ಹನಿಮೂನ್ಗೆ ಹೋದವ ಹೆಣವಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಕೊಲೆ ಹಿಂದೆ ಪತ್ನಿ ಕೈವಾಡ, ಮೂವರ ಬಂಧನ
ಜೂನ್ 09: ಮೇಘಾಲಯಕ್ಕೆ ಹನಿಮೂನ್ಗೆಂದು ತೆರಳಿ ದಂಪತಿ ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ. ಒಂದೆಡೆ ರಾಜಾ ರಘುವಂಶಿ ಕೊಲೆಯಾಗಿದೆ. ಮತ್ತೊಂದೆಡೆ ಹಲವು ದಿನಗಳಿಂದ ನಾಪತ್ತೆಯಾಗಿದ್ದ ಸೋನಮ್ ರಘುವಂಶಿ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ.
ಕಳೆದ 17 ದಿನಗಳಿಂದ ಪೊಲೀಸರು ಮೇಘಾಲಯದಲ್ಲಿ ಸೋನಮ್‌ಗಾಗಿ ಹುಡುಕಾಟ ನಡೆಸುತ್ತಿದ್ದರು.
ಸೋನಮ್ ನಿನ್ನೆ ರಾತ್ರಿ ತನ್ನ ಕುಟುಂಬಕ್ಕೆ ಕರೆ ಮಾಡಿ ತಾನು ಯುಪಿಯ ಘಾಜಿಪುರ ಜಿಲ್ಲೆಯಲ್ಲಿದ್ದೇನೆ ಎಂದು ತಿಳಿಸಿದ್ದಾಳೆ. ಸೋನಮ್ ತನ್ನ ಸಹೋದರ ಗೋವಿಂದ್ ರಘುವಂಶಿಗೆ ಪೊಲೀಸರ ಫೋನ್‌ನಿಂದ ಕರೆ ಮಾಡಿದ್ದಾಳೆ.
ರಾಜಾ ಮೃತದೇಹ ಜೂನ್ 2 ರಂದು ಪತ್ತೆಯಾಗಿತ್ತು
ಸೋನಮ್ ತನ್ನ ಪತಿ ರಾಜಾ ಜೊತೆ ಹನಿಮೂನ್ ಆಚರಿಸಲು ಶಿಲ್ಲಾಂಗ್‌ಗೆ ಹೋಗಿದ್ದರು. ಆದರೆ ನಂತರ ಇಬ್ಬರೂ ನಾಪತ್ತೆಯಾಗಿದ್ದರು.ಕುಟುಂಬವು ಪೊಲೀಸರಿಗೆ ದೂರು ನೀಡಿದಾಗ, ದಂಪತಿಗಾಗಿ ಹುಡುಕಾಟ ಪ್ರಾರಂಭವಾಯಿತು. ಜೂನ್ 2 ರಂದು ರಾಜಾ ರಘುವಂಶಿ ಅವರ ಶವ ಪತ್ತೆಯಾಗಿತ್ತು. ಆದರೆ ಸೋನಮ್ ಬಗ್ಗೆ ಯಾವುದೇ ಸುಳಿವು ಇರಲಿಲ್ಲ.
ಒಬ್ಬ ವ್ಯಕ್ತಿಯನ್ನು ಉತ್ತರ ಪ್ರದೇಶದಿಂದ ಮತ್ತು ಇನ್ನಿಬ್ಬರು ಆರೋಪಿಗಳನ್ನು ಇಂದೋರ್‌ನಿಂದ ಬಂಧಿಸಲಾಗಿದೆ. ಸೋನಮ್ ನಂದಗಂಜ್ ಪೊಲೀಸ್ ಠಾಣೆಯಲ್ಲಿ ಶರಣಾದರು ಮತ್ತು ನಂತರ ಅವರನ್ನು ಬಂಧಿಸಲಾಯಿತು.
ನವವಿವಾಹಿತರಾದ ರಾಜಾ ರಘುವಂಶಿ ಮತ್ತು ಅವರ ಪತ್ನಿ ಸೋನಮ್, ಮೇ 23 ರಂದು ಕಾಣೆಯಾಗುವ ಮೊದಲು ಮೇಘಾಲಯದಲ್ಲಿ ತಮ್ಮ ಹನಿಮೂನ್ ಸಮಯದಲ್ಲಿ ಕೆಲವು ಪ್ರದೇಶಗಳಿಗೆ ಭೇಟಿ ನೀಡಿದ್ದರು. ಜೂನ್ 2 ರಂದು ರಾಜಾ ರಘುವಂಶಿ ಅವರ ಮೃತದೇಹ ಪತ್ತೆಯಾಗಿದ್ದರೂ, ಅವರ ಪತ್ನಿಗಾಗಿ ಹುಡುಕಾಟ ನಡೆಯುತ್ತಿತ್ತು. ಈ ಹನಿಮೂನ್ ಕೊಲೆ ಪ್ರಕರಣವನ್ನು ಭೇದಿಸಿದ್ದಕ್ಕಾಗಿ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಪೊಲೀಸರನ್ನು ಶ್ಲಾಘಿಸಿದ್ದಾರೆ.
ಮೇ 11ರಂದು ವೈವಾಹಿಕ ಜೀವಕ್ಕೆ ಕಾಲಿಟ್ಟಿದ್ದ ರಾಜಾ ರಘುವಂಶಿ(29) ಮತ್ತು ಸೋನಮ್ ರಘುವಂಶಿ(25), ಮೇ 20ರಂದು ಹನಿಮೂನ್ ಪಯಣ ಆರಂಭಿಸುತ್ತಾರೆ. ಮೇ 21ರಂದು ಮೇಘಾಲಯದ ರಾಜಧಾನಿ ಶಿಲ್ಲಾಂಗ್‌ನ ಬಾಲಾಜಿ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದಾರೆ.ಮೇ 22ರ ಬೆಳಿಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದ ದಂಪತಿ, ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ(ಚಿರಾಪುಂಜಿ) ತೆರಳುತ್ತಾರೆ.
ಈ ವೇಳೆ ಅವರು ಎರಡು ಲಗೇಜ್ ಬ್ಯಾಗ್ ಅನ್ನು ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25 ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದ ಅವರು ಕೊಠಡಿ ಬೇಕಾದಲ್ಲಿ ಕರೆ ಮಾಡುವುದಾಗಿಯೂ ಹೇಳಿದ್ದರು.
ಮೇ 23: ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ತಂಗುತ್ತಾರೆ. ಆ ವೇಳೆ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡಿರುತ್ತಾರೆ.ಚಕ್ರ ವಾಹನವೊಂದು ಶಿಲ್ಲಾಂಗ್‌ನಿಂದ ಸೊಹ್ರಾಗೆ ಹೋಗುವ ರಸ್ತೆಯ ಕೆಫೆಯೊಂದರ ಬಳಿ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವೀ ಸಾವ್ಡಾಂಗ್ ಜಲಪಾತದ ಕೆಳಗಿನ ಕಮರಿಯಲ್ಲಿ ಶವವಿರುವುದನ್ನು ಡ್ರೋನ್ ಪತ್ತೆ ಮಾಡುತ್ತದೆ. ಅದು ರಾಜ ರಘುವಂಶಿ ಮೃತದೇಹವೆಂದು ಕುಟುಂಬದವರು ಗುರುತಿಸುತ್ತಾರೆ. ಸೋನಮ್‌ಗಾಗಿ ಹುಟುಕಾಟ ಮುಂದುವರೆದಿತ್ತು. ಕೊಲೆಗೆ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಿದೆ.