POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

N6698442591750788401220539819cef244286430afbbd05fb55a4c0c72aa7998ce1bd36c2d522a09c2dcdd

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಆಸ್ತಿ ಕಲಹದ ಹಿನ್ನಲೆ
ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಶಂಕೆ ವ್ಯಕ್ತವಾಗಿದೆ.

ಅತಿ ಭೀಕರವಾಗಿ ಶಿವಾನಂದ ಕುನ್ನೂರು ರನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಕುತ್ತಿಗೆ ಭಾಗವನ್ನು ದುಷ್ಕರ್ಮಿಗಳು ಮಚ್ಚಿನಿಂದ ಸೀಳಿಹಾಕಿದ್ದಾರೆ. ಇನ್ನು ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಶಿಗ್ಗಾಂವಿ ಪೊಲೀಸರು ಭೇಟಿ ಪರಿಶೀಲನೆ ‌ನಡೆಸಿದ್ದು,ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.