ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು

ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್ (47) ಮೃತ ದುರ್ಧೈವಿಯಾಗಿದ್ದಾರೆ.

ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್ ಬಂಕ್ ಬಳಿ  ಬಸ್‌ವೊಂದಕ್ಕೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರನಿಗೆ ಗಂಭೀರ ಗಾಯಗೊಂಡಿದ್ದನು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಲೆಯ ಭಾಗಕ್ಕೆ ತೀವ್ರವಾಗಿ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೇ ನಾಗರಾಜ್ ನಾಯ್ಕ್ ಸಾವನ್ನಪ್ಪಿದ್ದಾರೆ.

ಇವರು ಅರಣ್ಯ ಇಲಾಖೆಯಲ್ಲಿ ಅರಸಾಳು ವಲಯ ಅರಣ್ಯ ಕಛೇರಿಯಲ್ಲಿ ವಾಚರ್ ಆಗಿ ಕೆಲಸ ನಿರ್ವಹಿಸುತಿದ್ದರು.

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ,ಪೆಟ್ರೋಲ್ ಬಂಕ್‌ ಮುಂಭಾಗದಲ್ಲಿ ಬೈರಾಪುರ ರಸ್ತೆಯಿಂದ ಏಕಾಏಕಿ ವೃದ್ದರೊಬ್ಬರು ಸ್ಕೂಟಿಯಲ್ಲಿ ಬಂದ ಪರಿಣಾಮ ಬಸ್ ಬಲಕ್ಕೆ ತೆಗೆದುಕೊಂಡ ಚಾಲಕ  ರಿಪ್ಪನ್ ಪೇಟೆಯಿಂದ ಕಮದೂರಿಗೆ ಟಿವಿಎಸ್ ಸ್ಟಾರ್ ಸಿಟಿ ಬೈಕ್ ನಲ್ಲಿ ತೆರಳುತಿದ್ದ ನಾಗರಾಜ್ ನಾಯ್ಕ್ ಮೇಲೆ ಒಂದೇ ಸಮನೇ ಬಸ್ ಎರಗಿದ. ಹಿನ್ನೆಲೆಯಲ್ಲಿ ಬೈಕ್ ಸವಾರ ಬಸ್ ಅಡಿಗೆ ಸಿಲುಕಿ ತೀವ್ರ ಗಾಯಗೊಂಡಿದ್ದಾನೆ.

ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ನಾಗರಾಜ್ ನಾಯ್ಕ್ ಮೃತಪಟ್ಟಿದ್ದಾರೆ.ಮೃಹದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

ರಿಪ್ಪನ್ ಪೇಟೆ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.