Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು

Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿದ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ.  ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ  ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು…

Read More

Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ   ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ….

Read More

Ripponpete | ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 117ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ…

Read More

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur

14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್‌ ಲಂಗೂರ್‌) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ. ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ…

Read More

Hombuja | ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು

ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು ಹೊಂಬುಜ : ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ, ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ ಹೊಂಬುಜ ಶ್ರೀಕ್ಷೇತ್ರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಆರಾಧನಾ ಪುಣ್ಯಪ್ರದಾಯಿನಿ ಸನ್ನಿಧಿಯಾಗಿದೆ ಎಂದು ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ತಿಳಿಸಿದರು.  ವಾರ್ಷಿಕ ರಥೋತ್ಸವ ಅಂಗವಾಗಿ ‘ಸಿದ್ಧಾಂತಕೀರ್ತಿ’ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುನಿಶ್ರೀಗಳವರು ಜೈನ…

Read More

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…

Read More

hombuja | “ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

“ಆರೋಗ್ಯದಾಯಕ ಪರಿಸರ ಪಸರಿಸಲಿ” –  ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಪ್ರದಾಯದAತೆ ವಾರ್ಷಿಕ ರಥಯಾತ್ರಾ ಮಹೋತ್ಸವದ ಅಂಗವಾಗಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮ ಪೂರ್ವ ಪದ್ಧತಿಯಂತೆ ವಿಶೇಷ ಪೂಜಾವಿಧಿ ನೆರವೇರಿತು.  ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪೂಜಾ ವಿಧಿ-ವಿಧಾನ, ಕಲಿಕುಂಡ ಯಂತ್ರಾರಾಧನೆ ಸಾನಿಧ್ಯ ನೀಡಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

Read More