Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು.

ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

 ಈಕೆ ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ನಗರ, ಹೊಸನಗರ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣಗೊಂಡಿದ್ದರಿಂದ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿತ್ತು.ಮೂರು ದಿನಗಳ ಕಾಲ ಮೆಗ್ಗಾನ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು ಶುಕ್ರವಾರ ಸಂಜೆ ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಹು ಅಂಗಾಂಶಗಳ ವೈಫಲ್ಯದಿಂದ ಚಿಕಿತ್ಸೆ ಫಲಿಸದೆ ಸೋಮವಾರ ಬೆಳಿಗ್ಗೆ ಅನನ್ಯ ಮೃತಪಟ್ಟಿದ್ದಳು.

ಈ ಸಂಧರ್ಭದಲ್ಲಿ ಮಾಜಿ ತಾಪಂ ಸದಸ್ಯ ಮತ್ತಿಮನೆ ಸುಬ್ರಹ್ಮಣ್ಯ, ಅರಮನೆಕೊಪ್ಪ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಿ. ಟಿ. ಕೃಷ್ಣಮೂರ್ತಿ, ಮಾಮ್ ಕೋಸ್ ನಿರ್ದೇಶಕ ಕೆವಿ ಕೃಷ್ಣಮೂರ್ತಿ, ಹಿರಿಮನೆ ರಾಜೇಶ್, ಕುಕ್ಕೆ ಪ್ರಶಾಂತ್ ಹಾಗೂ ಇನ್ನಿತರರಿದ್ದರು

Leave a Reply

Your email address will not be published. Required fields are marked *