ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು…

Read More

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan

ನಟ ದರ್ಶನ್ ಗೆ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ | Darshan  ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ….

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ. ಇದೀಗ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಬೈಕ್ ಚಲಾಯಿಸಿದ 17 ವರ್ಷದ…

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ

Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಸ್ಥಗಿತಗೊಂಡು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಸಾರ ಮಾಡಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಗಮನ ಸೆಳೆಯಲಾಗಿತ್ತು. ಕೂಡಲೇ ಸ್ಪಂದಿಸಿದ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿ…

Read More

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA

ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು  ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…

Read More

Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ

ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು  ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ  ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…

Read More

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.  ಹೊಸನಗರ ಕ್ಷೇತ್ರದಿಂದ…

Read More