Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ

Shivamogga | ಚರಂಡಿಯ ಸ್ಲ್ಯಾಬ್ ಕುಸಿದು ವ್ಯಕ್ತಿ ಸಾವು – ಅವೈಜ್ಞಾನಿಕ ಕಾಮಗಾರಿಗೆ ಅಮಾಯಕ ಬಲಿ ಶಿವಮೊಗ್ಗದಲ್ಲಿ ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದ ರಸ್ತೆಯೊಂದರಲ್ಲಿ ಚರಂಡಿಗೆ ಹಾಕಲಾಗಿದ್ದ ಸ್ಲ್ಯಾಬ್​ ಕುಸಿದು ಮುತ್ತಪ್ಪ (45)  ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ.  ಮೃತ ವ್ಯಕ್ತಿ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿಯಾಗಿದ್ದಾರೆ. ಗುಜರಿ ವ್ಯಾಪಾರ ಮಾಡುತ್ತಿದ್ದ ಮುತ್ತಪ್ಪ ಮೂತ್ರ ವಿಸರ್ಜಿಸುತ್ತಿದ್ದ ವೇಳೆಯಲ್ಲಿ ದಿಡೀರ್ ಸ್ಲ್ಯಾಬ್​ ಕುಸಿದಿದೆ. ಪರಿಣಾಮ ಅವರು ಚರಂಡಿಗೆ ಬಿದ್ದಿದ್ದಾರೆ.ಸುಮಾರು ಹತ್ತು ಅಡಿ…

Read More

Ripponpete | ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ

ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ  ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ  ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಚಿಗುರು ತಂಡದ  ವಿದ್ಯಾರ್ಥಿಗಳು  ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ, ಇಂದು ಗವಟೂರು ಗ್ರಾಮದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕೃಷಿ ಅರಣ್ಯ ಎಂಬ ವಿಷಯದ ಮೇಲೆ ಗುಂಪು ಚರ್ಚೆಯನ್ನು ನಡೆಸಿದರು. ಈ ಗುಂಪು ಚರ್ಚೆಯಲ್ಲಿ ‘ಕೃಷಿ ಅರಣ್ಯವು ಒಂದು ಭೂ ಬಳಕೆ ಪದ್ಧತಿಯಾಗಿದೆ, ಕೃಷಿ…

Read More

ರಿಪ್ಪನ್‌ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು | GKB

ರಿಪ್ಪನ್ ಪೇಟೆ – ಆನಂದಪುರ ಪೊಲೀಸ್ ಠಾಣೆಗಳಿಗೆ ನೂತನ ವಾಹನವನ್ನು ಹಸ್ತಾಂತರಿಸಿದ : ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ರಿಪ್ಪನ್‌ಪೇಟೆ –ಆನಂದಪುರ ಪೊಲೀಸ್‌ಠಾಣೆಗೆ ಪೊಲೀಸ್ ಇಲಾಖೆಯ ವಾಹನವನ್ನು ಸಾಗರ -ಹೊಸನಗರ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ಎರಡು ಠಾಣೆಗಳಿಗೆ ಸುಸಜ್ಜಿತವಾದ ವಾಹನಗಳನ್ನು  ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಎಸ್.ಪಿ.ಭೂಮರೆಡ್ಡಿ ಯವರಿಗೆ ವಾಹನದ ಬೀಗವನ್ನು ನೀಡಿದರು. ನಂತರ ಮಾತನಾಡಿದ ಶಾಸಕ ಹಾಗೂ ರಾಜ್ಯ ಆರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ ಬೆಂಗಳೂರು – ದೊಡ್ಮನೆ ಆಟಕ್ಕೆ ಅಂತ್ಯ ಬಿದ್ದಿದೆ . ಬಿಗ್ ಬಾಸ್(Big Boss) ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಇದೀಗ ಬಿಗ್ ಬಾಸ್ ಟ್ರೋಫಿಯನ್ನು ಕಾರ್ತಿಕ್ ಮಹೇಶ್ ಎತ್ತಿ ಹಿಡಿದಿದ್ದಾರೆ. ರನ್ನರ್ ಅಪ್ ಸ್ಥಾನವನ್ನು ಡ್ರೋನ್ ಪ್ರತಾಪ್ ಪಡೆದಿದ್ದಾರೆ. ಕಡೆಯದಾಗಿ ಕಿಚ್ಚನ ಕೈಯಲ್ಲಿ ಕಾರ್ತಿಕ್ ಹಾಗೂ ಪ್ರತಾಪ್(Drone Prathap) ಕೈ ಇತ್ತು. ಬಾರಿ ಜನರ…

Read More

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಕ್ರೀಡಾಕೂಟಗಳು ಮಾನಸಿಕ ಹಾಗೂ ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ: ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ :ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಯುವಜನರು ಆಟೋಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಶ್ಚಟಗಳಿಂದ ದೂರ ಇರಬೇಕೆಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಎಲೆವನ್ ಸ್ಟಾರ್ಸ್ ಕ್ರಿಕೆಟ್ ಕ್ಲಬ್ ಶನಿವಾರ ಆಯೋಜಿಸಿದ್ದ ರಿಪಬ್ಲಿಕ್ ಕಪ್ – 2024 ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿ ಆಧುನಿಕ…

Read More

Hosanagara | ತಾಲೂಕ್ ಬಿಜೆಪಿ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ

Hosanagara | ತಾಲೂಕ್ ಬಿಜೆ ಅಧ್ಯಕ್ಷರಾಗಿ ಮತ್ತಿಮನೆ ಸುಬ್ರಹ್ಮಣ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗಾರ್ಜುನ ಸ್ವಾಮಿ ನೇಮಕ ಹೊಸನಗರ ತಾಲೂಕಿನ ಬಿಜೆಪಿ ತಾಲೂಕ್ ಅಧ್ಯಕ್ಷರನ್ನಾಗಿ ಮತ್ತಿಮನೆ ಸುಬ್ರಹ್ಮಣ್ಯ ರವರನ್ನು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನಾಗಾರ್ಜುನಸ್ವಾಮಿ ,ಸತೀಶ್ ಕಾಲಸಸಿ ರವರನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಎದುರಾಗಿತ್ತು ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ,ರಿಪ್ಪನ್‌ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್, ಸುರೇಶ್ ಸ್ವಾಮಿರಾವ್ ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿದ್ದವು. ಇಂದು ಜಿಲ್ಲೆಯ…

Read More

Shivamogga | ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ವರ್ಗಾವಣೆ ,ನೂತನ ಜಿಲ್ಲಾಧಿಕಾರಿ ಯಾರು ಗೊತ್ತಾ.? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಱ್ ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅವರನ್ನು ನೇಮಿಸಲಾಗಿದೆ. ಡಾ.ಸೆಲ್ವಮಣಿ ಅವರನ್ನು ಬೆಂಗಳೂರಿನ ಸೆಂಟರ್‌ ಫಾರ್‌ ಇ ಗವರ್‌ನೆನ್ಸ್‌ನ ಸಿಇಒ ಆಗಿ ನೇಮಿಸಲಾಗಿದೆ. 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ…

Read More

Ripponpete | ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು

ಚತುಷ್ಪಥ ರಸೆ ಕಾಮಗಾರಿ ಹಣವಿಲ್ಲದೇ ಕುಂಠಿತವಾಗಿತ್ತು – ವಿಶೇಷ ಆಸಕ್ತಿಯಿಂದ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಕಾಮಗಾರಿ ಶೀಘ್ರ ಮುಗಿಸುವಂತೆ ಸೂಚಿಸಿದ್ದೇನೆ – ಶಾಸಕ ಬೇಳೂರು ಸುಮಾರು 5.50 ಕೋಟಿ ರೂ. ವೆಚ್ಚದಲ್ಲಿ ರಿಪ್ಪನ್‌ಪೇಟೆಯ ಸಾಗರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವೀಕ್ಷಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಪಟ್ಟಣದ ನಾಗರೀಕರ ಬಹುದಿನಗಳ ಬೇಡಿಕೆಯ ಚತುಷ್ಫಥ ರಸ್ತೆ…

Read More

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು

Hosanagara | ಬೈಕ್ ಮತ್ತು ನೀರಿನ ಟ್ಯಾಂಕರ್ ನಡುವೆ ಡಿಕ್ಕಿ – ಬೈಕ್ ಸವಾರ ಸಾವು ಬೈಕ್ ಸವಾರನ ಮೇಲೆ ಹರಿದ ಟ್ರ್ಯಾಕ್ಟರ್ ಹರಿದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಗರದ ಬಳಿ ರಾಷ್ಟ್ರೀಯ ಹೆದ್ದಾರಿ 766 ಸಿ ಚಾಲುಕ್ಯ ಹೋಟೆಲ್ ಮುಂಭಾಗದಲ್ಲಿ ಮತ್ತಿಮನೆ ಬ್ರಾಹ್ಮಣ ತರುವೆಯಿಂದ ಹೊಸನಗರಕ್ಕೆ ಬರುತ್ತಿದ್ದ ಹರೀಶ್ (24) ಸಾವನ್ನಪ್ಪಿದ ಸವಾರ. ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದ ನೀರಿನ ಟ್ಯಾಂಕ್‌ನ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದ ಆತನ ಮೇಲೆ…

Read More