POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

Images (79)

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು.

ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದರು.

ಇಂದು ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು.

ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ ಎಂದು ಸಿಎಂ ಕೇಂದ್ರದ ವಿರುದ್ದ ಹರಿಹಾಯ್ದರು.

ಅಲ್ಲದೇ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.