RIPPONPETE | ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ
ರಿಪ್ಪನ್ಪೇಟೆ : ಸಂಸದ ಬಿ ವೈ ರಾಘವೇಂದ್ರ ಹುಟ್ಟುಹಬ್ಬವನ್ನು ಪಟ್ಟಣದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಿದರು.
ಪಟ್ಟಣದ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪಕ್ಷದ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಕಾರ್ಯಕರ್ತರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ರಾಘವೇಂದ್ರ ಅವರು ಅಭಿವೃದ್ಧಿ ಕಾರ್ಯದಲ್ಲಿ 543 ಸಂಸದರಲ್ಲಿ ಎರಡನೆಯ ಸ್ಥಾನವನ್ನು ಪಡೆದುಕೊಂಡಿದ್ದಾರೆ, ಲೋಕಸಭಾ ಕ್ಷೇತ್ರದಲ್ಲಿ ರಾಜ್ಯದಲ್ಲಿಯೇ ಅಭಿವೃದ್ಧಿ ಕಾರ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ, ಆರೋಗ್ಯ ಶಿಕ್ಷಣ, ಕೃಷಿ ಸಾಮಾಜಿಕ ಆರ್ಥಿಕ ಮತ್ತು ರೈಲ್ವೆ ಸಂಚಾರ ಅಭಿವೃದ್ಧಿಯಲ್ಲಿ ಮಹತ್ತರವಾದ ಅಭಿವೃದ್ಧಿಯನ್ನು ಮಾಡಿದ್ದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ ಸಂಸದರಾಗಿದ್ದರು ಕೂಡ ಜನಸಾಮಾನ್ಯರಲ್ಲಿ ಸಾಮಾನ್ಯರಾಗಿ ಇರುವುದರ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರ ಜನಮಾನಸದಲ್ಲಿ ಇದ್ದಾರೆ ಎಂದು ಹೇಳಿದರು.
ವಿಶೇಷ ಪೂಜೆಯಲ್ಲಿ ಬಿಜೆಪಿ ಪಕ್ಷದ ಸ್ಥಳೀಯ ಸಂಸ್ಥೆಯ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್