Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ

ಸಿಗಂದೂರು ಕಾರ್ಯಕ್ರಮದಲ್ಲಿ ಸರಿಯಾದ ಶಿಷ್ಟಾಚಾರ ಪಾಲನೆಯಾಗಿಲ್ಲ – ಸಿಎಂ ಸಿದ್ದರಾಮಯ್ಯ ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ…

Read More

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು

ಲೋಕಾರ್ಪಣೆಯಾಯಿತು ಐತಿಹಾಸಿಕ ಸಿಗಂಧೂರು ಸೇತುವೆ – ದಶಕಗಳ ಕನಸು ನನಸು ಮಲೆನಾಡಿನ ಶರಾವತಿ ಸಂತ್ರಸ್ತರು ದಶಕಗಳಿಂದ ಕಾಯುತ್ತಿದ್ದ ಮಹತ್ವದ ಕನಸು ನನಸಾಗಿದೆ. ಸಿಗಂಧೂರು ಸೇತುವೆ ಇಂದು ಲೋಕಾರ್ಪಣೆಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂಧೂರು ಹೊಳೆಬಾಗಿಲು ಬಳಿ ನಿರ್ಮಿಸಲಾಗಿರುವ ಈ ಸೇತುವೆಯನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಸೇತುವೆ ಲೋಕಾರ್ಪಣೆಗೂ ಮುನ್ನ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ವಿವಿಧ ಮುಖಂಡರು…

Read More

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ

28 ವರ್ಷ ದೇಶದ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧನಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸ್ವಾಗತ  ರಿಪ್ಪನ್ ಪೇಟೆ : ಕಳೆದ 28 ವರ್ಷಗಳ ಕಾಲ ಶತ್ರುಗಳ ಮೇಲೆ ಹದ್ದಿನ ಕಣ್ಣಿಟ್ಟು ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ. ಇದೀಗ ಸೇವೆಯಿಂದ ನಿವೃತ್ತಿ ಹೊಂದಿ ತನ್ನ ತವರೂರಿಗೆ ಬಂದಿದ್ದೆ ಬಂತು. ಆ ಸಂಭ್ರಮ ಬರೀ ಆತನ ಕುಟುಂಬಕ್ಕೆ ಮಾತ್ರ ಸೀಮಿತವಾಗದೇ ಆ ಇಡೀ ಊರಲ್ಲಿ ಹಬ್ಬದ ಸಂಭ್ರಮಕ್ಕೆ ಕಾರಣವಾಗಿತ್ತು ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ…

Read More

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ

ಸಮಾಜದಲ್ಲಿ ನೊಂದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು :‌ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ: ಸಮಾಜದಲ್ಲಿ ನೊಂದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಹಾಗೂ ಮಕ್ಕಳಿಗೆ ಸೂಕ್ತ ವಿದ್ಯಾಭ್ಯಾಸ ಒದಗಿಸಿ ಸುಸಂಸ್ಕೃತ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಅವರು ಭಾನುವಾರ ಪಟ್ಟಣದ ವಿಶ್ವಮಾನವ ಸಭಾಂಗಣದಲ್ಲಿ ಹೊಸನಗರ ತಾಲ್ಲೂಕ್ ಗಂಗಾಮತಸ್ಥರ ನೌಕರರ ಕ್ಷೇಮಾಭಿವೃದ್ದಿ ಸಂಘ ಮತ್ತು ತಾಲ್ಲೂಕ್…

Read More

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ. ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ. ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ…

Read More

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ್ ಸವಾರನಿಗೆ ಗಾಯ

ರಿಪ್ಪನ್ ಪೇಟೆ : ಒಂಬತ್ತನೇ ಮೈಲಿಗಲ್ಲು ಬಳಿ ಹಿಟ್ ಆಂಡ್ ರನ್ – ಬೈಕ ಸವಾರನಿಗೆ ಗಾಯ ಮಾರುತಿ ಬ್ರೀಜಾ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳುತಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಾಗಿದೆ. ರಿಪ್ಪನ್ ಪೇಟೆ : ಇಲ್ಲಿನ ಒಂಬತ್ತನೇ ಮೈಲಿಗಲ್ಲು ಬಳಿಯಲ್ಲಿ ಸ್ಕೂಟಿಯೊಂದಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೆಗ್ಗಾನ್ ಗೆ ದಾಖಲಾಗಿರುವ ಘಟನೆ ನಡೆ‍ದಿದೆ. ರಿಪ್ಪನ್ ಪೇಟೆಯ ಶಬರೀಶನಗರದ ನಿವಾಸಿ ಮಂಜನಾಯ್ಕ್ (69)…

Read More

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ

ಸಿಗಂದೂರು ಸೇತುವೆ ಉದ್ಘಾಟನೆ – ಬಿಜೆಪಿ ಪಕ್ಷದ ಕಾರ್ಯಕ್ರಮ , ನನಗೆ ಆಹ್ವಾನ ನೀಡಿಲ್ಲ – ಬೇಳೂರು ಗೋಪಾಲಕೃಷ್ಣ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ನಡೆಸಲಾಗುತ್ತಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಯಾಗಿರುವ ಈ ಸೇತುವೆಯ ಉದ್ಘಾಟನೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದು ಅವರು ಆಗ್ರಹಿಸಿದ್ದು, ತಮಗೆ ಈವರೆಗೂ ಆಹ್ವಾನ ಪತ್ರಿಕೆ ನೀಡಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ಸೇತುವೆ ಆ ಭಾಗದ ಜನರಿಗೆ…

Read More

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟದ ಎಚ್ಚರಿಕೆ

ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಹೋರಾಟ ಶಿವಮೊಗ್ಗ – ಸಾಗರ ತಾಲೂಕು ಅಂಬಾರಗೊಡ್ಲು ಬಳಿ  ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ  ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆಗೋಡು ಎಚ್ಚರಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ. ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು,…

Read More

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ

ಜೈಲಿನಲ್ಲಿದ್ದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಪತ್ತೆ – ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ ಸೋಗಾನೆಯ ಕೇಂದ್ರ ಕಾರಾಗೃಹ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಮೊಬೈಲ್‌ ಫೋನ್‌ ಹೊರಗೆ ತೆಗೆಯಲಾಗಿದೆ. ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ ಅಲಿಯಾಸ್‌ ಗುಂಡನಿಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈತ ಜೂನ್‌ 24ರಂದು…

Read More

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ

ಮೊಬೈಲ್ ನಂಬರ್ ಹ್ಯಾಕ್ ಮಾಡಿ ಸಾವಿರಾರು ರೂ. ವಂಚನೆ ಶಿವಮೊಗ್ಗ : ವ್ಯಕ್ತಿಯೋರ್ವರ ಮೊಬೈಲ್ ಪೋನ್ ನಂಬರ್ ಹ್ಯಾಕ್ ಮಾಡಿ, ಅವರ ಬ್ಯಾಂಕ್ ಖಾತೆಯಿಂದ ಸಾವಿರಾರು ರೂ. ವಂಚನೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ವೆಂಕಟೇಶ ನಗರದ ನಿವಾಸಿ ಪ್ರಭಾಕರ ಬಿ ವಿ (47) ವಂಚನೆಗೊಳಗಾದವರೆಂದು ಗುರುತಿಸಲಾಗಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ಪ್ರಭಾಕರ ಬಿ ವಿ ಅವರ ಪೋನ್ ಪೇ ಸ್ಕ್ಯಾನರ್’ಗೆ…

Read More
Exit mobile version