Headlines

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ


ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ನಡೆದಿದೆ.


ಮಹೀಂದ್ರಾ XYLO ಕಾರಿನಲ್ಲಿ ಐವರು ಪ್ರಯಾಣಿಸುತಿದ್ದು ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ.

ಭದ್ರಾವತಿ ಮೂಲದವರು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಬಂದು ಕುರಿ ಹರಕೆ ಸಲ್ಲಿಸಿ ಊಟ ಮುಗಿಸಿಕೊಂಡು ಹಿಂದಿರುಗುವಾಗ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ.

ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ ಕಾರು ಮೂರು ಪಲ್ಟಿಯಾಗಿ ಉರುಳಿ ಬಿದ್ದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸುತಿದ್ದಾರೆ.

About The Author

Leave a Reply

Your email address will not be published. Required fields are marked *