ANANDAPURA | ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಆನಂದಪುರ ಸಮೀಪದ ರೈಲ್ವೆ ಗೇಟ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ರಿಪ್ಪನ ಪೇಟೆ ಯಿಂದ ಆನಂದಪುರ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಆನಂದಪುರದಿಂದ ತೀರ್ಥಹಳ್ಳಿ ಕಡೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು. ತೀರ್ಥಹಳ್ಳಿ ಮೂಲದ ಬೈಕ್ ಸವಾರರಿಗೆ ಸಣ್ಣಪುಟ್ಟ ಗಾಯವಾಗಿದೆ.
ಅಪಘಾತದಲ್ಲಿ ಕಾರು ಹಾಗೂ ಬೈಕ್ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ಆನಂದಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.