ಆಸ್ತಿಗಾಗಿ ಮಚ್ಚು, ದೊಣ್ಣೆಯಿಂದ ಸ್ವಂತ ಮಾವನ ಮೇಲೆಯೇ ಸೊಸೆ ಅಟ್ಯಾಕ್!

ಆಸ್ತಿ ವಿಚಾರಕ್ಕೆ ಸ್ವಂತ ಮಾನವ ಮೇಲೆಯೇ ಸೊಸೆಯೋರ್ವಳು ಕೆಲ ಗೂಂಡಾಗಳೊಂದಿಗೆ ಆಗಮಿಸಿ ಲಾಂಗ್ ಮಚ್ಚು, ದೊಣ್ಣೆಯಿಂದ ಅಟ್ಯಾಕ್ ಮಾಡಿರುವ ಘಟನೆ ಬೆಂಗಳೂರಿನ ಮಹದೇವಪುರ ವ್ಯಾಪ್ತಿಯಲ್ಲಿ ನಡೆದಿದೆ.
ಶೃತಿ ಎಂಬ ಸೊಸೆ ಐದಾರು ಜನರ ಗುಂಪುಕಟ್ಟಿಕೊಂಡು ಮಾವ ಪ್ರಭು ಎಂಬುವವರ ಮನೆಗೆ ಬಂದು ಹಲ್ಲೆಗೆ ಯತ್ನಿಸಿರುವ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮನೆ ಬಾಗಿಲು, ಕಿಟಕಿಯನ್ನು ದೊಣ್ಣೆ ಮಚ್ಚಿನಿಂದ ಹೊಡೆದು ಹಾನಿ ಮಾಡಿರುವುದು ಥೇಟ್ ಸಿನಿಮೀಯ ರೀತಿಯಲ್ಲಿ ಕೃತ್ಯ ಎಸಗಲಾಗಿದೆ. ಮಹದೇವಪುರ ಬಿಬಿಎಂಪಿ ಆಫೀಸ್‌ನಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಶೃತಿ ಕೆಲಸ ಮಾಡುತ್ತಿದ್ದಾರಂತೆ.
ಕೊಡಿಗೆಹಳ್ಳಿಯಲ್ಲಿರುವ ಸರ್ವೆ 20/1 3 ಎಕರೆ 38 ಗುಂಟೆ ಜಾಗವಿದ್ದು, ಇದು ದಾಳಿಗೆ ಒಳಗಾದ ಪಾಪಯ್ಯ ಪ್ರಭು ಅವರ ಅಜ್ಜನ ಆಸ್ತಿ. ಇದೇ ವಿಚಾರಕ್ಕೆ ಪ್ರಭು ಹಾಗೂ ಶೃತಿ ತಾಯಿ ವಜ್ರಮ್ಮ ನಡುವೆ ಗಲಾಟೆ ನಡೆದಿತ್ತು. ಸದ್ಯ ಈ ಆಸ್ತಿ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಕೇಸ್ ಕ್ಲೀಯರ್ ಆದಮೇಲೆ ದುಡ್ಡು ಕೊಡುವುದಾಗಿ ಪ್ರಭು ಅವರು ಹೇಳಿದ್ದರೂ, ದುಡ್ಡು ಕೊಟ್ಟಿಲ್ಲ ಅಂದ್ರೆ ಬಿಡಲ್ಲ ಎಂದು ಧಮ್ಕಿ ಹಾಕಲು ಶೃತಿ ಈ ದಾಳಿ ನಡೆಸಿದ್ದಾರೆಂಬ ಆರೋಪವಿದೆ.
ದಾಳಿ ವೇಳೆ ಪ್ರಭು ಕುಟುಂಬಸ್ಥರು ಮನೆಯ ಡೋರ್ ಲಾಕ್ ಮಾಡಿಕೊಂಡು ಬಚಾವ್ ಆಗಿದ್ದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಶೃತಿ & ಗ್ಯಾಂಗ್ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಸದ್ಯ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್