Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Shivamogga | ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ

ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್…

Read More

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು

Hosanagara | ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹೊಸನಗರ : ತಾಲ್ಲೂಕಿನ ಜಯನಗರದ ಕಲ್ಲುಕೊಪ್ಪ ಗ್ರಾಮದಲ್ಲಿ ಮಹಿಳೆಯೊಬ್ಬರು 20 ಅಡಿ ಆಳದ ಬಾವಿಗೆ ಬಿದ್ದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲುಕೊಪ್ಪ ಗ್ರಾಮದಲ್ಲಿ ನಾಗರತ್ನ ಎಂಬುವವರು ವಾಸದ ಮನೆಯಿಂದ 300 ಮೀಟರ್ ದೂರದಲ್ಲಿ 6 ಅಡಿ ಸುತ್ತಳತೆಯ 20 ಅಡಿ ಆಳದ ಬಾವಿಯಲ್ಲಿ ಬಿದ್ದಿದ್ದು ಅವರು ಮಾನಸಿಕ ಅಸ್ವಸ್ಥರಾಗಿದ್ದು ಬೇರೆ-ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಪ್ರಧವಾಗಿರಲಿಲ್ಲ…

Read More

Hosanagara | ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ

ಜಿಲ್ಲೆಯ ಜನರ ಬಳಿ ಮತ ಕೇಳುವ ನೈತಿಕತೆ ಕಾಂಗ್ರೆಸ್ ಅಭ್ಯರ್ಥಿಗಿಲ್ಲ – ವೀರೇಶ್ ಆಲುವಳ್ಳಿ ಹೊಸನಗರ: 5 ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆಗೆ ತಾವು ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯುತ್ತಿದ್ದೀರಿ ಸುಮಾರು 2 ಲಕ್ಷಕ್ಕಿಂತಲೂ ಹೆಚ್ಚು ಮತಗಳು ತಮಗೆ ಬಂದಿದೆ. ಆ ಎರಡು ಲಕ್ಷ ಜನರಿಗೆ ನೀವು ಕಷ್ಟ-ಸುಖಗಳಿಗೆ ಬಂದು ಸ್ಪಂದಿಸದೇ ಈ ಬಾರಿ ನನಗೆ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಎಂದು ಯಾವ ರೀತಿ ಮತದಾರರ ಬಳಿ ಹೋಗಿ ಮತ ಕೇಳುತ್ತೀರಿ ?…

Read More

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು  ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ. ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ…

Read More

Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ

Hosanagara | ನಾಗೋಡಿ ಚೆಕ್ ಪೋಸ್ಟ್ ನಲ್ಲಿ ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ,ತಂಬಾಕು ಚೀಲ ನಗದು ವಶ ಹೊಸನಗರ : ಶಿವಮೊಗ್ಗ ಲೋಕಸಭಾ ಮತ ಕ್ಷೇತ್ರಗಳ ವ್ಯಾಪ್ತಿಯ ಹೊಸನಗರ ತಾಲೂಕಿನ ನಾಗೋಡಿ ಚೆಕ್‌ ಪೋಸ್ಟ್ ಗಳಲ್ಲಿ ಖಾಸಗಿ ಬಸ್ ದುರ್ಗಶಕ್ತಿ ಕುಂದಾಪುರ ದಿಂದ ಬೆಂಗಳುರಿಗೆ ತೆರಳುವ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು ರೂ. 384000 ಮೌಲ್ಯದ ತಂಬಾಕಿನ ಚೀಲದ ಬ್ಯಾಗ್ ಗಳು ಸೇರಿದಂತೆ 8,010 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್…

Read More

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ

ವಿದ್ಯಾರ್ಥಿಗಳ ತಪ್ಪು ಉತ್ತರಕ್ಕೆ ಪ್ರತಿಫಲ ಶಿಕ್ಷಕನಿಗೆ ದಂಡನೆ…!! ವಿನೂತನ ಪ್ರಯೋಗದಿಂದ ಮಕ್ಕಳನ್ನು ಜಾಣರನ್ನಾಗಿಸಿದ ಶಿಕ್ಷಕರೊಬ್ಬರ ಸ್ಟೋರಿ – ಮಿಸ್ ಮಾಡದೇ ನೋಡಿ ಶಿಕ್ಷೆಯೇ ಶಿಕ್ಷಣದ ಮಾನದಂಡ ಎಂಬಂತೆ ವರ್ತಿಸುವ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಮರುಳಾಗಿ,  ದೂರದಿಂದಲೇ  ಸರ್ಕಾರಿ ಶಾಲೆಗಳ ಕಾರ್ಯವೈಕರಿಯ ಬಗ್ಗೆ ಅಸಡ್ಡೆ ತೋರುವವರೆ ಹೆಚ್ಚು , ಇದಕ್ಕೆ ಅಪವಾದ ಎಂಬಂತೆ ಶಿವಮೊಗ್ಗ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಪುಟ್ಟ ಹಳ್ಳಿಯ ಹಾಲಂದೂರಿನ ಸರ್ಕಾರಿ  ಶಾಲೆ ಸಾಕ್ಷಿಕರಿಸಿದೆ. ಇಲ್ಲಿನ ಶಿಕ್ಷಕ ಗೋಪಾಲ್ ಹೆಚ್. ಎಸ್….

Read More

ಹೊಸನಗರದ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ರೇಡ್ | Lokayukta Raid

ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ರೇಡ್ |  ಹೊಸನಗರ ತಾಲ್ಲೂಕಿನ ಜಯನಗರ ಸಮೀಪದ ಮಣಸಟ್ಟೆ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರವಾರದ ಅಬಕಾರಿ ಅಧಿಕಾರಿ ರೂಪ ಎಂಬುವವರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ.ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ  ಇನ್ನೂ ಹಲವಾರು ಕಡೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುತ್ತಾ ಬಳಿಯ ಮಣಸಟ್ಟೆ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಕುರಿತು ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ…

Read More

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!?? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಿಂದ…

Read More

Ripponpete | ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು ಮಂಜುನಾಥ್

ಅಪ್ಪನಿಗೆ ಅವಮಾನಿಸಿದರು ವಿರೋಧಿಸದ ಮಕ್ಕಳು ಬೇಕಾ – ಅಯನೂರು  ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪನವರು ಮಾತು ಮಾತಿಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ  ಹಗುರವಾಗಿ ಟೀಕಿಸುತ್ತಿದ್ದರೂ ಕೂಡಾ ಅದನ್ನು ಖಂಡಿಸದೇ ಇರುವ ಮಕ್ಕಳು ಬೇಕಾ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಿಮ್ಮ ತಂದೆಯವರಿಗೆ ಹೀಗೆ ಯಾರಾದರೂ ಹೇಳಿದರೆ ಸುಮ್ಮನಿರುತ್ತೀರಾ ಎಂದು ಮಾಧ್ಯಮದವರನ್ನು ಕೇಳಿದ ಅವರು ಅಂತಹ ಜಾಯಾಮಾನ ನಮ್ಮದಲ್ಲ ಎಂದು ಹೇಳುತ್ತಾ ರಾಜ್ಯಾಧ್ಯಕ್ಷ…

Read More

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More