Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ

SAGARA | ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ – ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಸಾಗರ ಪೊಲೀಸ್ ಠಾಣೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಮಹಿಳಾ ಸಿಬ್ಬಂದಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಭಾವುಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಪೊಲೀಸ್ ಸ್ಟೇಷನ್ ಸಾಕ್ಷಿಯಾಯಿತು. ಮಹಿಳಾ ಪೊಲೀಸ್ ಸಿಬ್ಬಂದಿ ರೇಖಾ ರವರಿಗೆ ಠಾಣೆಯ ಸಹ ಸಿಬ್ಬಂದಿಗಳು ಹಾಗೂ ಹಿರಿಯ ಅಧಿಕಾರಿಗಳು ಸೀಮಂತ ಕಾರ್ಯ ಮಾಡುವ ಮೂಲಕ…

Read More

Ripponpete | ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸುರೇಶ್ ನಿಧನ

ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ನಿಧನ ರಿಪ್ಪನ್‌ಪೇಟೆ : ಇಲ್ಲಿನ ಬರುವೆ ಗ್ರಾಮದ ನಿವಾಸಿ ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸುರೇಶ್ (೬೧) ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದ್ದಾರೆ. ಮೃತರು ಪತ್ನಿ ,ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Read More

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested ಮನೆ ಹಿತ್ತಲಲ್ಲಿ ಗಾಂಜಾ ಕೃಷಿ ಮಾಡ್ತಿದ್ದ ಆರೋಪಿಯನ್ನು ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಬಂಧಿಸಿದ್ದಾರೆ.  ಮರಾಠಿಕ್ಯಾಂಪ್​ನ ಯುವಕನನ್ನ ಅರೆಸ್ಟ್​ ಮಾಡಿದ್ದ ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಇದೀಗ ಮನೆ ಹಿತ್ತಲಲ್ಲಿ ಗಾಂಜಾ ಬೆಳದಿದ್ದ ಆರೋಪಿಯನ್ನ ಮಾಲು ಸಮೇತ ಹಿಡಿದ್ದಿದ್ದಾರೆ.   ದಿನಾಂಕ  28-12-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ವಾಸಿ ನಜರತ್ ನು ತನ್ನ ಮನೆಯ ಹಿಂಬದಿ ಜಾಗದಲ್ಲಿ ಮಾದಕ ವಸ್ತು ಗಾಂಜಾ ಗಿಡಗಳನ್ನ…

Read More

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..!| Postman Exclusive

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..! ನಗುತೈತೆ ದೈವ ಅಲ್ಲಿ – ಅಳುತೈತೆ ಹಿರಿಯ ಜೀವ ಇಲ್ಲಿ….!!!ವಿಧಿಯಾಟ ಬಲ್ಲವರು ಯಾರು..??? ರಿಪ್ಪನ್‌ಪೇಟೆ : ಪ್ರತಿಯೊಬ್ಬರ ಬಾಳಲ್ಲಿ ವಿಧಿ ಎಂಬ ಕ್ರೂರಿ ಹೇಗೆಲ್ಲ ಆಟವಾಡುತ್ತದೆ ಎಂಬುವುದಕ್ಕೆ ಪಟ್ಟಣದ ಸಮೀಪದ ವಡಗೆರೆ ಶಾಲೆಯ ಮುಂಭಾಗ ಗುರುವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನ ಕಥೆಯೇ ಸ್ಪಷ್ಟ ಉದಾಹರಣೆ, ಯುವಕನ ಕುಟುಂಬದ ಕಥೆಯನ್ನು ನೀವೊಮ್ಮೆ ಕೇಳಿದ್ರೆ ನಿಮ್ಮ ಕಣ್ಣಂಚಲ್ಲಿ ಕಣ್ಣೀರು ಬರದೇ ಇರದು. ಬೈಕ್ ಅಪಘಾತದಲ್ಲಿ…

Read More

Ripponpete | ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಹಿರಿದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೊರಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ…

Read More

Ripponpete | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ

Ripponpete | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ದಯನೀಯ ಪರಿಸ್ಥಿತಿಯಲ್ಲಿದೆ. ಈ ಶಾಲೆಗಳನ್ನು ಉಳಿಸುವುದರೊಂದಿಗೆ, ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಸಿವಿಲ್ ಇಂಜಿನಿಯರ್ ರಾಘವೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು. ಹೊಸನಗರ ತಾಲೂಕಿನ ನೇರಲಮನೆ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಶಾಲೆಯ ಅಭಿಮಾನ,  ಸುಣ್ಣ ಬಣ್ಣದ ಅಭಿಯಾನ  ಕಾರ್ಯಕ್ರಮಕ್ಕೆ ಗೋಡೆಗೆ ಬಣ್ಣ ಹೊಡೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಇಂದಿನ…

Read More

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ

Hosanagara | ಕೊಡಚಾದ್ರಿ ಚಿಟ್ ಫಂಡ್ ನೌಕರರಿಂದ ವ್ಯಕ್ತಿಯ ಮೇಲೆ ಹಲ್ಲೆ – ಹೊಸನಗರದಲ್ಲೊಂದು ಕಾರ್ಪೊರೇಟ್ ರೌಡಿಸಂ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ನೌಕರರು ಚೀಟಿ ಹಾಕಲ್ಲ ಎಂದ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಲು ಮುಂದಾಗಿರುವ ಘಟನೆ ನಡೆದಿದೆ. ಹೊಸನಗರ ನ್ಯಾಯಲಯದ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು ಚೀಟಿ ಹಾಕಲ್ಲ ಎಂದವನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ಹಿನ್ನಲೆ : ಹೊಸನಗರದ ಪ್ರತಿಷ್ಠಿತ ಕೊಡಚಾದ್ರಿ ಚಿಟ್ ಫಂಡ್ ಕಂಪನಿಯ ಏಜೆಂಟ್…

Read More

ಹೊಸ ವರ್ಷದ ಹೊಸ್ತಿಲಿನಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ | New Year

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…

Read More

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿದ್ದ ಕಾರನ್ನು ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಆವಿನಹಳ್ಳಿ ಸಮೀಪದ ಕುರುವಂತೆ ಗ್ರಾಮದ ನವೀನ್ ಕುಮಾರ್ ಇಂದು ಸಂಜೆ ವಡಗೆರೆ ಶಾಲೆ ಮುಂಭಾಗದಲ್ಲಿ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಆದರೆ ಅಪಘಾತ…

Read More

Ripponpete | ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು

ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಆವಿನಹಳ್ಳಿ ಸಮೀಪದ ಗುರುವಂತೆ ಗ್ರಾಮದ ನವೀನ್ ಕುಮಾರ್ ಜಿ ಕೆ ಎಂದು ಆತನ ಡ್ರೈವಿಂಗ್ ಲೈಸೆನ್ಸ್ ಆಧಾರದ ಮೇಲೆ ಗುರುತಿಸಲಾಗಿದೆ. ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡು ರಸ್ತೆಯಲ್ಲಿ ಅಪಘಾತವಾಗಿ ಯುವಕನ ತಲೆ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ….

Read More
Exit mobile version