Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…

Read More

ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE

 ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ, ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಆದರೆ ಈಶ್ವರಪ್ಪ ಸಂಧಾನಕ್ಕೆ ಬಂದವರನ್ನು ಭೇಟಿಯಾಗದೆ ತನ್ನ ವಿರೋಧ ತೋರಿದ್ದಾರೆ. ರವಿವಾರ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕೇಂದ್ರದ ನಾಯಕರು ಭೇಟಿ ನೀಡಿದ್ದಾರೆ. ಚುನಾವಣಾ ಉಸ್ತುವಾರಿ…

Read More

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ…

Read More

HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….

Read More

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು | Crime News

ತಂಗಿಯನ್ನು ಪ್ರೀತಿಸುತಿದ್ದ ಯುವಕನನ್ನು ಇನ್ನೊವಾ ಕಾರಿನ ಸಮೇತ ಸುಟ್ಟುಹಾಕಿದ ಕಿರಾತಕರು ಸಹೋದರಿಯನ್ನು ಪ್ರೀತಿಸುತಿದ್ದ(love affair) ಯುವಕನನ್ನು ಯುವತಿಯ ಅಣ್ಣ ಹಾಗೂ ಆತನ ಸ್ನೇಹಿತರು ಇನ್ನೋವಾ ಕಾರಿನಲ್ಲಿ ಕರೆದೊಯ್ದು, ಕಾರಿನ ಸಮೇತವೇ ಸುಟ್ಟು ಕೊಂದು ಹಾಕಿರುವ ದುರ್ಘಟನೆ ಶಿವಮೊಗ್ಗದಲ್ಲಿ(Shivamogga) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ಯುವಕವಾಗಿದ್ದಾನೆ. ಶಿಕಾರಿಪುರ(shikaripura) ತಾಲೂಕಿನ ತೊಗರ್ಸಿ(togarsi) ಬಳಿ ಇನ್ನೋವಾ ಕಾರಿನಲ್ಲಿ ಕೂಡಿಹಾಕಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಯುವತಿಯನ್ನು ನೋಡಲು ಯುವಕ ಬಂದಿದ್ದ ಇನೋವಾ(Innova) ಕಾರಿನಲ್ಲೇ ಕೊಲೆಗೈದು ಸುಟ್ಟು…

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 17/03/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸುತ್ತಮುತ್ತಲಿನಲ್ಲಿ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ಗ್ರಾಪಂ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್…

Read More

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More

HOSANAGARA | ತಾಲೂಕಿನ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

ಹೊಸನಗರ : ಸಂವಿಧಾನವು ದೇಶದ ಬೆನ್ನೆಲುಬು, ಅದನ್ನು ಅರಿಯುವುದು ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಡಿಯಲ್ಲಿ ನಡೆಯಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH)…

Read More