Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ

Ripponpete | ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ


ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಶಿವಮೊಗ್ಗ ಜಿಲ್ಲೆಯ ಬಿದರಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.


ಆ ನಂತರ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದಲ್ಲಿ ಕೂರಬಾರದು ಎಂಬ ಹಿನ್ನಲೆಯಲ್ಲಿ ಎಲ್ಲಾ ಶಾಲೆಗಳಲ್ಲಿ ಡೆಸ್ಕ್ ಅಳವಡಿಸುವಂತೆ ಸೂಚಿಸಲಾಗಿದ್ದು ಮಕ್ಕಳು ದೇವರ ಸಮಾನ ಅವರಿಗೆ ಸೂಕ್ತ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ರಚಿಸಲು ಉದ್ದೇಶಿಸಿದ್ದು ಅದರಿಂದ ಶಾಲೆ ಏಳಿಗೆಯಲ್ಲಿ ಹಳೇ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರುತ್ತದೆ. ಹೆಚ್ಚುವರಿ ಕೊಠಡಿಗಳ ಬೇಡಿಕೆಗೆ ಸ್ಪಂದಿಸಿದ ಸಚಿವರು ಅತೀ ಶೀಘ್ರದಲ್ಲಿ ಕೊಠಡಿ ನೀಡುವ ಭರವಸೆ ನೀಡಿದರು.

ಶಿಕ್ಷಕರ ನಿಸ್ವಾರ್ಥ ಸೇವೆ, ಶಿಕ್ಷಣ  ಪ್ರೇಮ, ಊರವರ ಸಹಾಯ-ಸಹಕಾರ ಸೇರಿದರೆ ಸರ್ಕಾರಿ ಶಾಲೆಯೊಂದು ಹೇಗೆ ಅಭಿವೃದ್ಧಿ ಪಥದಲ್ಲಿ ಸಾಗಬಹುದು ಎಂಬುದಕ್ಕೆ ಉತ್ತರವಾಗಿ ನಿಲ್ಲುತ್ತದೆ ಬಿದರಹಳ್ಳಿಯ ಈ ಸರ್ಕಾರಿ ಶಾಲೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಲೆಯಲ್ಲಿರುವ ಸೌರಚಾಲಿತ ಪಠ್ಯಾಧಾರಿತ ಸ್ಮಾರ್ಟ್ ಕ್ಲಾಸ್, ಹೈಟೆಕ್ ಶೌಚಾಲಯ , ಸಾಕಷ್ಟು ಸುಸಜ್ಜಿತ ಕೊಠಡಿಗಳು, ಕಲಿಕೋಪಕರಣಗಳು, ಪೀಠೋಪಕರಣಗಳು, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ವ್ಯವಸ್ಥೆ, ಜೆರಾಕ್ಸ್ ವ್ಯವಸ್ಥೆ, ಶಾಲೆಯ ಸುಂದರ ಕಟ್ಟಡಗಳು, ಉದ್ಯಾನವನ,ತರಗತಿಯ ಮುಂಭಾಗ ಅಳವಡಿಸಿರುವ ನಾಮಫಲಕಗಳನ್ನು ಕಂಡ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.


ಈ ಸಂಧರ್ಭದಲ್ಲಿ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಪಂ ಮಾಜಿ ಸದಸ್ಯರಾದ ಬಿ‌ಪಿ ರಾಮಚಂದ್ರ, ಶ್ವೇತಾ ಆರ್ ಬಂಡಿ, ಉಪನಿರ್ದೇಶಕರಾದ  ಪರಮೇಶ್ವರಪ್ಪ , ಕ್ಷೇತ್ರ ಶಿಕ್ಷಣಾಧಿಕಾರಿಗಳಾದ H .R ಕೃಷ್ಣಮೂರ್ತಿ,  P M ಪೋಷನ್ ಅಭಿಯಾನದ ಸಹಾಯಕ ನಿರ್ದೇಶಕರಾದ ನಾಗರಾಜ್,ಶಿಕ್ಷಕ ವೃಂದದವರು,ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ತಿತರಿದ್ದರು.

Leave a Reply

Your email address will not be published. Required fields are marked *