Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read More

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ ಹೊಸನಗರ ತಾಲ್ಲೂಕು ಒಕ್ಕಲಿಗ ಸಂಘ ರಿಪ್ಪನ್‌ಪೇಟೆ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಂ.ಬಿ.ಲಕ್ಷ್ಮಣಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಘದಲ್ಲಿ ತಮಮ್ ಹಿಡಿತವನ್ನು ಸಾಧಿಸಿದ್ದಾರೆ. ಭಾನುವಾರ ರಿಪ್ಪನ್‌ಪೇಟೆಯ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ 2 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿ 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎಂ.ಬಿ.ಲಕ್ಷ್ಮಣ ಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು …

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ   ಹೊಸನಗರ(Hosanagara): ಪಟ್ಟಣದದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಸ್‌ಡಿಎಂಸಿ ಅಧ್ಯಕ್ಷರು ಎಸ್‌ಡಿಎಂಸಿ ಸದಸ್ಯ ನೇರಲೆ ರಮೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆಂದು ಖಂಡಿಸಿ ತಾಲ್ಲೂಕು ಬಿಜೆಪಿ ಮುಖಂಡರು, ಜೇಸಿಐ ಮತ್ತು ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಮಕ್ಕಳ ಪೋಷಕ ವರ್ಗದವರು ಬಸ್ ನಿಲ್ದಾಣದ ಆವರಣದಿಂದ ಶಾಲೆಯ…

Read More

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…

Read More

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga  ಕಾಂಗ್ರೆಸ್‌ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ  ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….

Read More

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…

Read More

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ | Crime News

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಎಚ್‌ಎಂ ಟಿಂಬರ್ ಆಯಂಡ್ ಫರ್ನಿಚ‌ರ್ ಅಂಗಡಿ ಹಿಂಭಾಗದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆ ಸಂಬಂಧ ಆರೋಪಿ ಮೋಮಿನ್‌ ಎಂಬಾತನನ್ನು ಬಂಧಿಸಿದ ಪೊಲೀಸರು. ಹಿಂದೂ ಸಂಘಟನೆ ಕಾರ್ಯಕರ್ತ ಅರಳಿಹಳ್ಳಿ ದೇವರಾಜ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ರಾಶಿ ರಾಶಿ ಗೋವಿನ ಮೂಳೆ ಪತ್ತೆ ಮಾಡಿದ್ದಾರೆ….

Read More

Ripponpete | ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು – ಧರ್ಮಗುರು ರೋಮನ್ ಪಿಂಟೋ

ಮನುಷ್ಯ ಮನುಷ್ಯನನ್ನ ಪ್ರೀತಿಸಬೇಕು ಮತ್ತು ಗೌರವಿಸಬೇಕು  – ಧರ್ಮಗುರು ರೋಮನ್ ಪಿಂಟೋ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು ಮತ್ತು ಗೌರವಿಸಬೇಕು,ಪ್ರೀತಿ ಮತ್ತು ಕ್ಷಮೆಯಿಂದ ಜಗತ್ತನ್ನೇ ಗೆಲ್ಲಬಹುದು ಎಂದು ತೋರಿಸಿಕೊಟ್ಟ ಪ್ರಭು ಏಸು ಸ್ವಾಮಿಯವರ ಶುಭ ಸಂದೇಶ ಇಂದಿಗೂ ಪ್ರಸ್ತುತ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ  ಧರ್ಮಗುರು ರೋಮನ್  ಪಿಂಟೋ ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ ವಾರ್ಷಿಕ ಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಶುಭ ಸಂದೇಶವನ್ನು ನೀಡಿದ…

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!?? ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ…

Read More
Exit mobile version