ಶಾಲಾ ವಾಹನಗಳ ದಿಢೀರ್ ತಪಾಸಣೆ –ಸುರಕ್ಷತಾ ನಿಯಮ ಪಾಲನೆಗೆ ಖಡಕ್ ವಾರ್ನಿಂಗ್
ಶಿವಮೊಗ್ಗ ಜೂ. 21: ಶಿವಮೊಗ್ಗ ನಗರದಲ್ಲಿ ಜೂ. 21 ರಂದು ಪೂರ್ವ ಹಾಗೂ ಪಶ್ಚಿಮ ಟ್ರಾಫಿಕ್ ಠಾಣೆಗಳ ಪೊಲೀಸರು, ಖಾಸಗಿ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿ, ಸುರಕ್ಷತಾ ನಿಯಮಗಳ ಪಾಲನೆ ಕುರಿತಂತೆ ಚಾಲಕರಿಗೆ ಖಡಕ್ ಎಚ್ಚರಿಕೆ ನೀಡಿದರು.
‘ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟ್ರಾಫಿಕ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರಾದ್ಯಂತ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಿದರು.
ಪ್ರಮುಖ ವೃತ್ತ, ರಸ್ತೆಗಳಲ್ಲಿ ವಾಹನಗಳ ತಪಾಸಣೆ ನಡೆಸಲಾಗಿದೆ. ನಿಗದಿತ ವೇಗದಲ್ಲಿ ವಾಹನ ಚಲಾಯಿಸಬೇಕು. ಸಂಚಾರಿ ನಿಯಮಗಳ ಸಮರ್ಪಕ ಪಾಲನೆ ಮಾಡಬೇಕು. ಹೆಚ್ಚಿನ ಮಕ್ಕಳನ್ನು ವಾಹನಗಳಲ್ಲಿ ಕೊಂಡೊಯ್ಯಬಾರದು.
ವಾಹನಗಳಿಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ಹೊಂದಿರಬೇಕು. ಇನ್ಸೂರೆನ್ಸ್, ಹೊಗೆ ತಪಾಸಣೆ, ಫಿಟ್ನೆಸ್ ಸರ್ಟಿಫಿಕೇಟ್ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ವಾಹನಗಳ ಚಾಲಕರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.