ಮೂರು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಚಂಗಾರು ಗ್ರಾಮದಲ್ಲಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.
ಕೃಷಿ ಕಾರ್ಯಕ್ಕಾಗಿ ಜುಲೈ 26 ರಂದು ಮಧ್ಯಾಹ್ನ 2 ಗಂಟೆಗೆ ಮನೆಪಕ್ಕದ ತೋಟಕ್ಕೆ ತೆರಳಿದ್ದ ರಮೇಶ್ ಎಂಬವರು ಆ ದಿನದಿಂದ ನಾಪತ್ತೆಯಾಗಿದ್ದರು. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು.
ಇಂದು ಬೆಳಿಗ್ಗೆ (ಜು. 29) ರಮೇಶ್ ಅವರ ಶವ ಹಂಗಾರು ಗ್ರಾಮದಲ್ಲಿ, ಕಲ್ಲುಗುಡ್ಡದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಶವ ಪತ್ತೆಯಾಗಿರುವ ಸ್ಥಳ ಹಾಗೂ ತೋಟವಿರುವ ಪ್ರದೇಶಗಳು ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಇರುವುದು ಈ ಪ್ರಕರಣವನ್ನು ಇನ್ನಷ್ಟು ಕುತೂಹಲಕಾರಿ ಮೂಡಿಸಿದೆ.
ಘಟನೆ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗ್ರಾಮಸ್ಥರು ಹಾಗೂ ಕುಟುಂಬದವರು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ, ಬಡ್ಡಿ ವ್ಯವಹಾರದ ಹಿನ್ನೆಲೆಯಲ್ಲಿ ರಮೇಶ್ ಅವರ ಸಾವಿನ ಹಿನ್ನಲೆ ಇರಬಹುದೆಂಬ ಅನುಮಾನ ವ್ಯಕ್ತವಾಗಿದೆ.