ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ
ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.
ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ.
ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ ಬಿಎಲ್ಡಿಇ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅಜೀತ್ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಇನ್ನು ಘಟನೆಗೆ ಕಾರಣ ಪತ್ನಿ ತೇಜುಗೆ ಬುದ್ದಿಮಾತು ಹೇಳಿದ್ದೇ ಅಜೀತ್ ಪ್ರಾಣಕ್ಕೆ ಸಂಚಕಾರ ತಂದಿದೆ ಎನ್ನಲಾಗಿದೆ. ಸದಾಕಾಲ ಮೊಬೈಲ್ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದ ತೇಜುಗೆ ಚಾಟ್ ಮಾಡಬೇಡ ಬುದ್ದಿ ಮಾತು ಹೇಳಿದ್ದಕ್ಕೆ ಪತಿ ಅಜೀತ್ ಮೇಲೆ ಸಿಟ್ಟಾಗಿ ಇಂತ ದುಸ್ಸಾಹಸ ಮಾಡಿದ್ದಾಳೆ.
ಸದ್ಯ ಸ್ಥಳಕ್ಕೆ ಡಿವೈಎಸ್ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆದರ್ಶನಗರ ಪೊಲೀಸರು ತೇಜುಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆ ಇದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್