 69226 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೆ ಅವಧಿಗೆ 1757.30 ಅಡಿ ನೀರು ಸಂಗ್ರಹವಾಗಿದ್ದು, ಕಳೆದ ಬಾರಿಗಿಂತ ಈ ಬಾರಿ 32 ಅಡಿ ಹೆಚ್ಚಿನ ನೀರು ಸಂಗ್ರಹವಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply