Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ – ಪ್ರಯಾಣಿಕರ ಪರದಾಟ

ದಸರಾ ಎಫೆಕ್ಟ್ – ಆಗುಂಬೆ ಘಾಟಿಯಲ್ಲಿ ಸಂಪೂರ್ಣ ಜಾಮ್! ತೀರ್ಥಹಳ್ಳಿ : ದಸರಾ ಹಬ್ಬವನ್ನು ಮುಗಿಸಿ ಪ್ರತಿಯೊಬ್ಬರು ಊರುಗಳಿಗೆ ಹೊರಟ ಕಾರಣ ವಾಹನಗಳ ದಟ್ಟನೆ ಜಾಸ್ತಿಯಾಗಿರುವುದರಿಂದಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ನಡೆದಿದೆ. ಮಂಗಳೂರು, ಉಡುಪಿ ಭಾಗದಿಂದ ತೀರ್ಥಹಳ್ಳಿ ಮೂಲಕ ಶಿವಮೊಗ್ಗ ಬೆಂಗಳೂರಿಗೆ ದಸರಾ ರಜೆ ಮುಗಿಸಿ ಹೊರಟ ಕಾರಣ ಘಾಟಿಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನಗಳು ಕಳೆದ ಅರ್ಧ ಗಂಟೆಯಿಂದಲೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ….

Read More

ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು

ಕಾರು ಅಪಘಾತ – ಚಾಲಕ ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕುಂಸಿ ಗ್ರಾಮದ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.‌ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ. ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಕುಂಸಿ ಕೆರೆ ಕೋಡಿ ಬಳಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮಡಿಕೇರಿ ಮೂಲದ ನಂದನ್(22), ಕೋಲಾರ ಮೂಲದ ಕೋದಂಡ(18), ಮಂಡ್ಯ ಮೂಲದ ಯೋಗೇಶ್ (24) ಹಾಗೂ…

Read More

SHIVAMOGGA | ವೈಭವದ ದಸರಾ ಮೆರವಣಿಗೆ

SHIVAMOGGA | ವೈಭವದ ದಸರಾ ಮೆರವಣಿಗೆ ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ. ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಸುಮಾರು 450 ಕೆಜಿ ತೂಕದ ಬೆಳ್ಳಿಯ ಅಂಬಾರಿ ಹೊತ್ತು ಸಾಗರ ಆನೆ ಸಾಗಿದೆ. ಸಚಿವ ಮಧು ಬಂಗಾರಪ್ಪ ದಂಪತಿ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್. ಅರುಣ್, ಬಲ್ಕಿಶ್ ಬಾನು, ಡಾ. ಧನಂಜಯ ಸರ್ಜಿ…

Read More

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

ಉಡುಪಿ ಮೂಲದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ‌ ನೇಣಿಗೆ ಶರಣು

ಉಡುಪಿ ಮೂಲದ ವ್ಯಕ್ತಿ ಖಾಸಗಿ ಲಾಡ್ಜ್ ನಲ್ಲಿ‌ ನೇಣಿಗೆ ಶರಣು ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಕಾರಣದಿಂದ ಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ತೀರ್ಥಹಳ್ಳಿಯ ಖಾಸಗಿ ಹೋಟೆಲ್ ವೊಂದರಲ್ಲಿ ಶುಕ್ರವಾರ(ಅ.11) ರಂದು ನಡೆದಿದೆ. ಪಟ್ಟಣದ ಬಾಳೆಬೈಲಿನಲ್ಲಿರುವ ಖಾಸಗಿ ಹೋಟೆಲ್ (ಲಾಡ್ಜ್ ) ವೊಂದರಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಉಡುಪಿ ಮೂಲದ ಪ್ರಸನ್ನ ಶೆಟ್ಟಿ ( 45) ಎಂಬ ವ್ಯಕ್ತಿ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ರೂಮ್ ನಲ್ಲೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದಲ್ಲಿ ಅ. 09 ರಿಂದ 10ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕಬ್ಬಡಿ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 7 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ ತೀರ್ಥಹಳ್ಳಿ : ಕಾಡಾನೆ ದಾಳಿಯಿಂದ  ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ. ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ….

Read More

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More