Headlines
ರಫ಼ಿ ರಿಪ್ಪನ್ ಪೇಟೆ

ರಫ಼ಿ ರಿಪ್ಪನ್ ಪೇಟೆ

ನಮಸ್ಕಾರ, ನಾನು ರಫಿ ರಿಪ್ಪನ್‌ಪೇಟೆ. ​'ಪೋಸ್ಟ್‌ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್‌ಮ್ಯಾನ್ ನ್ಯೂಸ್. ​ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್‌ಮ್ಯಾನ್ ನ್ಯೂಸ್.” ​ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. ​'ಪೋಸ್ಟ್‌ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ​ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ​ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ​ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್‌ಪೇಟೆ ಸಂಪಾದಕರು, ಪೋಸ್ಟ್‌ಮ್ಯಾನ್ ನ್ಯೂಸ್ 🌐 [www.postmannewskannada.com]

ಬಹುಮುಖ ಪ್ರತಿಭೆಯ ಶಿಕ್ಷಕಿ ಕಲಾ ಹೆಗಡೆಗೆ ಚಿನ್ಮಯ ಜ್ಞಾನಿ ಪ್ರಶಸ್ತಿ|Award

ಆನಂದಪುರ : ಸಾಗರ ತಾಲೂಕಿನ ಆನಂದಪುರದ ಸಾಧನಾ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಕಲಾ ಹೆಗಡೆಗೆ ರಾಜ್ಯ ಮಟ್ಟದ ಚಿನ್ಮಯ ಜ್ಞಾನಿ ಪ್ರಶಸ್ತಿ ದೊರೆತಿದೆ.  ಮೈಸೂರಿನ ಶರಣು ವಿಶ್ವವಚನ ಪೌಂಡೇಶನ್ ವತಿಯಿಂದ   ಭಾನುವಾರ  ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯದಲ್ಲಿ  ವಿಶಿಷ್ಟ ಸಾಧನೆ ಮಾಡಿದ ಆಯ್ದ ಶಿಕ್ಷಕರಿಗೆ  ಚಿನ್ಮಯ ಜ್ಞಾನಿ ಪ್ರಶಸ್ತಿ ಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಬಾನುವಾರ  ಮೈಸೂರಿನ  ನಟರಾಜ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಶಿಕ್ಷಕಿ ಕಲಾ ಹೆಗಡೆ ಇವರು ಬಹುಮುಖ ಪ್ರತಿಭಾ…

Read Full News

ರಾಜ್ಯದಲ್ಲಿ ಮತ್ತೆ ಕುಮಾರಸ್ವಾಮಿ ನೇತ್ರತ್ವದ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ : ಜೆಡಿಎಸ್ ಮುಖಂಡರ ಅಭಿಮತ|Jds

ಹೊಸನಗರ : ಮಾಜಿ‌ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ರಾಜ್ಯ ಜೆಡಿಎಸ್ ಪಕ್ಷದ ಚುಕ್ಕಾಣಿ ಹಿಡಿದಿರುವ ಸಿಎಂ ಇಬ್ರಾಹಿಂ ರವರ ನೇತೃತ್ವದಲ್ಲಿ ಈ ಬಾರಿ ರಾಜ್ಯದ ಆಡಳಿತ ಚುಕ್ಕಾಣಿ ಜೆಡಿಎಸ್ ಪಕ್ಷಕ್ಕೆ ದೊರಕಲಿದೆ ಎಂದು ಜಿಲ್ಲಾ ಜೆಡಿಎಸ್ ಮುಖಂಡ ರಾಮಕೃಷ್ಣ ಹೇಳಿದರು. ಅವರು ಇಂದು ಇಲ್ಲಿನ ಪ್ರವಾಸಿ ಮಂದಿರದಲ್ಲಿ ತಾಲೂಕು ಜೆಡಿಎಸ್  ಪ್ರಮುಖರ ಸಭೆಯಲ್ಲಿ ಮಾತನಾಡಿ ಜಿಲ್ಲೆಯವರೇ ಆದಂತಹ ರಾಜ್ಯದ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ರವರು ಜನವರಿ 7ರಂದು ಜಿಲ್ಲೆಗೆ ಆಗಮಿಸಲಿದ್ದು ಪಕ್ಷದ ಪುನರ್…

Read Full News

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವಕರು ಸಾವು, ಓರ್ವ ಗಂಭೀರ|Accident

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸಿಫ್(21) ಎಂಬವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಪ್ರಮೋದ್ ತನ್ನ ಅಜ್ಜಿ 70 ವರ್ಷದ ದೇವಮ್ಮರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಆಸಿಫ್ ಅವರ ಬೈಕ್‍ ಮುಖಾಮುಖಿ ಢಿಕ್ಕಿಯಾಗಿದೆ. ಆಸಿಫ್ ಬೈಕಿನಲ್ಲಿದ್ದ ಶಿವಮೊಗ್ಗದ ತೌಸೀಫ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,…

Read Full News

ಕೋಡೂರು ಸಮೀಪ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ|Accident

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕೋಡೂರು ಸಮೀಪದ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಗ್ರಾಮದ ಸೇತುವೆ ಬಳಿ ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ರಿಪ್ಪನ್‌ಪೇಟೆ ಕಡೆಯಿಂದ ಅಕ್ಕಿ ತುಂಬಿಕೊಂಡು ಹೋಗುತಿದ್ದ ಲಾರಿ ಹಾಗೂ ಹೊಸನಗರ ಕಡೆಯಿಂದ ಬರುತಿದ್ದ ಖಾಲಿ ಲಾರಿ ನಡುವೆ ಡಿಕ್ಕಿಯಾಗಿದ್ದು,ಆಟೋವೊಂದನ್ನು ಓವರ್ ಟೇಕ್ ಮಾಡುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಲಾರಿ ಚಾಲಕನೊಬ್ಬನಿಗೆ ಗಾಯಗಳಾಗಿದ್ದು ಆತನನ್ನು ಹೊಸನಗರದ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತದಿಂದ…

Read Full News

ಬೈಕ್ ಅಪಘಾತ – ಕಾಲೇಜು ವಿದ್ಯಾರ್ಥಿ ಸಾವು|Accident

ಬೈಕೊಂದು ಅಪಘಾತಕ್ಕೀಡಾಗಿ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕೈರಾ ಸಮೀಪ ನಡೆದಿರುವುದು ವರದಿಯಾಗಿದೆ. ಸಾಗರದ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿ ಎಲ್ಡ್ರನ್ ಫೆರ್ನಾಂಡಿಸ್ (17) ಮೃತ ಬಾಲಕ. ಆನಂದಪುರ ಸಮೀಪದ ಯಡೆಹಳ್ಳಿಯ ನಿವಾಸಿಯಾಗಿದ್ದ ಎಲ್ಡ್ರನ್ ಫೆರ್ನಾಂಡಿಸ್ ರಾಷ್ಟ್ರೀಯ ಹೆದ್ದಾರಿ 206 ಸಮೀಪ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತ ಹೇಗೆ ಸಂಭವಿಸಿದ ಎಂಬುದು ತಿಳಿದುಬಂದಿಲ್ಲ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ…

Read Full News

ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಮಾತನಾಡುವ ನೈತಿಕತೆ ಬೇಳೂರು ಗೋಪಾಲಕೃಷ್ಣ ರಿಗೆ ಇಲ್ಲಾ – ಬಿಜೆಪಿ|Ripponpet

ರಿಪ್ಪನ್‌ಪೇಟೆ : ಎರಡು ಬಾರಿ ಶಾಸಕರಾಗಿದ್ದಾಗ ಶರಾವತಿ ಮುಳಗಡೆ ಸಂತ್ರಸ್ಥರ ಬಗ್ಗೆ ತುಟಿ ಬಿಚ್ಚದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಈಗ ಮುಳುಗಡೆ ಸಂತ್ರಸ್ಥರು ಧರ್ಮಸ್ಥಳಕ್ಕೆ ಹೋಗಿರುವುದನ್ನು ಟೀಕಿಸುವುದಕ್ಕೆ ಯಾವುದೇ ನೈತಿಕತೆ ಇಲ್ಲಾ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ. ಮಂಜುನಾಥ ಆರೋಪಿಸಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶರಾವತಿ ಸಂತ್ರಸ್ಥ ಮುಖಂಡರ ಜೊತೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸಂತ್ರಸ್ಥರ ಹಕ್ಕಿಗಾಗಿ ಈಗಾಗಲೇ ಲೋಕಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರರವರು ಕೇಂದ್ರ ಸರಕಾರದ ಗಮನಸೆಳೆದಿದ್ದಾರೆ. ಶಾಸಕರಾದ ಹರತಾಳು ಹಾಲಪ್ಪ…

Read Full News

ರಿಪ್ಪನ್‌ಪೇಟೆ ಸಮೀಪದ ಗಾಳಿಬೈಲು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ – ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳಿಂದ ಬೋನ್ ಫಿಕ್ಸ್|leopard

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಪ್ರತಿಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದರು. ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದ ಅರಸಾಳು ವಲಯ ಅರಣ್ಯ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಗಾಳಿಬೈಲಿನಲ್ಲಿ ಬೋನ್ ಫಿಕ್ಸ್ ಮಾಡಿದ್ದಾರೆ.  ರಿಪ್ಪನ್ ಪೇಟೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ :  ಕಳೆದ ನಾಲ್ಕು ದಿನಗಳ ಹಿಂದೆ ರಿಪ್ಪನ್ ಪೇಟೆ- ತೀರ್ಥಹಳ್ಳಿ ರಾಜಹೆದ್ದಾರಿ ಸಮೀಪದ ಮಳವಳ್ಳಿ…

Read Full News

ಹೃದಯಘಾತದಿಂದ 28ರ ಹರೆಯದ ಗೃಹಿಣಿ ಅಪಮೃತ್ಯು|heart attack

ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ಮರಣ ಹೊಂದಿದ ನಂತರದಲ್ಲಿ ರಾಜ್ಯದಲ್ಲಿ ಅತಿ ಕಿರಿ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ(28) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ವಿವಾಹವಾಗಿದ್ದರು. ಪಟ್ಟಣದ ಶಾರದಾ…

Read Full News

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧ ಆಯ್ಕೆ|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷರಾಗಿ ಸುಮಿತ್ರಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಸುಮಿತ್ರಮ್ಮ ರವರನ್ನು ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗೆ ಹೊಸನಗರ ತಾಲೂಕ್ ಅಕ್ಷರ ದಾಸೋಹ ಅಧಿಕಾರಿ ನಾಗರಾಜ್ ಪಾಲ್ಗೊಂಡಿದ್ದರು. ಹೆದ್ದಾರಿಪುರ ಗ್ರಾಪಂ ನೂತನ ಅಧ್ಯಕ್ಷೆ ಸುಮಿತ್ರಮ್ಮ ರವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಕೆರೆಹಳ್ಳಿ- ಹುಂಚಾ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಗಿರೀಶ್ ,ಸತೀಶ್…

Read Full News

ಅರಸಾಳು ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ|ಸ್ಥಳಕ್ಕಾಗಮಿಸಿ ಅಗ್ನಿಶಾಮಕ ದಳ|Accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಿಗ್ಗೆ ಅರಸಾಳು ಸಮೀಪದ 9ನೇ ಮೈಲಿಕಲ್ಲು ಬಳಿ ಈ ಘಟನೆ ಸಂಭವಿಸಿದೆ. ರಿಪ್ಪನ್ ಪೇಟೆ – ಆಯನೂರು ಮಾರ್ಗ ಮಧ್ಯೆಯ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ…

Read Full News

ರಿಪ್ಪನ್‌ಪೇಟೆಯಲ್ಲಿ ಹಾನಗಲ್ ಕುಮಾರೇಶ್ವರ ರಥಯಾತ್ರೆಗೆ ಅದ್ದೂರಿ ಸ್ವಾಗತ|Viraagi

ರಿಪ್ಪನ್‌ಪೇಟೆ : ಹಾನಗಲ್ ಶ್ರೀ ಗುರುಕುಮಾರೇಶ್ವರ ಶಿವಯೋಗಿಗಳ ಕುರಿತು ಜನವರಿ ೧೨ ರಂದು ಬಿಡುಗಡೆಯಾಗಲಿರುವ ವಿರಾಟಪುರ ವಿರಾಗಿ ಚಲನಚಿತ್ರಕ್ಕೆ ಸಂಬಂಧಿಸಿದಂತೆ ಶ್ರೀ ಕುಮಾರೇಶ್ವರ ರಥ ಯಾತ್ರೆ ನಾಡಿನ ವ್ಯಾಪ್ತಿ ಸಂಚರಿಸುತ್ತಿದ್ದು ಇಂದು ಅನಂದಪುರ ಮಾರ್ಗವಾಗಿ ರಥವು ರಿಪ್ಪನ್‌ಪೇಟೆಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸಾಗರ ರಸ್ತೆಯ ಒಕ್ಕಲಿಗರ ಸಮುದಾಯ ಭವನದ ಬಳಿ ಅದ್ದೂರಿಯಾಗಿ ಸ್ವಾಗತಿಸಿ ಬೈಕ್ ರ‍್ಯಾಲಿ ಮೂಲಕ ವಿನಾಯಕ ವೃತ್ತದ ಮೂಲಕ ಭೂಪಾಳಂ ಚಂದ್ರಶೇಖರಯ್ಯ ಸಬಾಭವನಕ್ಕೆ ಕರೆ ತರಲಾಯಿತು. ಭೂಪಾಳಂ ಚಂದ್ರಶೇಖರಯ್ಯ ಸಬಾಭವನದಲ್ಲಿ ಹತ್ತು ನಿಮಿಷದ ಹಾನಗಲ್ ಕುಮಾರೇಶ್ವರ…

Read Full News

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read Full News

ಲಗೇಜ್ ಆಟೋ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು,ಓರ್ವ ಗಂಭೀರ|Accident

ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.  ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹ ಸವಾರ ಮಂಜಪ್ಪ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ…

Read Full News

IPL Auction ನೆನಪಿಸುವಂತೆ ನಡೆದ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ಪ್ರಕ್ರಿಯೆ….!!!!!!!

ಹೆದ್ದಾರಿಪುರ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ರಿಕೆಟ್‌ ಪ್ರೀಮಿಯರ್ ಆಯೋಜನೆ ಗರಿಗೆದರತೊಡಗಿವೆ.  ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರದಲ್ಲಿ ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್(HPL) ಕ್ರಿಕೆಟ್ ಟೂರ್ನಿ ಆಯೋಜನೆಗೆ ಈಗ ಭರ್ಜರಿ ಚಾಲನೆ ಸಿಕ್ಕಿದ್ದು, ಭಾನುವಾರ ವೃತ್ತಿಪರ ಶೈಲಿಯಲ್ಲಿ ಐಪಿಎಲ್ ಹರಾಜು ನೆನಪಿಸುವಂತೆ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ನಡೆದಿದೆ. ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳುತ್ತಿದ್ದು,…

Read Full News

ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…

Read Full News

ನಾಳೆ(21-12-2022) ರಿಪ್ಪನ್‌ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi

ರಿಪ್ಪನ್‌ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ….

Read Full News

ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಬೊಮ್ಮಾಯಿ – ಆರ್ ಎಂ ಮಂಜುನಾಥ್ ಗೌಡ|DKS

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಬೊಮ್ಮಾಯಿ ಯಾಗಿದ್ದು,ಕೇಂದ್ರ ಮತ್ತು ರಾಜ್ಯ ಸರ್ಕಾರ ಜನ ವಿರೋಧಿ ಚಟುವಟಿಕೆಗಳ ಜೊತೆಗೆ ತನ್ನ ತಪ್ಪುಗಳನ್ನು ಮತ್ತು ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೆಪಿಸಿಸಿ ನಾಯಕರಾದ ಡಿ ಕೆ ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಯ ಮೇಲೆ ದಾಳಿ ನೆಡೆಸಿದ್ದಾರೆ ಎಂದು ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ಹೇಳಿದರು. ಕರ್ನಾಟಕ ರಾಜ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ರವರ ಶಿಕ್ಷಣ ಸಂಸ್ಥೆಯ ಮೇಲೆ ರಾಜಕೀಯ ದುರುದ್ದೇಶದಿಂದ…

Read Full News

ರಿಪ್ಪನ್‌ಪೇಟೆ : ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಜೈನರ ದಕ್ಷಿಣದ ಕಾಶಿ ಹೊಂಬುಜ ಮಠಕ್ಕೆ ತೆರಳುತಿದ್ದ ಭಕ್ತರ ಮಾರುತಿ ಸ್ವಿಫ್ಟ್ ಕಾರು (MH 14 GN 1943) ಹೆದ್ದಾರಿಪುರ ಸಮೀಪದ ಜಂಬಳ್ಳಿ ತಿರುವಿನಲ್ಲಿ ಪಲ್ಟಿಯಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಹಾರಾಷ್ಟ್ರ ರಾಜ್ಯದ ಪೂನ ನಗರದಿಂದ ಹೊಂಬುಜಾ ಮಠಕ್ಕೆ ಆಗಮಿಸುತಿದ್ದಾಗ ಇಂದು ಮುಂಜಾನೆ ಜಂಬಳ್ಳಿ ತಿರುವಿನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 4…

Read Full News

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರ ಸಾವು : ಕುಟುಂಬಸ್ಥರಿಂದ ಪ್ರತಿಭಟನೆ|Mescom

ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ದಿನಗೂಲಿ ನೌಕರನೊಬ್ಬ ಮೃತ ಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಇಲಾಖೆಯ ನಿರ್ಲಕ್ಷ್ಯಕ್ಕೆ ಆಕ್ರೋಶಗೊಂಡ ಆತನ ಕುಟುಂಬಸ್ಥರು ಮತ್ತು ಎಣ್ಣೆಕೊಪ್ಪ ಗ್ರಾಮಸ್ಥರು ಮೆಸ್ಕಾಂ ಇಲಾಖೆಯ ಉಪ ವಿಭಾಗ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ತಾಲೂಕಿನ ಆನವಟ್ಟಿಯಲ್ಲಿ ಸೋಮವಾರ ನಡೆಯಿತು.  ಘಟನೆ ಹಿನ್ನೆಲೆ:  ಎಣ್ಣೆಕೊಪ್ಪ ಗ್ರಾಮದ ರವಿ ದುರ್ಗಪ್ಪ ಎಂಬ 24 ವರ್ಷದ ಯುವಕ ವಿದ್ಯುತ್ ಗುತ್ತಿಗೆದಾರರ ಬಳಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದನು. ಕುಬಟೂರು ಗ್ರಾಮದಲ್ಲಿ ಡಿ.17 ರಂದು…

Read Full News

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…

Read Full News

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ನೆವಟೂರು ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಅಮಾಯಕನೊಬ್ಬನ ಮೇಲೆ ನೆರೆಮನೆಯ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆವಟೂರು ಗ್ರಾಮದ ನವೀನ್ ಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಗಾಯಾಳು ಮೆಗ್ಗಾನ್ ಗೆ ದಾಖಲಾಗಿದ್ದಾನೆ. ತನ್ನ ಜಮೀನಿನಲ್ಲಿ ಜೆಸಿಬಿ ಯಲ್ಲಿ ಟ್ರಂಚ್ ಹೊಡೆಸುತಿದ್ದ ಪಕ್ಕದ ಮನೆಯ  ಪದ್ಮನಾಭ ಎಂಬುವವರ ಬಳಿ ಯಾಕೆ ನನ್ನ ಜಾಗದಲ್ಲಿ ಟ್ರಂಚ್ ಮಾಡುತಿದ್ದೀರಿ ಎಂದು ಕೇಳಿದ್ದಕ್ಕೆ ಏಕಾಏಕಿ ಪಕ್ಕದ ಮನೆಯ ಪದ್ಮನಾಭ ಮತ್ತು ಆತನ ಮಗ…

Read Full News

ರಿಪ್ಪನ್‌ಪೇಟೆ : ಗ್ರಾಪಂ ಸದಸ್ಯರ ಕಡೆಗಣನೆ ವಿರೋಧಿಸಿ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ – ಕಾಮಗಾರಿ ಉದ್ಘಾಟನೆಯ ಪ್ಲೆಕ್ಸ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯನ ಫೋಟೋನೂ ಇಲ್ಲ, ಹೆಸರು ಇಲ್ಲ..!!!!!|Ripponpet

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗವಟೂರು ವಾರ್ಡ್ ನಲ್ಲಿ ಶನಿವಾರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ನೆರವೇರಿಸಿದ  ಸಂಪರ್ಕ ರಸ್ತೆ ಡಾಂಬರೀಕರಣ ಕಾಮಗಾರಿ ಗುದ್ದಲಿಪೂಜೆಯ ಸಂದರ್ಭದಲ್ಲಿ ವಾರ್ಡ್ ನ ಸದಸ್ಯ ಗಣಪತಿ ಪೋಟೋವನ್ನು ಪ್ಲೆಕ್ಸ್ ನಲ್ಲಿ ಹಾಕದೇ ನಿರ್ಲಕ್ಷಿಸಿದ್ದಾರೆಂದು ಅರೋಪಿಸಿ ಇಂದು ಗ್ರಾಮ ಪಂಚಾಯ್ತಿ ಕಛೇರಿ ಎದುರು ಗಾಂಧಿ ಭಾವಚಿತ್ರವನ್ನಿಟ್ಟುಕೊಂಡು ಕಾಂಗ್ರೆಸ್ ಬೆಂಬಲಿತ ಸದಸ್ಯರು ಪ್ರತಿಭಟನೆ ನಡೆಸಿದರು. ಗವಟೂರು ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿ ಇಬ್ಬರು, ಓರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಚುನಾವಣೆಯಲ್ಲಿ…

Read Full News

ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ|sucide

ಅಂತಿಮ ವರ್ಷದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಆಚಾಪುರ ಗ್ರಾ.ಪಂ . ವ್ಯಾಪ್ತಿಯ ಕೆರೆಹಿತ್ತಲು ಗ್ರಾಮದ ನಿವಾಸಿ ಕಾಲೇಜು ವಿದ್ಯಾರ್ಥಿಯೋರ್ವ ಅಡಕೆ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಗ್ರಾಮದ ವೀರಭದ್ರಪ್ಪ ಗೌಡರ ಪುತ್ರ ಗೌತಮ್ (20) ಮೃತ ಯುವಕ ಈತ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಬೆಳಿಗ್ಗೆ ಅಡಕೆ ತೋಟದ ಕೃಷಿ…

Read Full News

ಆಗುಂಬೆಯಲ್ಲಿ ಚಿತ್ರದುರ್ಗ ಮಹಿಳೆಯ ಕೊಲೆ -ಓರ್ವನ ಬಂಧನ|Murder

ಆಗುಂಬೆ ಹೊನ್ನೇತಾಳು ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ.  ಚಿತ್ರದುರ್ಗದಿಂದ‌ ಜಮೀನ್ದಾರ್ ರೊಬ್ಬರ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಪಾರ್ವತಮ್ಮ ಎಂಬುವರು ಶವವಾಗಿ ಪತ್ತೆಯಾಗಿದ್ದಾರೆ. ಇದನ್ನು ಕೊಲೆ ಎಂದು ಬಣ್ಣಿಸಲಾಗುತ್ತಿದೆ.  ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾರ್ವತಿ (45) ಮೃತ ಮಹಿಳೆ. ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಪಾರ್ವತಿ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ…

Read Full News

ಸೌಂದರ್ಯ ಮತ್ತು ಸಂಪತ್ತು ಶಾಶ್ವತವಲ್ಲ – ಧರ್ಮವೊಂದೆ ಶಾಶ್ವತ : ಮಳಲಿ ಶ್ರೀಗಳು|Ramakrishna school

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಿಗೆ ಸಂಸ್ಕಾರ ಸಂಸ್ಕೃತಿಯನ್ನು ಕಲಿಸುವುದರೊಂದಿಗೆ ಗುರು ಹಿರಿಯರನ್ನು ಪ್ರೀತಿ ವಿಶ್ವಾಸ ಗೌರವಾದರದಿಂದ ಕಾಣುವ ಗುಣವನ್ನು ಕಲಿಸಬೇಕು. ವಿದ್ಯ ಕದಿಯಲಾರದ ವಸ್ತುವಾಗಿದ್ದು ಕಲಿತ ವಿದ್ಯೆಯನ್ನು ಇನ್ನೊಬ್ಬರಿಗೆ  ದಾನ ಮಾಡಬೇಕು ರೂಪ ಮತ್ತು  ಹಣ ಶಾಶ್ವತವಲ್ಲ ಧರ್ಮವೊಂದೆ ಶಾಶ್ವತ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ  ಶಾಲಾ ವಾರ್ಷೀಕೋತ್ಸವ ಮತ್ತು ಶ್ರೀಮಾತೆ ಶಾರದಾದೇವಿಯ ಜಯಂತಿ ಮಹೋತ್ಸವ ಕಾರ್ಯಕ್ರಮದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಶೀರ್ವಚನ ನೀಡಿ ಹೂವು ತನ್ನ…

Read Full News

ರಿಪ್ಪನ್‌ಪೇಟೆಯಲ್ಲಿ ಚಿರತೆ ದಾಳಿ ಪ್ರಕರಣ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|leopard

ರಿಪ್ಪನ್‌ಪೇಟೆ : ಶನಿವಾರ ತಡರಾತ್ರಿ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮಳವಳ್ಳಿ ಸಂಪರ್ಕ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಹಸುವೊಂದನ್ನು ಬಲಿ ಪಡೆದಿತ್ತು. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ ಎಂಬುವವರ ಜೀವನಕ್ಕೆ ಆಸರೆಯಾಗಿದ್ದ ಹಸುವನ್ನು ಚಿರತೆ ಬಲಿ ಪಡೆದುಕೊಂಡ ಘಟನೆ ನಡೆದಿತ್ತು. ಮಳವಳ್ಳಿ ಗ್ರಾಮದಿಂದ ಶಾಲಾ ಕಾಲೇಜ್‌ಗೆ ಮತ್ತು ದಿನನಿತ್ಯದ ವ್ಯವಹಾರಕ್ಕಾಗಿ ಜನರು ಕಾಲ್ನಡಿಗೆಯಲ್ಲಿ ಬಂದು ಹೋಗುತ್ತಿದ್ದು ಈ ಘಟನೆಯಿಂದಾಗಿ ಗ್ರಾಮಸ್ಥರನ್ನು ಭಯಬೀತರನ್ನಾಗಿಸಿದೆ.ಓಡಾಡಲು ಭಯಪಡುವ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ಘಟನೆಯ ಕುರಿತು ತಕ್ಷಣ ಮಾಹಿತಿ ಪಡೆದುಕೊಂಡ ಸಾಗರ…

Read Full News

ರಿಪ್ಪನ್‌ಪೇಟೆಯಲ್ಲಿ ಚಿರತೆ ಪ್ರತ್ಯಕ್ಷ – ದಾಳಿಗೆ ಬಲಿಯಾದ ಹಸು : ಆತಂಕದಲ್ಲಿ ಗ್ರಾಮಸ್ಥರು|leopard

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿ ಜಾನುವಾರು ಬಲಿ  ಪಡೆದುಕೊಂಡ  ಘಟನೆ ನಡೆದಿದೆ. ರಿಪ್ಪನ್‌ಪೇಟೆ – ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಸಮೀಪದ ಮಳವಳ್ಳಿ ಗ್ರಾಮದ ಸಂಪರ್ಕ ರಸ್ತೆಯ ಬದಿಯಲ್ಲಿ ತಡರಾತ್ರಿ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ, ಸಾಯಿಸಿ ಹಸುವಿನ ಹೊಟ್ಟೆಯೊಳಗಿದ್ದ ಕರುವನ್ನು ಎಳೆದು ಸುಮಾರು ನೂರು ಅಡಿಯಷ್ಟು ದೂರದಲ್ಲಿ ಎಳೆದು ಹಾಕಿ ಹೋಗಿರುವಂತಹ ಹೃದಯಾ ವಿದ್ರಾವಕ ಘಟನೆ ನಡೆದಿದೆ. ಮಳವಳ್ಳಿ ಗ್ರಾಮದ ಬಡ ರೈತ ವಿಶ್ವನಾಥ್…

Read Full News

ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರ : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಭವ್ಯ ಭಾರತ ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿನ ಬ್ರಾಹ್ಮಣ ಸಮಾಜದ ಶ್ರೀರಾಮಮಂದಿರದ ಸಮುದಾಯ ಭವನದ ಮೇಲಂತಸ್ತು ಕಟ್ಟಡದ ಕಾಮಗಾರಿಯನ್ನು ವೀಕ್ಷಿಸಿ ನಂತರ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ದೇಶದ ಅಭಿವೃದ್ಧಿಯಲ್ಲಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಾಗಿದೆ.ಧಾರ್ಮಿಕ ,ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಈ ಸಮಾಜ ದೇಶದ ಪ್ರಗತಿಯಲ್ಲಿ…

Read Full News

ಹೊಸನಗರ ಸಮೀಪ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ : ಚಾಲಕನಿಗೆ ಗಂಭೀರ ಗಾಯ|Accident

ಇನ್ನೊವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ನಡೆದು ಕಾರು ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ನಗರ ಹೋಬಳಿ ಮತ್ತಿ ಮನೆ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇನ್ನೊವಾ ಕಾರಿನ ಚಾಲಕ ಸಿದ್ದರಾಜು ಎಂಬುವರ ಕಾಲಿಗೆ, ಹೊಟ್ಟೆಗೆ ಹಾಗೂ ಕಿವಿಗೆ  ಗಂಭೀರವಾಗಿ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.  ಕಾರು ಮೈಸೂರಿನಿಂದ ಸಿಗಂದೂರು ಕಡೆಗೆ ತೆರಳುತಿದ್ದು…

Read Full News

ಹಣದಾಸೆಗೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಕೊಲೆ ಮಾಡಿ ಚಿನ್ನ ಕದ್ದೊಯ್ದಿದ್ದ ಆರೋಪಿಯ ಬಂಧನ|Arrested

ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 3 ರಂದು‌ ಭದ್ರಾವತಿಯ ಸುಣ್ಣದಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕೊಲೆ ಮಾಡಿ ಆರೋಪಿ ಬಂಗಾರದ ಓಲೆ ಮತ್ತು ಮೂಗುತಿಯೊಂದಿಗೆ ಪರಾರಿಯಾಗಿದ್ದನು. ಸದರಿ ಜಟಿಲ ಪ್ರಕರಣವನ್ನು ಕೈಗೆತ್ತಿಕೊಂಡ ಪೇಪರ್ ಟೌನ್ ಪೊಲೀಸರು ಕುಂದಾಪುರದ ಕರುಣಾಕರ ದೇವಾಡಿಗ (24) ಎಂಬಾತನನ್ನು ಬಂಧಿಸಿ 14000 ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ….

Read Full News