Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಶಾಸಕ ಬೇಳೂರು ಭೇಟಿ

Ripponpete | ಚೌಡೇಶ್ವರಿ ದೇವಸ್ಥಾನದಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ | ಬೇಳೂರು ಭೇಟಿ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮವು ಶಿವಮೊಗ್ಗದ ವಸಂತಭಟ್ಟರಯ ಮತ್ತು ಸಂಗಡಿಗರ ಪೌರೋಹಿತದಲ್ಲಿ  ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು. ಇಂದು ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಲೋಕಕಲ್ಯಾರ್ಥ  ಚಂಡಿಕಾ ಹೋಮ,ಕಲಾತತ್ವ ಹೋಮಾದಿಗಳು ಪರಿಕಲಶ ಸಹಿತ…

Read More

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು ಆನಂದಪುರ : ಇಲ್ಲಿನ ಕೊರಲಿಕೊಪ್ಪ ಗ್ರಾಮದ ಹೆದ್ದಾರಿಯಲ್ಲಿ ರಸ್ತೆಗೆ ಬಾಗಿರುವ ಬೃಹತ್‌ ಮರವೊಂದು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸಾಧ್ಯತೆಗಳಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೊರಲಿಕೊಪ್ಪದ ಭೂತರಾಯನ ಗುಡಿ ಬಳಿ ಇರುವ ಈ ಮರವು ರಸ್ತೆ ಅರ್ಧ ಬಾಗಿದ್ದು, ಅದರ ಮೇಲೆ ವಿದ್ಯುತ್‌ ಲೈನ್‌ ಕೂಡ ಹಾದುಹೋಗುತ್ತಿದೆ. ನಿನ್ನೆ ಸಂಜೆ ಸುರಿದ ಭಾರಿ ಗಾಳಿ‌ ಮಳೆಗೆ ಮರ ರಸ್ತೆಗೆ ಅಡ್ದಲಾಗಿ ಬಾಗಿದ್ದು ಭಾರಿ…

Read More

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ  ರಿಪ್ಪನ್‌ಪೇಟೆ : ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಪಟ್ಟಣದ ಕಾರು ಚಾಲಕ ನಾಗರಾಜ್ ಶೆಟ್ಟಿಯೇ ಉತ್ತಮ ನಿದರ್ಶನ.  ಕಾರಿನಲ್ಲಿ ಬಿಟ್ಟು ಹೋಗಿದ್ದ ಅಂದಾಜು 80 ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೈಟ್ ನ್ನು (Gold jewelleries) ಕಾರು ಚಾಲಕ (Car Driver) ನಾಗರಾಜ್ ಶೆಟ್ಟಿ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದಾರೆ. ನಾಗರಾಜ್ ಶೆಟ್ಟಿಯವರ ಕಾರನ್ನು ಈಚಲುಕೊಪ್ಪ…

Read More

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು !

Accident | ಬೈಕ್ ಅಪಘಾತ – ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಸಾವು ! ತೀರ್ಥಹಳ್ಳಿ: ಮೃತಪಟ್ಟ ತನ್ನ ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಅಪಘಾತಕ್ಕೆ ಬಲಿಯಾದ ಘಟನೆ ಗುರುವಾರ ಶಿವಮೊಗ್ಗ ಸಮೀಪದ ಹೊಳೆಹೊನ್ನೂರು ಬಳಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುವಾಗ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವು ಕಂಡಿದ್ದು, ಓರ್ವ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ….

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | ಬೆಟ್ಟೆ 56 ಸಾವಿರ ,ಸರಕು 83 ಸಾವಿರ – ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ..!??

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | ಬೆಟ್ಟೆ 56 ಸಾವಿರ ,ಸರಕು 83 ಸಾವಿರ  Arecanut Rate today |Shimoga | Sagara |  Arecanut/ Betelnut/ Supari | Date Apr 18, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ …

Read More

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO

ಮದುವೆಯಾಗುವುದಾಗಿ ಪುಸಲಾಯಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ | POCSO ಅಪ್ರಾಪ್ತ ಬಾಲಕಿಯನ್ನ ಪ್ರೀತಿಸಿ ಮದುವೆಯಾಗಿ ವಂಚಿಸಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬ ತಾಲ್ಲೂಕಿನ ಗ್ರಾಮವೊಂದರ ಯುವಕ ಅದೇ ಗ್ರಾಮದ ನಿವಾಸಿ ಅಪ್ರಾಪ್ತ ಬಾಲಕಿ ಜೊತೆ ಸಖ್ಯ ಬೆಳೆಸಿ ಆಕೆಯನ್ನ ಪ್ರೀತಿಸುವುದಾಗಿ ಪುಸಲಾಯಿಸಿ ನಂತರ ಮದುವೆಯಾಗುವುದಾಗಿ ನಂಬಿಸಿ ಕಾಡಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಅಪ್ರಾಪ್ತ ಬಾಲಕಿಯನ್ನು…

Read More

ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ | A tree fell and traffic was disrupted

ಆನಂದಪುರದ ಸಮೀಪ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ | ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಸಂಚಾರ ಸ್ಥಗಿತ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಮಳೆಯ ಆರ್ಭಟ ಹೆಚ್ಚಾಗಿದ್ದು ಗುಡುಗು ಸಹಿತ ಭಾರಿ ಗಾಳಿ ಮಳೆಯಾಗಿದ್ದು ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಆನಂದಪುರ ಸಮೀಪದ ಮುಂಬಾಳು ಗ್ರಾಮದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನ ಸಂಚಾರ ಅಸ್ಥವ್ಯಸ್ತಗೊಂಡಿದೆ.ಒಂದೂವರೆ ತಾಸಿಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಎರಡೂ ಬದಿ ನೂರಾರು ವಾಹನಗಳು ಸಾಲುಗಟ್ಟಿ ನಿಂತವು ಗಂಟೆಗಟ್ಟಲೆ ಕಾಲ…

Read More

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು

Konanduru | ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಸಂಪಗಾರಿನ ಜಯಂತ್ ಭಟ್ (64) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೋಣಂದೂರಿನಿಂದ ತೊರೆಬೈಲು ಗ್ರಾಮದ ಮನೆಗೆ ಹಿಂದಿರುಗುತಿದ್ದಾಗ ಭಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬೈಕ್ ಮೇಲೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮುಂದಿನ…

Read More

Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಶ್ರೀ ರಾಮಮಂದಿರದಲ್ಲಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಗೆಲುವಿಗೆ ಪ್ರಾರ್ಥಿಸಿ ಹೊಸನಗರ ತಾಲೂಕು ರಿಪ್ಪನ್‌ಪೇಟೆ ಪಟ್ಟಣದ ಶ್ರೀ ರಾಮ ಮಂದಿರದಲ್ಲಿ ಸತ್ಯನಾರಾಯಣ ಪೂಜೆಯೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಪಟ್ಟಣದ ಶ್ರೀ ರಾಮಮಂದಿರದಲ್ಲಿ ರಾಮನವಮಿಯ ಅಂಗವಾಗಿ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಸಂಧರ್ಭದಲ್ಲಿ ವಿಪ್ರ ಬಾಂಧವರು ತಮ್ಮ ಜಿಲ್ಲೆಯ ನೆಚ್ಚಿನ ಲೋಕಸಭಾ ಅಭ್ಯರ್ಥಿಯಾದ ಬಿ ವೈ ರಾಘವೇಂದ್ರ ಅತಿ ಹೆಚ್ಚಿನ…

Read More
Exit mobile version