ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ
HOSANAGARA | ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ.
ಪ್ರತಿವರ್ಷ ದುಲ್-ಅಜ್-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್-ಉಲ್-ಅಧಾ ಅಂದರೆ ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು ಕಳೂರು ಜುಮ್ಮಾ ಮಸೀದಿ (ಜಾಮಿಯಾ ಮಸೀದಿ) ಹೊಸನಗರದ ಧರ್ಮಗುರುಗಳಾದ ಮುಫ್ತಿ ಮೊಹಮ್ಮದ್ ಇಂತಿಯಾಝ್ ಬಕ್ರೀದ್ ಹಬ್ಬದಂದು ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು.
ಹೊಸನಗರದ ಜಾಮಿಯಾ ಮಸೀದಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಬಕ್ರೀದ್ ಹಬ್ಬದ ವಿಶೇಷ ನಮಾಜ್ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದಿನವನ್ನು ಹಜ್ರತ್ ಇಬ್ರಾಹಿಂ ಮತ್ತು ಇಸ್ಮಾಯಿಲ್ ರವರ ಬಲಿದಾನದ ಸಂಕೇತವಾಗಿ ಆಚರಿಸಲಾಗುತ್ತದೆ ಎಂದರು.
ಕಮಿಟಿಯ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಹಿರಿಯರು, ಯುವಕರು ಮತ್ತು ಮಕ್ಕಳು ಪರಸ್ಪರ ಆಲಿಂಗನ ಮಾಡುವುದರ ಮೂಲಕ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್
Leave a Reply