ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಡವೆ ಭೇಟೆ – ನಾಲ್ವರ ಬಂಧನ

ಕಡವೆ ಭೇಟೆ – ನಾಲ್ವರ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ. ಚೌಡಿಕಟ್ಟೆಯಬಳಿ ಕಡವೆ ಬೇಟೆಯಾಡಿ ಕಡವೆಯ ತಲೆಯನ್ನ ಕೆರೆಗೆ ಬಿಸಾಕಿ ಹೋಗಿದ್ದಾಗ ಅರಣ್ಯ ಇಲಾಖೆಯವರೆ ಕಣ್ಣಿಗೆ ಬಿದ್ದಿದೆ. ಬೇಟೆಯಾಡಿದ ಕಡಿವೆಯನ್ನ ರುಂಡವನ್ನ ಛೇಧಿಸಿ ಮಾಂಸವನ್ನ ಕೊಯ್ದುಕೊಂಡು ತಲೆಯನ್ನ ಕೆರೆಗೆ ಬಿಸಾಕಲಾಗಿತ್ತು. ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ  ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.   ಎl) ಶಿವ ಬಿನ್…

Read More

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ – ಉಪನ್ಯಾಸಕ ಅರೆಸ್ಟ್ ಕಾಲೇಜು ವಿಧ್ಯಾರ್ಥಿನಿಯೊಬ್ಬಳ ಮೇಲೆ ಉಪನ್ಯಾಸಕನೇ ಅತ್ಯಾಚಾರವೆಸಗಿರುವ ಆರೋಪವೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಶಿಕ್ಷಕ ಎಂದರೆ ದೇವರಿಗೆ ಸಮಾನ.. ಆದ್ರೆ ಈ ದೇವರ ಸ್ಥಾನದಲ್ಲಿರುವ ಶಿಕ್ಷಕರೇ ತಪ್ಪು ಮಾಡಿದರೆ ಕಾಪಾಡುವವರೇ ಯಾರು ಎಂಬ ಪ್ರಶ್ನೆ ಎದುರಾಗುತ್ತೆ.. ಹೌದು.. ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ಉಪನ್ಯಾಸಕ ಮದುವೆಯಾಗುವುದಾಗಿ ನಂಬಿಸಿ ತನ್ನ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪ ಕೇಳಿಬಂದಿದೆ.. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜು…

Read More

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಹಿದಾ ಭಾನು (63) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊರೊನಾ ಕಾಯಿಲೆಯಿಂದ ನಾಲ್ಕು ವರ್ಷಗಳ ಹಿಂದೆ ಮೃತ ಮಹಿಳೆಯ ಪತಿ ಮುನೀರ್ ಸಾಬ್ ಸಾವನ್ನಪ್ಪಿದರು. ಪತಿಯ ಅಗಲಿಕೆಯಿಂದ ಕೊರಗುತಿದ್ದ ಶಾಹಿದಾ ಭಾನು ಶನಿವಾರ ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು…

Read More

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ

SHIVAMOGGA | ಹುಕ್ಕಾಬಾರ್ ಮೇಲೆ ದಾಳಿ ಶಿವಮೊಗ್ಗದ ಗೋಪಾಳದಲ್ಲಿರುವ ಹುಕ್ಕಾಬಾರ್ ಮೇಲೆ ದಾಳಿ ನಡೆಸಿ ತೆರವುಗೊಳಿಸಿದ ಘಟನೆ ನಡೆದಿದೆ. ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ ನಡೆಸಿ ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪ ಪೋಲಿಸ್ ನಿರೀಕ್ಷಕರಾದ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಗಳು ಹಾಗೂ…

Read More

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್

ನಿವೃತ್ತ ಸಿಬ್ಬಂದಿಯನ್ನು ಕೂರಿಸಿಕೊಂಡು ಕಾರು ಚಾಲನೆ: ಮನೆಗೆ ಡ್ರಾಪ್ ಮಾಡಿ ಬೀಳ್ಕೊಟ್ಟ ತಹಶೀಲ್ದಾರ್ ರಶ್ಮಿ ಹಾಲೇಶ್ ಹೊಸನಗರ : ಗ್ರಾಮಾ ಆಡಳಿತಾಧಿಕಾರಿಯೊಬ್ಬರು ನಿವೃತ್ತಿಯಾದ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ವಿಶೇಷ ಗೌರವದೊಂದಿಗೆ ಅವರಿಗೆ ಬೀಳ್ಕೊಡಿಗೆ ಕೊಟ್ಟಿದ್ದಾರೆ. ಹೌದು… ತಹಶೀಲ್ದಾರ್ ರಶ್ಮಿ ಹಾಲೇಶ್ ರವರು ಸೇವೆಯಿಂದ ನಿವೃತ್ತಿಯಾದ ಗ್ರಾಮಾಡಳಿತ ಅಧಿಕಾರಿ ಸದಾಶಿವ ಅವರನ್ನ ವಾಹನದಲ್ಲಿ ಕೂರಿಸಿಕೊಂಡು ವಾಹನ ಚಲಾಯಿಸಿಕೊಂಡು ಹೋಗಿ ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ  ಬೀಳ್ಕೊಡಿಗೆ ನೀಡಿದ್ದಾರೆ. ಹೊಸನಗರ ತಾಲೂಕ್ ಕಂದಾಯ ಇಲಾಖೆಯಲ್ಲಿ ಸುಮಾರು…

Read More

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು

RIPPONPETE | ಕೆಂಚನಾಲದಲ್ಲಿ ಹಸುವಿನ ಕತ್ತರಿಸಿದ ತಲೆ ಪತ್ತೆ – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಶುಕ್ರವಾರದಂದು ಬೆಳಕಿಗೆ ಬಂದ ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ಹಸುವಿನ ತಲೆಯನ್ನು ಕೆರೆಯ ಬಳಿಯಲ್ಲಿ ಎಸೆದು ಹೋಗಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಕೆಂಚನಾಲ ಗ್ರಾಮದಲ್ಲಿ ಪೊಲೀಸರು ಗಸ್ತು ತಿರುಗುತಿದ್ದ ಸಂಧರ್ಭದಲ್ಲಿ ಗಸ್ತು ತಿರುಗುತಿದ್ದಾಗ ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಯಾರೋ ಅಪರಿಚಿತರು ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಹಸುವನ್ನು ಕಡಿದು ಕೆರೆಯ…

Read More

ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ.!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!?

ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ..!!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!? ತೀರ್ಥಹಳ್ಳಿ : ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‌್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನಾ? ಎಂಬ ಅನುಮಾನ ಶುರುವಾಗಿದೆ. ಹೌದು ತೀರ್ಥಹಳ್ಳಿ ಸಮೀಪದ ಇಂದಾವರ ಗ್ರಾಮದ ಜಯದೀಪ್ ( 24 ವರ್ಷ ) ದ ಯುವಕ ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡನೇ ಎಂಬ ಅನುಮಾನ ಶುರುವಾಗಿದೆ. ಅದಕ್ಕೆ…

Read More

ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆಗೆ ಕೀಟನಾಶಕ ಸೇವಿಸಿ ರೈತ ಆತ್ಮಹತ್ಯೆ ಹೊಸನಗರ: ಸಾಲಬಾಧೆಗೆ ತುತ್ತಾಗಿ ತಾಲೂಕಿನ ನಗರ ಹೋಬಳಿ ಮುಂಡಳ್ಳಿ ಸಮೀಪದ ನರ್ತಿಗೆ ಗ್ರಾಮದ ವಾಸಿ ರೈತ ಎನ್.ಟಿ. ತಿಮ್ಮಪ್ಪ(52) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಸಂಭವಿಸಿದೆ.ತನ್ನ ತೋಟದಲ್ಲಿ ಕೆಲಸಕ್ಕೆಂದು ತೆರಳಿದ್ದ ವೇಳೆ ಕೀಟನಾಶಕ ಸೇವಿಸಿ‌ ಆತ್ಮಹತ್ಯೆಗೆ‌ ಶರಣಾಗಿದ್ದಾನೆ. ವಾಂತಿ ಮಾಡಿಕೊಳ್ಳುತ್ತಿದ್ದ ಸಮಯದಲ್ಲಿ ಮನೆಯವರು ವಿಚಾರಿಸಲು ವಿಷದ ವಾಸನೆ ಬಂದಿದ್ದು, ತತಕ್ಷಣ ಚಿಕಿತ್ಸೆ ಕೊಡಿಸಲು ಮುಂದಾದರೂ ಪ್ರಯೋಜನವಾಗದ ಅಸುನೀಗಿದ್ದಾರೆ. ಮೃತನಿಗೆ 1.25 ಎಕರೆ ತರಿ, 2 ಎಕರೆ ಬಾಗಾಯ್ತು…

Read More

ಯಡಿಯೂರಪ್ಪ ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ – ಶಾಸಕ ಬೇಳೂರು

ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಅಕ್ರಮವನ್ನು ಶೀಘ್ರದಲ್ಲಿ ಬಯಲಿಗೆಳೆಯುತ್ತೆನೆಂದು ಎಂದರು. ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ…

Read More