ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain
ರಿಪ್ಪನ್‌ಪೇಟೆ : ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರಿ ಮಳೆಯಿಂದ ಹಲವಾರು ಅವಘಡಗಳು ಸಂಭವಿಸಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತುಲ ಗ್ರಾಮದ ಜನ್ನಂಗೆ ಹೊಳೆ ತುಂಬಿ ಮುಖ್ಯ ಹಾಗೂ ನಂಜವಳ್ಳಿ ಸಂಪರ್ಕ ಕಡಿತಗೊಂಡಿತ್ತು ಹಾಗೂ ಅಕ್ಕ ಪಕ್ಕದ ಜಮೀನು ತೋಟಗಳಿಗೆ ನೀರು ನುಗ್ಗಿ ಹಾನಿ ಉಂಟಾಗಿತ್ತು ತಹಶೀಲ್ದಾರ್ ರಶ್ಮಿ ಹಾಲೇಶ್ ಕೂಡಲೇ ತುರ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.
ಹೊಸಳ್ಳಿ ಗ್ರಾಮದ ಕೃಷ್ಣಪ್ಪ ಎಂಬುವರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿದ್ದು ಕೃಷ್ಣಪ್ಪ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದ್ದಾರೆ.
ಈ ಸಂಧರ್ಭದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು , ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರ ಮೌಳಿ, ಗ್ರಾಮ ಪಂಚಾಯತಿ ಸದಸ್ಯರಾದ ಭದ್ರಪ್ಪಗೌಡ ಕೃಷ್ಣಪ್ಪ ಹಾಗೂ ಪಂಚಾಯತಿ ಪಿಡಿಒ ಕಾರ್ಯದರ್ಶಿ ಇದ್ದರು.