Headlines
ರಫ಼ಿ ರಿಪ್ಪನ್ ಪೇಟೆ

ರಫ಼ಿ ರಿಪ್ಪನ್ ಪೇಟೆ

ನಮಸ್ಕಾರ, ನಾನು ರಫಿ ರಿಪ್ಪನ್‌ಪೇಟೆ. ​'ಪೋಸ್ಟ್‌ಮ್ಯಾನ್ ನ್ಯೂಸ್' ಮಾಧ್ಯಮದ ಹಿಂದಿರುವ ಓರ್ವ ಅಪ್ಪಟ ಸುದ್ದಿಪ್ರೇಮಿ ಹಾಗೂ ಪತ್ರಕರ್ತ. "ನಮ್ಮೂರ ಸುದ್ದಿಗಳು ಜಗತ್ತಿಗೆ ತಲುಪಬೇಕು" ಎಂಬ ಆರು ವರ್ಷಗಳ ಕನಸಿನ ಕೂಸೇ ಈ ನಮ್ಮ ಪೋಸ್ಟ್‌ಮ್ಯಾನ್ ನ್ಯೂಸ್. ​ಸ್ಥಳೀಯ ಪತ್ರಿಕೆಗಳಿಂದ ಹಿಡಿದು ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೂ ಮಾಧ್ಯಮದ ನಾನಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದು. ಆದರೆ, ಈ ಪಯಣದಲ್ಲಿ ನನಗೊಂದು ಕೊರತೆ ಸದಾ ಕಾಡುತ್ತಿತ್ತು; ಅದೇನೆಂದರೆ, 'ನಿಜವಾದ ಸ್ಥಳೀಯ ಧ್ವನಿಗೆ ಅಲ್ಲಿ ಸೂಕ್ತ ವೇದಿಕೆ ಇರಲಿಲ್ಲ'. ಆ ಶೂನ್ಯವನ್ನು ತುಂಬಲು ಹುಟ್ಟಿಕೊಂಡ ಪರ್ಯಾಯ ವೇದಿಕೆಯೇ “ಪೋಸ್ಟ್‌ಮ್ಯಾನ್ ನ್ಯೂಸ್.” ​ಇಲ್ಲಿ 'ಸುದ್ದಿ' ಎಂದರೆ ಕೇವಲ ಸುದ್ದಿ ಮಾತ್ರ. ಇದು ಯಾವ ವ್ಯಕ್ತಿ ಅಥವಾ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಅತ್ಯಂತ ಸ್ಪಷ್ಟ: "ಸುದ್ದಿಯನ್ನು ಪ್ರಾಮಾಣಿಕವಾಗಿ ಹೇಳಬೇಕು, ತೀರ್ಪು ಕೊಡುವ ಕೆಲಸ ನಮಗಲ್ಲ." ಕೆಲವೊಮ್ಮೆ ನಮ್ಮ ವರದಿಗಳಿಗೆ ಬರುವ ಪ್ರತಿಕ್ರಿಯೆಗಳು ಬೇರೆಯದೇ ಬಣ್ಣ ಪಡೆಯಬಹುದು, ಆದರೆ ಅದಕ್ಕೆ ನನ್ನ ಏಕೈಕ ಉತ್ತರ ಕೇವಲ ನನ್ನ ಕೆಲಸದ ಮೂಲಕ ಮಾತ್ರ. ​'ಪೋಸ್ಟ್‌ಮ್ಯಾನ್ ನ್ಯೂಸ್' ಇಂದು ಕೇವಲ ಒಂದು ಸುದ್ದಿ ಪುಟವಾಗಿ ಉಳಿದಿಲ್ಲ, ಅದೊಂದು ಜಾಗೃತಿಯ ಚಳವಳಿಯಾಗಿ ರೂಪುಗೊಳ್ಳುತ್ತಿದೆ. ಕೇವಲ ವರದಿ ಮಾಡುವುದಷ್ಟೇ ನಮ್ಮ ಉದ್ದೇಶವಲ್ಲ; ನಮ್ಮೂರಿನ ಘಟನೆಗಳು, ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳು, ಜ್ವಲಂತ ಸಮಸ್ಯೆಗಳು ಮತ್ತು ಸಾಧನೆಗಳನ್ನು ಹೊರಲೋಕಕ್ಕೆ ಪರಿಚಯಿಸುವ 'ಸೇತುವೆ'ಯಾಗಬೇಕೆಂಬುದು ನಮ್ಮ ಹೆಬ್ಬಯಕೆ. ಹಣ ಪಡೆದು, ಕಾಸಿಗಾಗಿ ಸುದ್ದಿ ಮಾಡುವ ಅಭ್ಯಾಸವೂ ನಮಗಿಲ್ಲ, ಆ ಹವ್ಯಾಸವೂ ನಮಗಿಲ್ಲ. ಸತ್ಯ ಮತ್ತು ನೈಜತೆಯೇ ನಮ್ಮ ಬಂಡವಾಳ. ​ನಮ್ಮ ಅಂತಿಮ ಗುರಿ ಒಂದೇ — "ಸಣ್ಣ ಊರುಗಳ ಸತ್ಯ ಕಥೆಗಳು, ಅತಿ ದೊಡ್ಡ ಮಟ್ಟದಲ್ಲಿ ಜಗತ್ತಿನ ಕಿವಿಗೆ ತಲುಪಬೇಕು." ​ತಮ್ಮ ಪ್ರೀತಿ ಮತ್ತು ಬೆಂಬಲ ಸದಾ ಹೀಗೆಯೇ ಇರಲಿ. ​ಸ್ನೇಹಪೂರ್ವಕವಾಗಿ, ರಫಿ ರಿಪ್ಪನ್‌ಪೇಟೆ ಸಂಪಾದಕರು, ಪೋಸ್ಟ್‌ಮ್ಯಾನ್ ನ್ಯೂಸ್ 🌐 [www.postmannewskannada.com]

ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ :

ರಿಪ್ಪನ್ ಪೇಟೆ : ಅರಸಾಳು ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಸಂಘಟನೆಗಳ ಸಹಕಾರದಿಂದ  ಅರಸಾಳು ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ. ಪಿ ರಾಮಚಂದ್ರ ಹೇಳಿದರು.  ರಿಪ್ಪನ್ ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಅರಸಾಳು ರೈಲ್ವೆ ನಿಲ್ದಾಣವನ್ನು ಉನ್ನತೀಕರಿಸಿ ಶಿವಮೊಗ್ಗದಿಂದ ತಾಳಗುಪ್ಪ ಮಾರ್ಗದಲ್ಲಿ ಪ್ರತಿನಿತ್ಯ ಓಡಾಡುವ ಎಲ್ಲಾ ರೈಲುಗಳನ್ನು ಅರಸಾಳು ರೈಲು…

Read Full News

ಭದ್ರಾವತಿ VISL ವಸತಿ ನಿಲಯದ ಬಳಿ ಆತಂಕ ಮೂಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಭದ್ರಾವತಿ : ಇಲ್ಲಿನ ವಿಐಎಸ್‌ಎಲ್‌ ಕ್ವಾರ್ಟರ್ಸ್ ಆವರಣದಲ್ಲಿ ಬುಧವಾರ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಯಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯ ಡಾ.ವಿನಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಅರವಳಿಕೆ ನೀಡಿದ ಬಳಿಕ, ಚಿರತೆಯನ್ನು ಬೋನ್ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕಾರ್ಯಾಚರಣೆ ಸಂಧರ್ಭದಲ್ಲಿ ಡಾ.ವಿನಯ್ ಅವರು ಧೈರ್ಯ ತೋರಿ 10 ಮೀ. ಅಂತರದಲ್ಲೇ ಚಿರತೆಗೆ ಅರವಳಿಕೆ ನೀಡಿದ್ದಾರೆ. ಚಿರತೆ ಸೆರೆ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿದ್ದ ಸ್ಥಳೀಯರು ನಿಟ್ಟುಸಿರು…

Read Full News

ಸಾಗರ ಉಪವಿಭಾಗಧಿಕಾರಿ ಡಾ.ಎಲ್ ನಾಗರಾಜ್ ವರ್ಗಾವಣೆ :

ಸಾಗರ ತಾಲ್ಲೂಕು ಉಪವಿಭಾಗಧಿಕಾರಿ ಎಲ್ ನಾಗರಾಜ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಉಪವಿಭಾಗಧಿಕಾರಿಯಾಗಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಎಲ್. ನಾಗರಾಜ್ ರವರನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಇನ್ನೂ ಯವುದೇ ಸ್ಥಳವನ್ನು ಸೂಚಿಸಿಲ್ಲ. ನೂತನವಾಗಿ ಸಾಗರ ಉಪವಿಭಾಗಧಿಕಾರಿಯಾಗಿ ರಾಘವೇಂದ್ರ ಬಿ. ಜಗಲಾಸರ್ ರವರು ಅಧಿಕಾರ ಸ್ವೀಕರಿಸಲಿದ್ದಾರೆ.ಇವರು ಧಾರವಾಡ ತಾಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಈಗ ಸಾಗರ ಉಪವಿಭಾಗಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.

Read Full News

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಕಾಲಿಗೆ ಗುಂಡಿಟ್ಟ ಪೊಲೀಸ್ :

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂದಿಸಿದ್ದಾರೆ. ರಾಜೀವ್ ಗಾಂಧಿ ಬಡಾವಣೆಯಲ್ಲಿ ಆರೋಪಿ ಇದ್ದ ಹಿನ್ನಲೆಯಲ್ಲಿ ಕಾಯಾಚರಣೆ ನಡೆಸಿದ ಪೊಲೀಸರು ಶಾಹಿದ್ ಖುರೇಶಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪುನಃ ಚಾಕುವಿನಿಂದ ದಾಳಿಗೆ ಪ್ರಯತ್ನಿಸಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ರಾಬರಿ ಕೇಸ್’ಗಳಲ್ಲಿ ಪ್ರಮುಖ ಆರೋಪಿಯಾಗಿದ್ದ ಶಾಹಿದ್ ಖುರೇಶಿಯ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ಬಲಗಾಲಿನ ಮಂಡಿಯ ಕೆಳಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು…

Read Full News

ಕನ್ನಡದ ಪ್ರಖ್ಯಾತ ನಟ ದಿಗಂತ್ ಸ್ಥಿತಿ ಗಂಭೀರ : ಕೆಲವೇ ಗಂಟೆಗಳಲ್ಲಿ ಗೋವಾದಿಂದ ಬೆಂಗಳೂರಿಗೆ ಏರ್ ಲಿಫ್ಟ್

ಮುಂಗಾರು ಮಳೆ, ಗಾಳಿಪಟ, ಮನಸಾರೆ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ನಟ ದಿಗಂತ್‌ ಅವರಿಗೆ ಚಿತ್ರೀಕರಣದ ವೇಳೆ ಅಪಘಾತವಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಈ ಘಟನೆ ನಡೆದಿದ್ದು, ಗೋವಾದಲ್ಲಿ ನಟ ದಿಗಂತ್ ತನ್ನ ಆಪ್ತರು ಹಾಗೂ ಗೆಳೆಯರೊಡನೆ ಪ್ರವಾಸಕ್ಕೆ ತೆರಳಿದ್ದರು. ಟ್ರೆಕ್ಕಿಂಗ್ ಸೇರಿದಂತೆ ಇನ್ನಿತರೆ ಸಾಹಸ ಕ್ರೀಡೆಗಳಲ್ಲಿ ಅವರು ತೊಡಗಿಕೊಂಡಿದ್ದರು. ಸಾಹಸ ಕ್ರೀಡೆಗಳನ್ನು ಆಡುವ ವೇಳೆ ಅಚಾನಕ್ಕಾಗಿ ದಿಗಂತ್‌ರ ಕತ್ತಿಗೆ ತೀವ್ರ ಪೆಟ್ಟಾಗಿದೆ…

Read Full News

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…

Read Full News

ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ :  ಮುಡುಬಾದ 15 ನೇ ಮೈಲಿಗಲ್ಲಿನ ಬಳಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸತ್ತು ಹೋಗಿರುವ ಘಟನೆ  ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿನಿಂದ ಬಂದ ಮೂಕಾಂಬಿಕ ಬಸ್ ನ ಸೈಡ್ ಗೆ ದ್ವಿಚಕ್ರವಾನ ತಗುಲಿದ ಪರಿಣಾಮ ಬಸ್ ನ ಹಿಂಬದಿ ಚಕ್ರ ದ್ವಿಚಕ್ರ ವಾಹನ ಸವಾರನ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15…

Read Full News

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಅಮೃತ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ.

ರಿಪ್ಪನ್ ಪೇಟೆ: ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ದ್ವಿತೀಯ  ಪಿಯುಸಿ  ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿ ಪಡೆದ  ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಪ್ರಾಚಾರ್ಯರು ಉಪನ್ಯಾಸಕ ವೃಂದ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯವರಿಂದ  ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ನಡೆದ ಸರಳ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಹ್ಮದ್ ನಜ್ ಹತ್ ಉಲ್ಲಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ …

Read Full News

ಕನ್ನಡದ ಪ್ರಖ್ಯಾತ ನಟ,ನಿರ್ದೇಶಕ ರಿಷಬ್ ಶೆಟ್ಟಿ ರವರ ನೂತನ ಚಲನಚಿತ್ರಕ್ಕೆ ನಾಳೆ ಶಿವಮೊಗ್ಗದಲ್ಲಿ ಆಡಿಷನ್ :

ಶಿವಮೊಗ್ಗ: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರೊಡಕ್ಷನ್ಸ್ ನ ನೂತನ ಚಲನಚಿತ್ರಕ್ಕೆ ಕಲಾವಿದರ ಆಯ್ಕೆ ಮಾಡಿಕೊಳ್ಳಲು ಶಿವಮೊಗ್ಗ ನಗರದಲ್ಲಿ ಆಡಿಷನ್ ನಡೆಯಲಿದೆ. ಜೂ.21ರ ಮಂಗಳವಾರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪಕ್ಕದ ಕೋಟೆ ಬಯಲು ರಂಗಮಂದಿರದಲ್ಲಿ ನಡೆಯುವುದು. 5 ರಿಂದ 10 ವರ್ಷದೊಳಗಿನ ಬಾಲ ಕಲಾವಿದರು, 20ರಿಂದ 30, 50 ರಿಂದ 65 ವರ್ಷದ ಪುರುಷರು ಪೋಷಕ ಪಾತ್ರಕ್ಕೆ ಹಾಗೂ 20 ರಿಂದ 35 ವರ್ಷದ ವಯಸ್ಸಿನ…

Read Full News

ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಹಳ್ಳಿಗಾಡಿನ ಪ್ರತಿಭೆ : ಗರ್ತಿಕೆರೆ ಗ್ರಾಮದ ಕಾವ್ಯಾ ಳಿಗೆ ಒಲಿದ ರಾಷ್ಟ್ರ ಮಟ್ಟದ ಬೆಳ್ಳಿ ಪದಕ

ನವದೆಹಲಿಯಲ್ಲಿ ಸೋಮವಾರ ಮುಕ್ತಾಯಗೊಂಡ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಾವ್ಯ ಕೆ ಎನ್ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೆಳ್ಳಿ ಪದಕವನ್ನು ಗಳಿಸಿದ್ದು ಕರ್ನಾಟಕ ರಾಜ್ಯದ ಹೆಸರನ್ನು ಮೆರೆದಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕಾವ್ಯ ಕೆ ಎನ್ ಮೂರು ಬಾರಿ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಈ ಪ್ರತಿಭಾವಂತೆ ರಾಷ್ಟ್ರ ಮಟ್ಟದಲ್ಲಿ 5 ಬಾರಿ ಪ್ರಥಮ ಸ್ಥಾನವನ್ನು, 4…

Read Full News

ರಿಪ್ಪನ್ ಪೇಟೆ ಸುತ್ತಮುತ್ತ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿರುವ ಮೊಬೈಲ್ ಗ್ರಾಹಕರುಗಳು….!ಸಿಡಿದೆದ್ದು ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸನ್ನದ್ಧರಾಗುತ್ತಿರುವ ಗ್ರಾಹಕರುಗಳು..!!???

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಮುಖ ಪಟ್ಟಣಗಳಲ್ಲಿ ಒಂದಾದ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮದ ಮೊಬೈಲ್ ಗ್ರಾಹಕರುಗಳು  ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿದ್ದಾರೆ.  ಗ್ರಾಹಕರ ಸಮಸ್ಯೆಗೆ ಸ್ಪಂದಿಸದ ಸೇವಾ ಕೇಂದ್ರಗಳು :  ರಿಪ್ಪನ್ ಪೇಟೆ ಯಲ್ಲಿ ಖಾಸಗಿ ಮೊಬೈಲ್ ಕಂಪನಿಗಳಾದ ಏರ್ ಟೆಲ್, ಜಿಯೋ ಸೇರಿದಂತೆ ಬಿಎಸ್ಎನ್ಎಲ್  ಸೇವಾ ಕೇಂದ್ರಗಳು ಇದ್ದರೂ ಸಹ ದಿನನಿತ್ಯ ನೂರಾರು ಬಾರಿ ಮೊಬೈಲ್ ನೆಟ್ವರ್ಕ್ ಗಳ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸೇವಾಕೇಂದ್ರದ…

Read Full News

ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ನಗರಸಭೆ ಕಾರ್ಮಿಕ ಸಾವು :

 ಭದ್ರಾವತಿಯ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಕ್ರಿಕೆಟ್‌ ಪಂದ್ಯಾವಳಿಯ ಸಂದರ್ಭದಲ್ಲಿ ದುರ್ಘನೆಯೊಂದು ನಡೆದಿದೆ. ಭದ್ರಾವತಿ ನಗರಸಭೆ ವತಿಯಿಂದ ಕಾರ್ಮಿಕರು ಹಾಗು ಸಿಬ್ಬಂದಿಯವರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ವೇಳೆ ದಿನೇಶ್‌ರಾವ್ (38) ಎಂಬುವವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಆರೋಗ್ಯ ಸಿಬ್ಬಂದಿಯಿಂದ ದಿನೇಶ್ ತಪಾಸಣೆ ನಡೆಸಲಾಗಿದ್ದರೂ, ಕುಸಿದು ಬಿದ್ದ ತಕ್ಷಣವೇ ದಿನೇಶ್ ಮೃತಪಟ್ಟ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಸ್ಪಷ್ಟಪಡಿಸಿದ್ದಾರೆ. ನಂತರ ಮೃತದೇಹವನ್ನು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Read Full News

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read Full News

ಹೊಸನಗರ ತಾಲೂಕಿನ ಕುಗ್ರಾಮ ನಿಟ್ಟೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪಿಯುಸಿ ಯಲ್ಲಿ ಶೇಕಡ 91.93 ಫಲಿತಾಂಶ.

ನಿಟ್ಟೂರು: ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿದ್ದಾರೆ ಆದರೆ ಅವಕಾಶಗಳಿಲ್ಲ. ಉತ್ತಮ ಅವಕಾಶ ದೊರೆತರೆ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಹೊಸನಗರ ತಾಲೂಕಿನ ಕುಗ್ರಾಮದಲ್ಲಿರುವ  ಸಂಪೆಕಟ್ಟೆ  ನಿಟ್ಟೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2021 -22 ನೇ ಸಾಲಿನಲ್ಲಿ ನಡೆದ ದ್ವಿತೀಯ  ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಸ್ನೇಹಮಯಿ ಮತ್ತು ಕರ್ತವ್ಯ ನಿಷ್ಠೆ ಇರುವ ಉಪನ್ಯಾಸಕರುಗಳಿದ್ದು ಒಳ್ಳೆಯ ಮಾರ್ಗದರ್ಶನ ನೀಡಿದರೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ  ನಿಟ್ಟೂರು ಸರಕಾರಿ…

Read Full News

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ ಶವ ಪತ್ತೆ :

ರಾಜಾಕಾಲುವೆಯಲ್ಲಿ ಕೊಚ್ಚಿಹೋದ ಸಾಗರ ಸಮೀಪದ ಅದರಂತೆ ಗ್ರಾಮದ ಯುವಕ ಮಿಥಿನ್(26) ಶವ ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಯುವಕನ ಶವ ರಾಜಾಕಾಲುವೆಗೆ ಬಿದ್ದ ಸ್ಥಳದಿಂದ 1.5 ಕಿಮೀ ದೂರದಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸ್ವಗ್ರಾಮವಾದ ಸಾಗರದ ಅದರಂತೆ ಗ್ರಾಮಕ್ಕೆ ಕರೆತರಲಾಗುತ್ತಿದೆ. ರಾಜಾಕಾಲುವೆಯಲ್ಲಿ ಸಾಗರದ ಯುವಕ ಮಿಥಿನ್ ಕೊಚ್ಚಿಹೋದ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಪ್ರತ್ಯಕ್ಷದರ್ಶಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದು…

Read Full News

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read Full News

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read Full News

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಳ್ಳಿ ಮಕ್ಕಳ ಅದ್ಭುತ ಸಾಧನೆ…ವಿಜ್ಞಾನ ವಿಭಾಗದಲ್ಲಿ 586 ಅಂಕ ಪಡೆದ ವಿದ್ಯಾರ್ಥಿ

ರಿಪ್ಪನ್ ಪೇಟೆ : ಈ ಬಾರಿ  ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಹಳ್ಳಿಗಾಡಿನ ಪ್ರದೇಶದ ವಿದ್ಯಾರ್ಥಿಗಳು ಅದ್ಭುತ ಸಾಧನೆಗಳನ್ನು ಮಾಡಿದ್ದಾರೆ. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿಜ್ಞಾನ ವಿಭಾಗದ  ವಿದ್ಯಾರ್ಥಿ ಹರ್ಷ 586 ಅಂಕಗಳನ್ನು ಪಡೆದಿದ್ದು. ಅಮೃತ ಸರಕಾರಿ  ಪದವಿ ಪೂರ್ವ ಕಾಲೇಜು ಶೇಕಡ 84 ಫಲಿತಾಂಶವನ್ನು ಪಡೆದರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ರಿಪ್ಪನ್ ಪೇಟೆ  75.37 ಫಲಿತಾಂಶ ಪಡೆದಿದೆ.  ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ …

Read Full News

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ……! ಪಲಿತಾಂಶ ನೋಡುವ ವೆಬ್‌ಸೈಟ್ ವಿವರಕ್ಕಾಗಿ ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಏಪ್ರಿಲ್ 22ರಿಂದ ಆರಂಭವಾಗಿ ಮೇ 18 ರವರೆಗೆ ನಡೆದ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ಪ್ರಕಟಿಸಿದ್ದಾರೆ. ಕರ್ನಾಟಕ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ಕ್ಕೆ ಆರಂಭವಾಗಿ ಮೇ18ಕ್ಕೆ ಮುಕ್ತಾಯವಾಗಿದ್ದು ರಾಜ್ಯದ ವಿವಿಧೆಡೆಯಲ್ಲಿ ಮೌಲ್ಯಮಾಪನ ಸುಗಮವಾಗಿ ನಡೆದಿದ್ದು. ನಾಳೆ ದ್ವಿತೀಯ ಪಿಯುಸಿ…

Read Full News

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಉರುಳಿದ ಕಾರು :

ಕೊಲ್ಲೂರು ಘಾಟಿಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು‌ ಪ್ರಪಾತಕ್ಕೆ ಬಿದ್ದ ಘಟನೆ ವರದಿಯಾಗಿದೆ. ಮಾರುತಿ (KA 01 MS 1399) ಕಾರೊಂದು ನಿನ್ನೆ ಘಾಟಿಯಲ್ಲಿ ಸುಮಾರು 200 ಅಡಿ ಆಳಕ್ಕೆ ಬಿದ್ದಿದೆ.ಕಾರಿನಲ್ಲಿ ಡ್ರೈವರ್ ಒಬ್ಬನೇ ಪ್ರಯಾಣಿಸುತಿದ್ದ ಹಿನ್ನಲೆಯಲ್ಲಿ ಹೆಚ್ಚಿನ ಅನಾಹುತಗಳು ನಡೆದಿಲ್ಲ.ಸೀಟ್ ಬೆಲ್ಟ್ ಧರಿಸಿದ್ದರಿಂದ​ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ರೇನ್ ಮೂಲಕ ಕಾರನ್ನು ಮೇಲಕ್ಕೆತ್ತಲಾಗಿದ್ದು ಕಾರು ಸಂಪೂರ್ಣ ನಜುಗುಜ್ಜಾಗಿದೆ. ಈ ಘಾಟ್ ಪ್ರದೇಶದಲ್ಲಿ ಮಳೆಯಿಂದಾಗಿ ರಸ್ತೆಯಲ್ಲಿ ಪಾಚಿ ಕಟ್ಟುತ್ತಿದ್ದು ಜಾರುತ್ತಿದೆ. ಇದರಿಂದಾಗಿ ವಾಹನ ಸವಾರರು ಜಾಗೃತೆಯಿಂದ…

Read Full News

ಗೃಹ ಸಚಿವರ ಕ್ಷೇತ್ರದಲ್ಲಿ ಮತ್ತೆ ದನಗಳ್ಳರ ಅಟ್ಟಹಾಸ …!!!????

ತೀರ್ಥಹಳ್ಳಿ : ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡಾ ದನಗಳ್ಳರ ಮತ್ತು ಖದೀಮರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಮಂಡಗದ್ದೆಯ ಸಮೀಪ ದನ ಕಟುಕನೋರ್ವನನ್ನು ಮಾಳೂರು ಸಬ್ ಇನ್ಸ್ ಸೆಕ್ಟರ್ ನವೀನ್ ಮಠಪತಿಯವರು ಹಿಡಿದು ಜೈಲಿಗಟ್ಟಿದ್ದರೂ ಕೂಡಾ ಪುನಃ ದನಗಳ್ಳರು ಬಾಲಬಿಚ್ಚುತ್ತಿರುವುದು ತೀರ್ಥಹಳ್ಳಿ ತಾಲೂಕಿಗೆ ದೊಡ್ಡ ದುರಂತವೇ ಸರಿ. ಗುರುವಾರ ರಾತ್ರಿ ಹೆದ್ದೂರು ಹೊಸಳ್ಳಿ ಪರಿಸರದಲ್ಲಿ ಜಾನುವಾರುಗಳನ್ನು ಕದ್ದು ಪಿಕಪ್ ವಾಹನಗಳಲ್ಲಿ ಸಾಗಿಸುವಾಗ ಅನುಮಾನ ಬಂದು ಭಜರಂಗದಳದ ಕಾರ್ಯಕರ್ತರು ಹಾಗೂ ಊರಿನ…

Read Full News

ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…

Read Full News

ಗರ್ತಿಕೆರೆಯ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ…

ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪ್ರಶಸ್ತಿ ಲಭಿಸಿದ್ದು ಗುರುವಾರ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಪ್ರಶಸ್ತಿ ನೀಡಲಾಯಿತು. ಎರಡು ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಪ್ರಶಸ್ತಿ ಸಮಾರಂಭ ಕೋವಿಡ್ 19 ಪ್ರಯುಕ್ತ ಮುಂದೂಡಲಾಗಿದ್ದು 32 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಮಹಮ್ಮದ್ ಆದಿಲ್ ರವರಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಮಹಮ್ಮದ್ ಆದಿಲ್ ಗರ್ತಿಕೆರೆಯ ಅಬ್ದುಲ್ ಅಜೀಜ್ ಹಾಗೂ ನಾಜಿಯಾ ಬೇಗಂ ದಂಪತಿಗಳ ಪುತ್ರನಾಗಿದ್ದು ಇವರು…

Read Full News

ಗ್ರಾಮ ಪಂಚಾಯತ್ ಅಧ್ಯಕ್ಷಗಾದಿ ಕೈ ತಪ್ಪಿದ್ದಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ :

ಅಧ್ಯಕ್ಷಗಾದಿ ದೊರಕಲಿಲ್ಲವೆಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ(ದರಮಘಟ್ಟ) ಪೊಲೀಸ್ ಬಂದೋಬಸ್ತ್ ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಡ್ರಾಮಾ ಹೈಡ್ರಾಮಕ್ಕೆ ಎಡೆ‌ಮಾಡಿಕೊಟ್ಟಿದೆ. ಖಲೀಮ್ ಎಂಬುವರು ಇಂದು ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆ ಆಗುವುದು ಅದರಂತೆ ಉಪಾಧ್ಯಕ್ಷರಾಗಿ ಮಾಲಮ್ಮ ಎಂಬುವರು ಆಯ್ಕೆಯಾಗುವುದು ಬಹತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಕೌಸರ್ ಭಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಆಯ್ಕೆಗೂ ಮೊದಲು ಕೌಸರ್ ಭಾನು ಎಂಬ…

Read Full News

ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…

Read Full News

ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read Full News

ರಿಪ್ಪನ್‌ಪೇಟೆಯಲ್ಲಿ ಭೀಕರ ಬೈಕ್ ಅಪಘಾತ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಸಮೀಪದ ಗವಟೂರು ಕೆರೆ ಬಳಿ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ (KA 15 W 3356) ಟಿವಿಎಸ್ ಬೈಕ್ ಹಾಗೂ ರಿಪ್ಪನ್ ಪೇಟೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಟಿವಿಎಸ್ ಬೈಕ್(KA 15 ED 5303) ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ವ್ಯಕ್ತಿಯೊಬ್ಬ  ಮೃತಪಟ್ಟಿದ್ದಾನೆ.ಇನ್ನೊರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read Full News

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read Full News

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read Full News

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read Full News