ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ದಿನಗಳಲ್ಲಿ ನಡೆಯಲು ಹೊಂದಾಣಿಕೆ ಮಾಡಿಕೊಳ್ಳಲು ನಿಗದಿಪಡಿಸಲಾಗಿದೆ ಎಂದು ತಹಸೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್