Headlines
ರಫ಼ಿ ರಿಪ್ಪನ್ ಪೇಟೆ

ರಫ಼ಿ ರಿಪ್ಪನ್ ಪೇಟೆ

ನಮಸ್ಕಾರ, ನಾನು ರಫಿ ರಿಪ್ಪನ್‌ಪೇಟೆ. ​'ಪೋಸ್ಟ್‌ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್‌ಮ್ಯಾನ್ ನ್ಯೂಸ್. ​ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್‌ಮ್ಯಾನ್ ನ್ಯೂಸ್.” ​ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. ​'ಪೋಸ್ಟ್‌ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ​ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ​ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ​ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್‌ಪೇಟೆ ಸಂಪಾದಕರು, ಪೋಸ್ಟ್‌ಮ್ಯಾನ್ ನ್ಯೂಸ್ 🌐 [www.postmannewskannada.com]

ರಿಪ್ಪನ್‌ಪೇಟೆಯಲ್ಲಿ ವಿಜ್ರಂಭಣೆಯಿಂದ ಜರುಗಿದ 75ನೇ ಸ್ವಾತಂತ್ರ ಅಮೃತ ಮಹೋತ್ಸವ :

ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಆಗಸ್ಟ್ ೧೩ ರಿಂದ ಹರ್‌ಗರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಂಡ ಜನತೆ ೧೫ ರ ಸೋಮವಾರ ಅಧಿಕೃತ ಧ್ವಜಸ್ತಂಭಗಳಲ್ಲಿ ಧ್ವಜಾರೋಹಣ ನೇರವೇರಿಸುವುದರೊಂದಿಗೆ ರಾಷ್ಟ ಗೌರವ ಸಲ್ಲಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ,ವೊ ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ…

Read Full News

ರಿಪ್ಪನ್‌ಪೇಟೆ ಶ್ರೀ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಈಶ್ವರ್ ಶೆಟ್ಟಿ ಆಯ್ಕೆ :

ರಿಪ್ಪನ್ ಪೇಟೆ : ಇಲ್ಲಿಯ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷರಾಗಿ ಆರ್.ಈ. ಈಶ್ವರ್ ಶೆಟ್ಟಿ ಆಯ್ಕೆ ಆಗಿದ್ದಾರೆ. ರಿಪ್ಪನ್ ಪೇಟೆಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮುಜರಾಯಿ ಇಲಾಖೆಯ ದೇವಸ್ಥಾನವಾಗಿದ್ದು, ದೇವಸ್ಥಾನದ ಧರ್ಮದರ್ಶಿ ಸಮಿತಿಗೆ ಸೇರಲು ಆಕಾಂಕ್ಷಿಗಳಾಗಿ ಸುಮಾರು 82 ಜನ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಭಾರಿ ಪೈಪೋಟಿ ನಡೆದಿದ್ದು, ಇತ್ತೀಚಿಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಧರ್ಮದರ್ಶಿ ಸಮಿತಿ 9 ಜನರ ಸಮಿತಿ ಆಯ್ಕೆ ಮಾಡಿತ್ತು. ಈ ಆಯ್ಕೆಯಂತೆ ಮಾನ್ಯ ಜಿಲ್ಲಾಧಿಕಾರಿಗಳು ಇತ್ತೀಚಿಗೆ…

Read Full News

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read Full News

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಬೆಂಗಾವಲು ಜೀಪ್ ಅಪಘಾತ :

ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ಜೀಪ್ ಜಂಕ್ಷನ್ ಬಳಿ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.  ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

Read Full News

ಶಿವಮೊಗ್ಗ ಗುಂಪು ಘರ್ಷಣೆ : ಓರ್ವನಿಗೆ ಚಾಕು ಇರಿತ – ಭದ್ರಾವತಿ ನಗರದಲ್ಲೂ 144 ಸೆಕ್ಷನ್ ಜಾರಿ

ಸ್ವಾತಂತ್ರ್ಯದ 75 ನೇ ಅಮೃತ ಮಹೋತ್ಸವದ ದಿನದಂದೆ ಶಿವಮೊಗ್ಗದಲ್ಲಿ ವಿಷಮ ಪರಿಸ್ಥಿತಿ ಭುಗಿಲೆದ್ದಿದೆ. ಓರ್ವನಿಗೆ ಚೂರಿ ಇರಿಯಲಾಗಿದೆ ಎನ್ನಲಾಗುತ್ತಿದೆ. ಗಾಂದಿ ಬಜಾರ್ ನಲ್ಲಿ ಪ್ರೇಮ್ ಸಿಂಗ್ ಓರ್ವನಿಗೆ ಚಾಕು ಇರಿದ ಬೆನ್ನಲ್ಲೇ ಅಶೋಕ ನಗರದಲ್ಲಿ ಮತ್ತೋರ್ವನಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಅನೇಕ ಗೊಂದಲಗಳಿವೆ. ಇದರಿಂದ ಸ್ವಾತಂತ್ರ್ಯದ ಸಂಭ್ರಮಾಚರಣೆ ಎಲ್ಲವೂ ನೆಗೆದುಬಿದ್ದು ಹೋಗಿದೆ.ಅದರಂತೆ ಭದ್ರಾವತಿ ನಗರದಲ್ಲೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಕಾರ್ಮೊಡ ಕವಿದಿದೆ

Read Full News

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read Full News

ಅದ್ದೂರಿಯಾಗಿ ಜರುಗಿದ ಗುರುಸಾರ್ವಭೌಮರ 351ನೇ ಆರಾಧನ ಮಹೋತ್ಸವ

ರಿಪ್ಪನ್‌ಪೇಟೆ: ಸಮೀಪದ ಬೈರಾಪುರ ಗ್ರಾಮದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರದ್ಧಾ ಭಕ್ತಿಯಿಂದ 351ನೇ ಗುರುಸಾರ್ವಭೌಮರ ಆರಾಧನಾ ಮಹೋತ್ಸವವು ಸಂಭ್ರಮದೊಮದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಗುರುರಾಯರಿಗೆ ಪಂಚಾಮೃತ ಅಭಿಷೇಕ, ಪವಮಾನ ಪೂಜೆ ಹೋಮ ಹವನಗಳು ನಂತರ ರಾಯರಿಗೆ ಅಲಂಕಾರ ಪೂಜೆ ಮಹಾಮಂಗಳಾರತಿ ಜರುಗಿತು. ನಂತರ ಸಾಮೂಹಿಕ ಅನ್ನಸಂತರ್ಪಣೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರ ದಂಡು ಹರಿದು ಬಂದಿತು.

Read Full News

ರಿಪ್ಪನ್ ಪೇಟೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮ : ಸಂಭ್ರಮದ ಯಶಸ್ವಿಗೆ ಸಕಲ ಸಿದ್ಧತೆ : ಮಂಜುಳಾ ಕೇತಾರ್ಜಿ ರಾವ್

ರಿಪ್ಪನ್ ಪೇಟೆ : ಆಜಾದ್ ಕಿ ಅಮೃತ್ ಮಹೋತ್ಸವ ಅಂಗವಾಗಿ ರಿಪ್ಪನ್ ಪೇಟೆಯ ಗ್ರಾಮಾಡಳಿತ ಸಕಲಸಿದ್ಧತೆಯನ್ನು ಮಾಡಿದ್ದು 3000ಕ್ಕೂ ಅಧಿಕ ಜನರು ಈ ಸಂಭ್ರಮಕ್ಕೆ ಸಾಕ್ಷಿಗಳಾಗಲಿದ್ದಾರೆ ಎಂದು ಪಟ್ಟಣದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತರ್ಜಿ ರಾವ್ ಹೇಳಿದರು.  ಇಂದು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿದ ಅವರು ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಆಜಾದ್ ಕೀ ಅಮೃತ್ ಮಹೋತ್ಸವವನ್ನು ಸಡಗರದಿಂದ ಆಚರಿಸಲು ದೇಶಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಸಿದ್ಧತೆಯನ್ನು ನಡೆಸುತ್ತಿದ್ದಾರೆ ಹಾಗೆಯೇ ನಮ್ಮ ರಿಪ್ಪನ್ ಪೇಟೆ ಗ್ರಾಮ…

Read Full News

ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೀವೆ ಹಿಂಗೆ ಎಡವಟ್ಟು ಮಾಡಿದ್ರೆ ಹೆಂಗೆ???? ಇದು ನಿಮ್ಮ ಅವಿವೇಕಿತನವೋ???? ಅಸಡ್ಡೆಯೋ????

ತೀರ್ಥಹಳ್ಳಿ: ದೇಶಾದ್ಯಂತ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ದೇಶದ ಹಬ್ಬವಾಗಿ ಆಚರಿಸುತ್ತಿದ್ದು ಇಂದಿನಿಂದ ಆಗಸ್ಟ್ ಹದಿನೈದರವರೆಗೆ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದಾರೆ.ದೇಶಪ್ರೇಮಿಗಳು ತ್ರಿವರ್ಣ ಧ್ವಜಕ್ಕೆ ಪೂಜೆ ನೆರವೇರಿಸಿ ಮನೆಯ ಮುಂಭಾಗ ಹಾಗೂ ಮನೆಯ ಮೇಲೆ ಬಾವುಟವನ್ನು ಹಾರಿಸಿ ನಮಸ್ಕರಿಸುತ್ತಿದ್ದಾರೆ. ಆದರೆ ಕೆಲವು ಸರ್ಕಾರಿ ಅಧಿಕಾರಿಗಳು  ತ್ರಿವರ್ಣಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರಾ ಎಂಬ ಪ್ರೆಶ್ನೆ ಮೂಡುತ್ತಿದೆ. ಕಾರಣ ತೀರ್ಥಹಳ್ಳಿ ಕ್ಷೇತ್ರದ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನೆರವೇರಿಸಿದ ಧ್ವಜಾರೋಹಣದಲ್ಲಿ ಎಡವಟ್ಟು ಎದ್ದು ಕಾಣಿಸುತ್ತಿದ್ದು ಎಲ್ಲಾ ಕಡೆ ಟ್ರೊಲ್ ಆಗುತ್ತಿದೆ….

Read Full News

ಶಿವಮೊಗ್ಗದ ಶಾಪಿಂಗ್ ಮಾಲ್​ನಲ್ಲಿ ಸಾರ್ವಕರ್​ ಭಾವಚಿತ್ರ ವಿವಾದ!!! ಪೊಲೀಸರಿಂದ ಎಂಡಿ ಶರೀಫ್​ ವಶಕ್ಕೆ! ಠಾಣೆಯ ಎದುರು ರಾತ್ರೋರಾತ್ರಿ ನಡೀತು ಪ್ರತಿಭಟನೆ

ಶಿವಮೊಗ್ಗ: ಸಿಟಿ ಸೆಂಟ್ರಲ್​ ಮಾಲ್ : ನಿನ್ನೆ ಮಾಲ್​ನಲ್ಲಿ ವೀರ ಸಾರ್ವಕರ್​ ಫೋಟೋ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ, ತುಂಗಾ ನಗರ ಪೊಲೀಸ್ ಠಾಣೆಯ ಎದುರು ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಘಟನೆ ಸಂಬಂಧ ಕೇಸ್​ ದಾಖಲಿಸಿದ್ದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನೆಡಸ್ತಿದ್ದಾರೆ ಎಂಬ ವಿಚಾರ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಕೆಲವು ಕಾರ್ಯಕರ್ತರು ಠಾಣೆ ಎದುರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಒಂದು ಗಂಟೆಗೂ ಅಧಿಕ ಕಾಲ ಸ್ಥಳದಲ್ಲಿ…

Read Full News

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಳಲಿ ಮಠದಲ್ಲಿ ‘ಹರ್ ಘರ್ ತಿರಂಗಾ” — ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧ್ವಜಾರೋಹಣ

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅಂಗವಾಗಿ ಮಳಲಿ  ಮಠದ  ಡಾ. ಶ್ರೀ ಗುರು ನಾಗಭೂಷಣ  ಶಿವಾಚಾರ್ಯ  ಮಹಾಸ್ವಾಮಿಗಳು ಧ್ವಜಾರೋಹಣ  ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ  ಮಾತನಾಡಿ  ರಾಷ್ಟ್ರ ಧ್ವಜವು  ಪ್ರತಿಯೊಂದು ರಾಷ್ಟ್ರದ  ನಾಗರಿಕರ ಐಕ್ಯತೆಯ  ಸಂಕೇತವಾಗಿದೆ. ಹಾಗೆಯೇ ದೇಶದ ಪ್ರತಿಯೊಬ್ಬರು ರಾಷ್ಟ್ರ ಧ್ವಜ ವನ್ನು ಗೌರವಿಸ ಬೇಕು. ಹಾಗೆಯೇ  ನಮ್ಮ ದೇಶ  ಸ್ವಾತಂತ್ರ್ಯದ  ಅಮೃತ ಮಹೋತ್ಸಹ ವವನ್ನು ಆಚರಿಸುತ್ತಿದೆ. ಈ ಬಾರಿಯ ಸ್ವಾತಂತ್ರ್ಯತ್ಸ ವ ನಾಡಿನ ಸಕಲರಿಗೂ  ಒಳಿತನ್ನು ಮಾಡಲಿ ಎಂದು…

Read Full News

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read Full News

ಶಿವಮೊಗ್ಗದ ಶಾಪಿಂಗ್ ಮಾಲ್​ ನಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ವಿವಾದ : ಬಿಗುವಿನ ವಾತಾವರಣ

ಶಿವಮೊಗ್ಗ : ನಗರದ ಸಿಟಿ ಸೆಂಟ್ರಲ್​ ಮಾಲ್​ ವಿವಾದವೊಂದಕ್ಕೆ ಸಾಕ್ಷಿಯಾಗಿ ಹಲವು ಸನ್ನಿವೇಶಗಳನ್ನು ಕಂಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಾಡಿದ್ದ ಅಲಂಕಾರದ ನಡುವೆ ವೀರ ಸಾರ್ವಕರ್​ ಫೋಟೋಹಾಕಿದ್ದನ್ನ ಪ್ರಶ್ನಿಸಿ ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರಹಾಕಿ ಪ್ರತಿಭಟಿಸಿದರೆ, ಬಿಜೆಪಿ ಕಾರ್ಯಕರ್ತರು ವೀರ ಹೋರಾಟಗಾರರಿಗೆ ಎಸ್​ಡಿಪಿಐ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿ ಮಾಲ್​ನ ಎದುರಲ್ಲೆ ಪ್ರತಿಭಟನೆ ನಡೆಸಿತು. ಮನೆಮನೆಗೂ ತಿರಂಗಾ ಅಭಿಯಾನದ ನಡುವೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ನಗರ ಪ್ರತಿಷ್ಟಿತ ಕಟ್ಟಡಗಳು ಹಾಗೂ ಸಾರ್ವಜನಿಕ…

Read Full News

ಬಿಜೆಪಿಯಿಂದ ಸಾಮಾನ್ಯ ಕಾರ್ಯಕರ್ತರ ನಿರ್ಲಕ್ಷ : ಹಿರಿಯ ಕಾರ್ಯಕರ್ತ ಯೋಗೇಂದ್ರಪ್ಪ ಗೌಡ ಆರೋಪ

ರಿಪ್ಪನ್ ಪೇಟೆ: ಹೊಸನಗರ ತಾಲೂಕಿನಲ್ಲಿ ಕಳೆದ 35 ವರ್ಷಗಳಿಂದ ಪ್ರಾಮಾಣಿಕ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದ ಹಿರಿಯ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷಕ್ಕೆ ಒಳಪಡಿಸಲಾಗಿದೆ. ಸರಕಾರ ಮತ್ತು ಎಲ್ಲಾ ಅಧಿಕಾರವಿದ್ದರೂ ಹಿರಿಯ ಕಾರ್ಯಕರ್ತರು ಕಡೆಗಣಿಸಿ ನಿನ್ನೆ ಮೊನ್ನೆ ಬಂದಂತಹ ಕಾಂಗ್ರೆಸ್ ಪಕ್ಷದವರಿಗೆ ಮಣೆ ಹಾಕಿ ನಾಮನಿರ್ದೇಶನ ಮಾಡಲಾಗುತ್ತಿದೆ ಆದ್ದರಿಂದ ಆಗಸ್ಟ್ 17ರ ಬುಧವಾರ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರ ಕಚೇರಿ ಎದುರು ಧರಣಿ ನಡೆಸುವುದಾಗಿ ಪಕ್ಷದ ಹಿರಿಯ ಕಾರ್ಯಕರ್ತರಾದ ಯೋಗೇಂದ್ರಪ್ಪ ಗೌಡ ರವರು ತಿಳಿಸಿದ್ದಾರೆ.  ಇಂದು ಪಟ್ಟಣದಲ್ಲಿ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು…

Read Full News

ಅಪಾಯದಂಚಿನಲ್ಲಿ ಕಾರಗೋಡು ಸರ್ಕಾರಿ ಶಾಲೆ : ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ರಿಪ್ಪನ್‌ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆಯ ಹಿಂಭಾಗವಿರುವ ಅಕೇಶಿಯ ಮರ ಬೀಳುವ ಆತಂಕದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನದೂಡುತಿದ್ದಾರೆ. ಇಲ್ಲಿನ ಕಾರಗೋಡು ಕಿರಿಯ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಬೆಳೆದುನಿಂತ ಅಕೇಶಿಯ ನೆಡುತೋಪು ಇದ್ದು ಈ ಮರಗಳ ರೆಂಬೆಕೊಂಬೆಗಳು ಶಾಲೆಯ ಮೇಲ್ಛಾವಣಿಗೆ ಬಾಗಿ ನಿಂತಿವೆ. ಮಲೆನಾಡಿನ ಈ ಭಾಗದಲ್ಲಿ ಸುರಿಯುತ್ತಿರುವ  ಭಾರಿ ಮಳೆ ಗಾಳಿಯಿಂದ ಜನ ತತ್ತರಗೊಂಡಿದ್ದು ಇದೀಗ ಯಾವ  ಗಳಿಗೆಯಲ್ಲಾದರೂ ಶಾಲೆಯ ಮೇಲೆ ಮರ ಬೀಳಬಹುದೆಂಬ ಆತಂಕ ಪೋಷಕರನ್ನು ಕಾಡುತ್ತಿದೆ.ಇದರಿಂದ…

Read Full News

ಶಾಲೆಯಿಂದ ಮನೆಗೆ ತೆರಳುತಿದ್ದ ಮಗು ಕಾರು ಡಿಕ್ಕಿಯಾಗಿ ಸಾವು : ಆನಂದಪುರ ಸಮೀಪದಲ್ಲೊಂದು ಹೃದಯವಿದ್ರಾವಕ ಘಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚೆನ್ನ ಕೊಪ್ಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಚೆನ್ನಕೊಪ್ಪ ಗ್ರಾಮದಲ್ಲಿ ಶಾಲೆ ಮುಗಿದ ನಂತರ ವಿದ್ಯಾರ್ಥಿ ಮನೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಭಿಷೇಕ್ (6 ) ವರ್ಷ  ಸಾವಿಗೀಡಾದ ಪುಟಾಣಿ ವಿದ್ಯಾರ್ಥಿಯಾಗಿದ್ದಾನೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ವಿದ್ಯಾರ್ಥಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗುವಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಸ್ಥಳೀಯರು ವಾಹನದಲ್ಲಿ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು…

Read Full News

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ :

ಸಾಗರ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಜೋಗದ ಶಿರೂರು ಕೆರೆಯಲ್ಲಿ ಶುಕ್ರವಾರ ನಡೆದಿದೆ. ಗಾಯಿತ್ರಿ(43), ಮೃತ ದುರ್ಧೈವಿಯಾಗಿದ್ದಾರೆ.ಇವರು ಕೆ.ಇ.ಬಿ  ನೌಕರ ಶಂಕರ್ ಅವರ ಪತ್ನಿ ಎಂದು ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಹಿಳೆ ಕೆರೆಗೆ ಹಾರುತ್ತಿರುವುದನ್ನು ಹೋಂ ಗಾರ್ಡ್ ಒಬ್ಬರು ಗಮನಿಸಿದ್ದಾರೆ. ಈ ಮಾಹಿತಿಯನ್ನು ಜೋಗ ಠಾಣೆಯ ಪಿಎಸ್ಐ ಅವರಿಗೆ ನೀಡಿದ್ದು,ತಕ್ಷಣ  ಸ್ಥಳಕ್ಕಾಗಮಿಸಿದ ಸಬ್ ಇನ್ಸ್ ಪೆಕ್ಟರ್ ನಿರ್ಮಲಾ ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತಿದ್ದಾರೆ. ಕಾರ್ಗಲ್ ಪೊಲೀಸ್…

Read Full News

ರಿಪ್ಪನ್‌ಪೇಟೆ : ದಂಡದ ಬದಲು ಇನ್ಸೂರೆನ್ಸ್ ಮಾಡಿಸಿದ ಪೊಲೀಸರು

ರಿಪ್ಪನ್‌ಪೇಟೆ :  ಇಂದು ಪಟ್ಟಣದ ಪೊಲೀಸರು ಬೈಕ್ ಸವಾರರಿಗೆ ಅವಶ್ಯಕ ದಾಖಲೆಗಳ ಬಗ್ಗೆ ವಿನೂತನವಾಗಿ ಚುರುಕು ಮುಟ್ಟಿಸುವ ಕಾರ್ಯಾಚರಣೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೋಳಿ ನೇತ್ರತ್ವದ ತಂಡ ಇಂದು ಪಟ್ಟಣದಲ್ಲಿ ವಾಹನಗಳನ್ನು ತಡೆ ಹಿಡಿದು ಸಾವಿರ ದಂಡ ಕಟ್ಟುವ ಬದಲು ಸಾವಿರ ರೂಪಾಯಿಯಲ್ಲೇ ಇನ್ಸೂರೆನ್ಸ್ ಮಾಡಿಸಿ ಎಂದು ಸವಾರರಿಗೆ ಬುದ್ದಿ ಹೇಳಿ ಸ್ಥಳದಲ್ಲಿಯೇ ಇನ್ಸೂರೆನ್ಸ್ ಹಾಕಿಸಿ ಕಳುಹಿಸುತ್ತಿದ್ದ ದೃಶ್ಯ ಕಂಡುಬಂದಿತ್ತು. ಪೊಲೀಸರು ವಾಹನ ಅಡ್ಡ ಹಾಕಿದ್ರೆ ಸಾಕು, ಲೈಸೆನ್ಸ್ ಎಲ್ಲಿ, ಆರ್.ಸಿ. ಕೊಡು, ಎಮಿಷನ್…

Read Full News

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ :

ರಿಪ್ಪನ್‌ಪೇಟೆ : ಇಂದು ಶಾಸಕರು ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಸಾಗರದಿಂದ ರಿಪ್ಪನ್‌ಪೇಟೆ ಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಮಹಿಳೆಯೊಬ್ಬರನ್ನು ತಮ್ಮ ವಾಹನದಲ್ಲಿಯೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನೆವಟೂರು ಸಮೀಪದ ಆನೆಕೆರೆ ಗ್ರಾಮದ ಬಳಿ, ದೀಪಾ (CRP ಆಚಾಪುರ ಕ್ಲಸ್ಟರ್, ಶಿಕ್ಷಣ ಇಲಾಖೆ) ಎಂಬುವವರು ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ವಾಹನದಲ್ಲಿಯೇ ರಿಪ್ಪನಪೇಟೆ ಪ್ರಾ.ಆ. ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ…

Read Full News

ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಲಾರಿ ಅಡಿಗೆ ಸಿಲುಕಿಕೊಂಡ ಬೈಕ್ ಸವಾರ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸಿದ್ದಪನಗುಡಿ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿಕೊಂಡ ಘಟನೆ ನಡೆದಿದೆ. ಆಯನೂರಿನಿಂದ ರಿಪ್ಪನ್‌ಪೇಟೆಗೆ ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ರಿಪ್ಪನ್‌ಪೇಟೆ ಯಿಂದ ಶಿವಮೊಗ್ಗ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿ ಬೈಕ್ ಸಮೇತ ಇಬ್ಬರು ಯುವಕರು ಲಾರಿಯಡಿಗೆ ಸಿಲುಕಿಕೊಂಡ ಘಟನೆ ನಡೆದಿದೆ. ನಡೆದಿದ್ದೇನು…. ರಿಪ್ಪನ್‌ಪೇಟೆಗೆ ಗಾರೆ ಕೆಲಸಕ್ಕೆಂದು ಬೈಕ್ ನಲ್ಲಿ ಬರುತ್ತಿದ್ದ ಆಯನೂರಿನ ನಿವಾಸಿಗಳಾದ ಶ್ರೀನಿವಾಸ್ (29) ಮತ್ತು ಮಂಜುನಾಥ್ (28) ಹಾಗೂ…

Read Full News

ಜಿಂಕೆ ಮಾಂಸದೂಟ : ಅರಣ್ಯಾಧಿಕಾರಿಗಳ ದಾಳಿ ,ಇಬ್ಬರ ಬಂಧನ

 ಜಿಂಕೆ ಮಾಂಸದೂಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ತಾಲೂಕಿನ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.  ಭದ್ರಾವತಿ ತಾಲೂಕು ಹುಣಸೇಕಟ್ಟೆ ಗ್ರಾಮದ ವೆಂಕಟೇಶ್ ಎಂಬುವರ ಮನೆಯಲ್ಲಿ ಜಿಂಕೆಯ ಮಾಂಸವನ್ನು ಬೇಯಿಸಿ, ಊಟ ತಯಾರು ಮಾಡುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಇವರ ಮನೆಯಲ್ಲಿ ಸುಮಾರು ಎರಡು ಕೆಜಿಯಷ್ಟು ಜಿಂಕೆ ಮಾಂಸ ದೊರಕಿದೆ‌. ಜೊತೆಗೆ ಮನೆ ಪರಿಶೀಲಿಸಿದಾಗ ಮಾಂಸವನ್ನು ಕತ್ತರಿಸುವ ಮರದ ತುಂಡು ಹಾಗೂ ಮಚ್ಚು ಪತ್ತೆಯಾಗಿದೆ. ವೆಂಕಟೇಶ್ ಜೊತೆ ಅವರ ಮಗ ಮಂಜುನಾಥ್​​ನನ್ನು ಸಹ ಬಂಧಿಸಲಾಗಿದೆ.  ಆರೋಪಿಗಳ…

Read Full News

ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ನಿಧನ :

ಪ್ರಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ( 84) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸ್ಥಂಬನದಿಂದ ನಿಧನರಾಗಿದ್ದಾರೆ. ಗಾಯಕ ಶಿವಮೊಗ್ಗ ಸುಬ್ಬಣ್ಣರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಸಂಜೆ ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ರಾತ್ರಿ 10.30 ರ ಸುಮಾರಿಗೆ  ನಿಧರಾಗಿದ್ದಾರೆ. ಶಿವಮೊಗ್ಗ ಸುಬ್ಬಣ್ಣರಿಗೆ ಭಾಗ್ಯಶ್ರಿ, ಶ್ರೀರಂಗ ಇಬ್ಬರು ಮಕ್ಕಳು. ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿಯನ್ನು ಗಾಯಕ ಶಿವಮೊಗ್ಗ ಸುಬ್ಬಣ್ಣ ಪಡೆದಿದ್ದರು. ರಜತ ಕಮಲ , ಶಿಶುನಾಳ ಷರೀಫ್…

Read Full News

ಭಾರಿ ಗಾಳಿ ಮಳೆಗೆ ನೆಲಸಮಗೊಂಡ ದನದ ಕೊಟ್ಟಿಗೆ : ಜಾನುವಾರುಗಳಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ : ಇಲ್ಲಿನ  ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಗುಬ್ಬಿಗಾ ಗ್ರಾಮದ ಚೆಲುವಣ್ಣ ಎಂಬವರ ಮನೆಯ ಹಿಂಬದಿಯ ದನದ ಕೊಟ್ಟಿಗೆ ಇಂದು ಕುಸಿದು ಬಿದ್ದ ಪರಿಣಾಮ 1 ಜರ್ಸಿ ಹಸು, 2 ನಾಟಿ ಹಸುಗಳಿಗೆ ಗಾಯಗಳಾಗಿವೆ.1 ನಾಟಿ ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಬೆಳ್ಳೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ…

Read Full News

ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

Read Full News

ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು

ಹುಂಚ :  ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು  ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…

Read Full News

ಅಣೆ ಪ್ರಮಾಣದ ತಪ್ಪು ಕಾಣಿಕೆ ಸಲ್ಲಿಸಲು ಹಾಲಪ್ಪ ಧರ್ಮಸ್ಥಳಕ್ಕೆ ಭೇಟಿ : ಬೇಳೂರು ಅನುಮಾನ /// ಕೆಲವರಿಗೆ ಆಪಾದನೆ ಮಾಡುವುದೇ ಕೆಲಸ : ಹಾಲಪ್ಪ ತಿರುಗೇಟು

ಸಾಗರ: ಈಗ ಶಾಸಕ ಹಾಲಪ್ಪ ಅವರಿಗೆ ಜ್ಞಾನೋದಯ ಆಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದು ತಪ್ಪಾಗಿದೆ ಎಂಬ ಕಾರಣಕ್ಕೆ ಅವರು ತಪ್ಪುದಂಡ ಸಲ್ಲಿಸಲು ಅಲ್ಲಿಗೆ ಹೋಗಿರಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಂಕೆ ವ್ಯಕ್ತಪಡಿಸಿದರು. ಇಲ್ಲಿನ ಮಲೆನಾಡು ಸಿರಿ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು…

Read Full News

ಮಂಡಗದ್ದೆ ಸಮೀಪ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನೆಡೆದಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ತಿಳಿದುಬಂದಿದೆ. ಈತ ಮಂಡಗದ್ದೆಯಲ್ಲಿ ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ…

Read Full News

ಆಗುಂಬೆ : ಟಿವಿ ನೋಡಲು ಬಂದ ಪಕ್ಕದ ಮನೆಯ ಯುವತಿಯನ್ನು ಅತ್ಯಾಚಾರಗೈದ ವಿವಾಹಿತ : ಆರೋಪಿ ಅಂದರ್

ತೀರ್ಥಹಳ್ಳಿ : ಟಿ.ವಿ.ನೋಡಲು ಬರುತ್ತಿದ್ದ ಯುವತಿಯನ್ನ ರೇಪ್ ಮಾಡಿ ಗರ್ಭಾವತಿಯನ್ನಾಗಿ ಮಾಡಿದ  ಆರೋಪದ ಅಡಿಯಲ್ಲಿ ವ್ಯಕ್ತಿಯೋರ್ವನನ್ನು ಇಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಾಲೂಕಿನ ನಾಲೂರಿನಲ್ಲಿ ಪರಿಶಿಷ್ಟ ಜಾತಿಯ ಯುವತಿಯು 2021 ರ ಡಿಸೆಂಬರ್ ನಲ್ಲಿ ಕಾಲೇಜು ಇಲ್ಲದ ಕಾರಣ ಮನೆಯಲ್ಲೇ ಇದ್ದ ಯುವತಿ ಪಕ್ಕದ ಮನೆಯ ಮುರುಳೀಧರ್ ಭಟ್ ಎಂಬುವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು.ಟಿವಿ ನೋಡುವ ವೇಳೆ ಯುವತಿಯನ್ನ ಮುರುಳೀಧರ್ ಬಲತ್ಕರಿಸಿರುವುದಾಗಿ ಯುವತಿ ಆರೋಪಿಸಿದ್ದಾಳೆ. .   (ಅತ್ಯಾಚಾರದ ಆರೋಪಿ ಮುರುಳಿಧರ್ ಭಟ್) ಇದಾದ ನಂತರ ದಾರಿಯಲ್ಲಿ…

Read Full News

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read Full News

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read Full News