ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ.

ಬೆಳಗಿನ ಜಾವ 4 ರಿಂದ 5 ಗಂಟೆಯ ಸುಮಾರಿಗೆ ಸಂಸದ ಇ. ತುಕಾರಾಂ, ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್ ಮನೆ ಮೇಲು ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಜೊತೆಗೆ ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ.

ಇಡಿ ಅಧಿಕಾರಿಗಳು ಎಂಟು ತಂಡಗಳಲ್ಲಿ ವಿಭಜನೆಯಾಗಿ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಬಳ್ಳಾರಿ ಚುನಾವಣೆಗೆ 21 ಕೋಟಿ ಹಣವನ್ನು ಬಳಸಿದ ಆರೋಪದಲ್ಲಿ ಸಂಸದ ತುಕಾರಾಂ ಅವರನ್ನು ಇಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಮನೆಯಿಂದ 2 ಕಿ.ಮೀ. ದೂರದಲ್ಲಿ ರಸ್ತೆಗೆ ಬ್ಯಾರಿಕೇಡ್ ಅವಳಡಿಕೆ ಮಾಡಲಾಗಿದೆ.

Leave a Reply

Your email address will not be published. Required fields are marked *