Shivamogga | ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ – ಮೆಗ್ಗಾನ್ ಗೆ ದಾಖಲು
ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕನಲ್ಲಿ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ದಾಳಿಗೊಳಗಾದ ವ್ಯಕ್ತಿ ಶಶಿ ಎಂಬಾತನ ಮೈ ರಕ್ತಸಿಕ್ತವಾಗಿದೆ.
ಫ್ರೀಡಂ ಪಾರ್ಕ್ ನಲ್ಲಿರುವ ವಾಕಿಂಗ್ ಪಾತ್ ನ ಮೇಲೆ ಶಶಿ ಎಂಬ ಯುವಕ ನಡೆದುಕೊಂಡು ಹೋಗುತಿದ್ದಾಗ ಬೈಕ್ ನಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸಧ್ಯಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾದ ಯುವಕ ಪ್ರಾಣಾಪಾಯದಿಂದ ಬಜಾವ್ ಆಗಿದ್ದು ಮೆಗ್ಗಾನ್ ಗೆ ದಾಖಲಿಸಲಾಗಿದೆ.
ಶಿವಮೊಗ್ಗದ ಜಟ್ ಪಟ್ ನಗರದಲ್ಲಿ ನಿನ್ನೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಶಶಿ ಮತ್ತು ಇತರರ ನಡುವೆ ಮನಸ್ತಾಪವಾಗಿದೆ. ಮನಸ್ತಾಪವಾದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 12 ಗಂಟೆಗೆ ಹಲ್ಲೆ ನಡೆದಿದೆ.
ಈ ಕುರಿತು ಮಾದ್ಯಮದವರೊಂದಿಗೆ ಎಸ್ಪಿ ಮಿಥುನ್ ಕುಮಾರ್ ಗಾಯಾಳು ಶಶಿ ಹಲ್ಲೆ ನಡೆಸಿದವರ ಗ್ಯಾಂಗ್ ನ ಹೆಸರನ್ನು ಹೇಳಿದ್ದಾನೆ. ಮೂವರ ಹೆಸರನ್ನ ತಹಶೀಲ್ದಾರ್ ಮುಂದೆ ರೆಕಾರ್ಡ್ ಮಾಡಲಾಗುವುದು. ಸಧ್ಯದಲ್ಲಿಯೇ ಮಾಧ್ಯಮಗಳಿಗೆ ಹೆಸರನ್ನ ಬಹಿರಂಗಗೊಳಿಸಲಾಗುವುದು ಎಂದಿದ್ದಾರೆ.
ಶಶಿಯ ವಿರುದ್ಧವೂ ಹಲವು ಪ್ರಕರಣಗಳಿವೆ ಎಂಬ ಮಾಹಿತಿ ಇದೆ. ವಿನೋಬನಗರದ ಆರ್ ಒಬಿ ಗ್ಯಾಂಗ್ ವೊಂದು ದಾಳಿ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಹೊರಬರಬೇಕಿದೆ. ತಣ್ಣಗಾಗಿದ್ದ ಶಿವಮೊಗ್ಗದ ರೌಡಿಸಂ ತಲೆ ಎತ್ತಿದಂತಾಗಿದೆ. ಶಶಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ.
ಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್