ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ
ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್ ಬಂಕ್ ಬಳಿ ಬಸ್‌ವೊಂದಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಕೆಂಚನಾಲ ಸಮೀಪದ ಕಮದೂರು ಗ್ರಾಮದ ನಾಗರಾಜ್ ನಾಯ್ಕ್ (47) ಎಂದು ಗುರುತಿಸಲಾಗಿದೆ.ಇವರು ಅರಣ್ಯ ಇಲಾಖೆಯಲ್ಲಿ ವಾಚರ್ ಕೆಲಸ ನಿರ್ವಹಿಸುತಿದ್ದಾರೆ.
ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.