ನಾಗರ ಹಾವಿನ ಹುಟ್ಟುಹಬ್ಬ ಆಚರಿಸಿ ಸಂಭ್ರಮ; ಜೈಲುಪಾಲಾದ ಯುವಕ
ಧುಲೆ (ಮಹಾರಾಷ್ಟ್ರ): ಇಂದಿನ ದಿನಮಾನಗಳಲ್ಲಿ ಸಾಮಾನ್ಯವಾಗಿ ಎಲ್ಲರೂ ತಮ್ಮ ಪ್ರೀತಿಪಾತ್ರರು, ಸ್ನೇಹಿತರು, ಕುಟುಂಬಸ್ಥರು ಹಾಗೂ ತಮ್ಮ ಪ್ರೀತಿಯ ಸಾಕು ಪ್ರಾಣಿಗಳ ಹುಟ್ಟುಹಬ್ಬವನ್ನೂ ಸಹ ಆಚರಣೆ ಮಾಡಿ ಸಂಭ್ರಮಿಸುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಹಾವಿನ ‘ಹುಟ್ಟುಹಬ್ಬ’ ಆಚರಣೆ ಮಾಡಿದ್ದಾನೆ! ವಿಡಿಯೋ ವೈರಲ್ ಆಗುತ್ತಿದ್ಧಂತೆ ಆತ ಜೈಲುಪಾಲಾಗಿದ್ದಾನೆ.
ಮಹಾರಾಷ್ಟ್ರದ ಧುಲೆಯಲ್ಲಿ ಈ ಘಟನೆ ವರದಿಯಾಗಿದೆ. ನಾಗರಹಾವಿನ ಹುಟ್ಟುಹಬ್ಬ ಆಚರಿಸುತ್ತಿದ್ದ ರೀಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಯುವಕ ಸಂಕಷ್ಟಕ್ಕೆ ಸಿಲುಕಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆತನನ್ನು ಬಂಧಿಸಿ ಕ್ರಮ ಜರುಗಿಸಿದ್ದಾರೆ.
ನಾಗರ ಹಾವಿನ ಹುಟ್ಟುಹಬ್ಬ ಆಚರಣೆ
ಬಂಧಿತ ಯುವಕನನ್ನು ಧುಲೆ ಜಿಲ್ಲೆಯ ಶಿರ್ಪುರ್ ತಾಲೂಕಿನ ಬೋರೆಡಿ ಗ್ರಾಮದ ನಿವಾಸಿ ರಾಜ್ ಸಾಹೇಬ್ ರಾವ್ ವಾಘ್ ಎಂದು ಗುರುತಿಸಲಾಗಿದೆ ಎಂದು ಅರಣ್ಯ ರಕ್ಷಕ ಕಿರಣ್ ಗಿರ್ವಾಲೆ ಅವರಿಗೆ ಮಾಹಿತಿ ನೀಡಿದ್ದಾರೆ.
ನಾಗರ ಪಂಚಮಿಯಂದು ಹಾವಿನ ಹುಟ್ಟಹಬ್ಬ ಆಚರಣೆ : ಕಳೆದ ತಿಂಗಳು, ನಾಗರ ಪಂಚಮಿಯ ದಿನದಂದು (ಜುಲೈ 29), ವಾಘ್ ಗ್ರಾಮದ ಬಳಿ ನಾಗರಹಾವನ್ನು ಹಿಡಿದು, ಅದನ್ನು ಮನೆಗೆ ತಂದ ಯುವಕ, ಬಳಿಕ ಕೇಕ್ ಕತ್ತರಿಸಿ ಅದರ ಹುಟ್ಟುಹಬ್ಬ ಆಚರಿಸಿದ್ದ. ನಂತರ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು, ಅದು ಭಾರಿ ವೈರಲ್ ಆಗಿತ್ತು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್