Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..!

SAGARA | ಮನೆ ಹಾಗೂ ದನಗಳ್ಳತನ ಮಾಡುತಿದ್ದ ಆರೋಪಿಗಳ ಬಂಧನ – ಲಕ್ಷಾಂತರ ರೂ ಮೌಲ್ಯದ ನಗದು , ಚಿನ್ನಾಭರಣ ವಶಕ್ಕೆ..! ಸಾಗರ : ಪಟ್ಟಣದ ಪೇಟೆ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗಳ್ಳತನ, ದನಗಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 2 ಲಕ್ಷ ಮೌಲ್ಯದ ಚಿನ್ನಾಭರಣ, 20 ಲಕ್ಷ ಮೌಲ್ಯದ ವಾಹನ ಜಪ್ತಿ ಮಾಡಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್ ಅವರು ಮಾಹಿತಿ ನೀಡಿದ್ದು,…

Read More

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…

Read More

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ

ತಳಲೆ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಕೆ ವಿ ಗಣಪತಿ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : : ಗುರುಗಳು ವಿದ್ಯಾರ್ಥಿಗಳಿಗೆ ಅಕ್ಕರೆ ತೋರಿದರೆ ಸಕ್ಕರೆಯ ಜೀವನ ಅವರದಾಗುತ್ತದೆ. ಇದರಿಂದ ಗುರು, ಶಿಷ್ಯರ ಸಂಬಂಧ ಪರಿ ಶುದ್ಧವಾಗಿ, ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ ಹೇಳಿದರು. ತಳಲೆ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 33 ವರ್ಷ ಸುದೀರ್ಘ ಸೇವೆ ಸಲ್ಲಿಸಿ…

Read More

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ। ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ…

Read More

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು!

ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವು! ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ನವವಿವಾಹಿತ ಸಾವನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹೊಳೆ ಜೋಳದಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ದೇವರಾಜ ಎಂದು ಗುರುತಿಸಲಗಿದೆ. ಅವರು ಎಂದಿನಂತೆ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ತೆರಳುವ ವೇಳೆ ಮನೆಯ ವಿದ್ಯುತ್ ಲೈನ್ ತುಂಡಾಗಿ ಬಿದ್ದಿರುವುದನ್ನು ಗಮನಿಸದೆ ತುಳಿದು ವಿದ್ಯುತ್‌ ಸ್ಪರ್ಶವಾಗಿ ಅಸ್ವಸ್ಥರಾಗಿದ್ದರು. ಮೃತ…

Read More

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read More

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!!

ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳನ ಬಂಧನ, ₹14 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ..!! ಮನೆಗಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ₹14.70 ಲಕ್ಷ ಮೌಲ್ಯದ 184 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಶಿಕಾರಿಪುರದ ರಂಗನಾಥಪುರ ಕಾಲೊನಿ ನಿವಾಸಿ ಬಿ.ಜೆ.ಅಭಿಷೇಕ ಗೌಡ (25) ಬಂಧಿತ ಆರೋಪಿ. ಶಿಕಾರಿಪುರ ಪಟ್ಟಣದ ಮಹಿಳೆಯೊಬ್ಬರು ಜ. 24ರಂದು ಮನೆಯ ಬೀರುವಿನಲ್ಲಿ ಇಟ್ಟಿದ್ದ…

Read More
Exit mobile version