Headlines

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು.

ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ.

ಮೃತಳನ್ನು ದಾವಣಗೆರೆ  ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ವಿದ್ಯಾ ಎಂದು ಗುರುತಿಸಲಾಗಿದೆ.

ಸೋಮಲಾಪುರ ಗ್ರಾಮದ ಶಿವು ಎಂಬವನ ಜೊತೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು.

ಅದೇ ದಿನ ಸಂಜೆ ಅರಸೀಕೆರೆ ರೈಲ್ವೆ ಟ್ರ‍್ಯಾಕ್ ಬಳಿ ವಿದ್ಯಾ ಪತ್ತೆಯಾಗಿದ್ದಳು, ಆಸ್ಪತ್ರೆಗೆ ಸಾಗಿಸುವ ಮುನ್ನ ಆಕೆ ಸಾವನ್ನಪ್ಪಿದ್ದಳು.

ಸದ್ಯ ವಿದ್ಯಾ ಕುಟುಂಬಸ್ಥರು ಅರಸೀಕರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪತಿ ಶಿವುನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು ನಾಲ್ಕು ತಿಂಗಳಿನಿಂದ ವಿದ್ಯಾಗೆ ಪತಿ ಕುಟುಂಬಸ್ಥರು ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು. ಹೀಗಾಗಿ ಅವರೇ ಆಕೆಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ಪತಿಯ ಮನೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.