ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station
ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ.
ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಸ್ಥಳಕ್ಕೆ ರೈಲ್ವೆ ಇಲಾಖೆಯ ಸಿಬ್ಬಂದಿಗಳು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.