ಅಂಗನವಾಡಿಯ 13 ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ ಮಕ್ಕಳು ವಿಟಮಿನ್ ಡ್ರಾಪ್ ಯಡವಟ್ಟಿನಿಂದ ವಾಂತಿ ಹಾಗೂ ಹೊಟ್ಟೆ ನೋವಿಂದ ಬಳಲುತ್ತಿದ್ದು ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.13 ಮಕ್ಕಳು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಮಕ್ಕಳ ಯೋಗ ಕ್ಷೇಮ ವಿಚಾರಿಸಿ ಪೋಷಕರಿಗೆ ಧೈರ್ಯ ತುಂಬಿದರು.
ವಿದ್ಯಾರ್ಥಿಗಳು ಅಸ್ವಸ್ಥರಾಗಲು ಕಾರಣ ಏನು ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ಸಂಬಂಧಪಟ್ಟ ಮಾತ್ರೆ ಹಾಗೂ ಔಷಧಿ ನಿಮ್ಮಲ್ಲಿ ಲಭ್ಯವಿಲ್ಲದಿದ್ದರೇ ಬೇರೆ ಕಡೆಯಿಂದ ತರಿಸಿಕೊಡಬೇಕು , ಏನು ತೊಂದರೆಯಾಗದಂತೆ ನೋಫ಼ಿಕೊಳ್ಳುವಂತೆ ಆಸ್ಪತ್ರೆ ಅಡಳಿತ ವೈದ್ಯಾಧಿಕಾರಿ ಅವರಿಗೆ ಸೂಚನೆ ನೀಡಿದರು. ಅಲ್ಲದೇ, ಘಟನೆ ಕುರಿತು ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.