ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ  ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ…

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??

ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ ರಿಪ್ಪನ್‌ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ. ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ…

Read More

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸ್ಮಶಾನದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News

ಸ್ಮಶಾನದಲ್ಲಿ ಕುಡುಕ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದಾಗ ಇಬ್ಬರು ಸ್ನೇಹಿತರ ನಡುವೆ ಗಲಾಟೆಯಾಗಿ ಕೊಲೆಯಿಂದ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಗೇಟ್‌ ಸಮೀಪದ ಸ್ಮಶಾನದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜೆ.ಪಿ.ನಗರದ ನಿವಾಸಿ ರಾಜುನಾಯ್ಕ ಎನ್ನಲಾಗಿದೆ. ರಾಜುನಾಯ್ಕ ತನ್ನ ಸ್ನೇಹಿತ ವಿಕ್ರಮ್‌ ಜೊತೆಗೆ ಕಳೆದ ರಾತ್ರಿ ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದ. ಈ ಸಂದರ್ಭ ಯಾವುದೋ ವಿಚಾರವಾಗಿ ಇಬ್ಬರ ನಡುವೆ ಚಿಕ್ಕ ಗಲಾಟೆಯಾಗಿದೆ. ನಂತರ ಮಾತಿಗೆ…

Read More

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ ಸಾಗರ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 790 ಗ್ರಾಂ ಒಣ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ. ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ಪಿ  ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಮತ್ತು …

Read More

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು  ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More